![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 20, 2024, 6:30 PM IST
ದಾಂಡೇಲಿ : ರಾಷ್ಟ್ರದ ಸಮಗ್ರ ಅಭಿವೃದ್ಧಿಯನ್ನೇ ಮೊದಲ ಗುರಿಯಾಗಿಸಿಕೊಂಡಿರುವ ಪಕ್ಷ ಬಿಜೆಪಿ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಈ ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ.
ಬಿಜೆಪಿ ಪಕ್ಷದ ಆಶಯದಂತೆ ಸದೃಢ ರಾಷ್ಟ್ರ ನಿರ್ಮಾಣದ ಸಂಕಲ್ಪವನ್ನು ತೊಟ್ಟು ಕೇಂದ್ರ ಸರಕಾರ ಆಡಳಿತವನ್ನು ನಡೆಸುತ್ತಿದೆ. ಇಂದು ಜಾಗತಿಕ ಮಟ್ಟದಲ್ಲಿ ಬಿಜೆಪಿ ಪಕ್ಷ ತನ್ನದೇ ಆದ ಛಾಪನ್ನು ಮೂಡಿಸಿದೆ. ಇದೀಗ ಪಕ್ಷವು ಸದಸ್ಯತ್ವ ಅಭಿಯಾನವನ್ನು ರಾಷ್ಟ್ರವ್ಯಾಪಿ ಹಮ್ಮಿಕೊಂಡಿದ್ದು, ಪಕ್ಷದ ಮುಖಂಡರಾದಿಯಾಗಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ದಾಖಲೆಯ ಪ್ರಮಾಣದಲ್ಲಿ ಬಿಜೆಪಿ ಸದಸ್ಯತ್ವವನ್ನು ಮಾಡಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಅವರು ಹೇಳಿದರು.
ಅವರು ಶುಕ್ರವಾರ ನಗರದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಸುನೀಲ್ ಹೆಗಡೆಯವರು ಅತಿ ಹೆಚ್ಚು ಜನರನ್ನು ಪಕ್ಷದ ಸದಸ್ಯರನ್ನಾಗಿಸುವ ಮೂಲಕ ಒಂದು ಇತಿಹಾಸವನ್ನು ನಿರ್ಮಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಂಕಣಬದ್ಧರಾಗಿ ಶ್ರಮಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಘಟಕದ ಅಧ್ಯಕ್ಷರಾದ ಬುದವಂತಗೌಡ ಪಾಟೀಲ್, ಮಂಡಲದ ಖಾಯಂ ಆಹ್ವಾನಿತರಾದ ರೋಶನ್ ನೇತ್ರಾವಳಿ, ಸುಧಾಕರ್ ರೆಡ್ಡಿ, ಪಕ್ಷದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಕಾಂತ್ ಕ್ಷೀರಸಾಗರ್, ಉಪಾಧ್ಯಕ್ಷರಾದ ಗುರು ಮಠಪತಿ, ಸುಭಾಷ್ ಅರ್ವೇಕರ್ , ಪ್ರಧಾನ ಕಾರ್ಯದರ್ಶಿಗಳಾದ ಮಿಥುನ ನಾಯಕ, ಗಿರೀಶ್ ಟೋಸುರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಚನ್ನಬಸಪ್ಪ ಮುರುಗೋಡ, ಪ್ರಶಾಂತ್ ಬಸೂರ್ತೇಕರ್, ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಗೀತಾ ಶಿಕಾರಿಪುರ, ಪಕ್ಷದ ಓಬಿಸಿ ಮೋರ್ಚಾ ಅಧ್ಯಕ್ಷರಾದ ರವಿ ಗಾಂವಕರ, ಮಹಿಳಾ ಮೋರ್ಚಾದ ಅಧ್ಯಕ್ಷೆಜಯಶ್ರೀ ನೇಮತಿ, ಪಕ್ಷದ ಪ್ರಮುಖರಾದ ದೇವಕ್ಕ ಕೆರೆಮನೆ ಹನುಮಂತ ಕಾರ್ಗಿ, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಸದಸ್ಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.