ರಸ್ತೆ ಪಕ್ಕ ಭೂಕುಸಿತ: ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ವಾಹನ ಸಂಚಾರ ನಿಷೇಧ
Team Udayavani, Jul 16, 2022, 7:59 PM IST
ಕಾರವಾರ: ಹೊನ್ನಾವರ – ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿ 69 ರಲ್ಲಿ (ಕಿ.ಮೀ.39.8 ರಲ್ಲಿ)ಸೂಳೆ ಮುರ್ಕಿ ತಿರುವಿನ ಬಳಿ ರಸ್ತೆ ಪಕ್ಕ ಭೂಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತ ದೃಷ್ಟಿಯಿಂದ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಶನಿವಾರ ಸತತವಾಗಿ ಸುರಿದ ಮಳೆಯ ಕಾರಣ , ಭೂಕುಸಿತವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಬೇಕಾಗಿದೆ. ಹೊನ್ನಾವರ ಗೇರುಸೊಪ್ಪ ಮಾರ್ಗವಾಗಿ ಶಿವಮೊಗ್ಗಗೆ ತೆರಳುವ ಬಸ್ಸುಗಳು ಹೊನ್ನಾವರ- ಚಂದಾವರ – ಕುಮಟಾ ಬಡಾಳ -ಸಿದ್ದಾಪುರ ಅಥವಾ ಕುಮಟಾ, ಕತಗಾಲ, ಶಿರಸಿ ಮಾರ್ಗವಾಗಿ ಚಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿ, ಆದೇಶ ಹೊರಡಿಸಿದ್ದಾರೆ.
ಸಂಭವಿಸಿದ ಗುಡ್ಡ ಕುಸಿತದ ಸ್ಥಳ ಕ್ಕೆ ಸಿದ್ದಾಪುರ ಪೊಲೀಸ್ ಇನ್ಸ್ ಪೆಕ್ಟರ್ ಕುಮಾರ್, ಪಿಎಸ್ ಐ ಮಹಾಂತೇಶ್ ಕುಂಬಾರ ಹಾಗೂ ಪೊಲೀಸ್ ಸಿಬ್ಬಂದಿಗಳು ಧಾವಿಸಿದ್ದು ಅಲ್ಲಿ ಅಗತ್ಯ ಕಾರ್ಯಗಳನ್ನು ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.