ವಿಜ್ಞಾನ ನಾಟಕ ಸ್ಪರ್ಧೆ: ದಕ್ಷಿಣ ಭಾರತ ಮಟ್ಟಕ್ಕೆ ಮಾರಿಕಾಂಬಾ ಪ್ರೌಢ ಶಾಲೆ ಆಯ್ಕೆ


Team Udayavani, Oct 20, 2022, 10:40 PM IST

1-asdsdsd

ಶಿರಸಿ: ಬೆಂಗಳೂರಿನಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಪಾಲ್ಗೊಂಡ ಇಲ್ಲಿನ ಮಾರಿಕಾಂಬಾ ಪ್ರೌಢಶಾಲಾ ಮಕ್ಕಳ ಒಂದು ಲಸಿಕೆಯ ಕಥೆ ನಾಟಕ ರಾಜ್ಯ‌ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಗೊಂಡಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದ ಡಯಟ್ ನಲ್ಲಿ ನಡೆದ ರಾಜ್ಯ‌ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ರಾಜ್ಯದ ಒಟ್ಟೂ ಆರು ವಿಭಾಗದಿಂದ ತಂಡಗಳು ಭಾಗವಹಿಸಿದ್ದವು. ಶಿರಸಿ ಶೈಕ್ಷಣಿಕ ಜಿಲ್ಲೆಯಿಂದ ಆಯ್ಕೆಗೊಂಡು ವಿಭಾಗ‌ಮಟ್ಟಕ್ಕೆ, ಬೆಳಗಾವಿ ವಿಭಾಗ ಮಟ್ಟದಿಂದ ರಾಜ್ಯ ಮಟ್ಟದ ಸ್ಪರ್ಧೆಗೆ ಮಾರಿಕಾಂಬಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಈ ಹಿಂದೆ ಆಯ್ಕೆ ಆಗಿದ್ದರು.

ಸಾಂಕ್ರಾಮಿಕ ರೋಗಗಳ ವಿರುದ್ಧದಲ್ಲಿ ಕೆಲಸ‌ ಮಾಡುವ ಲಸಿಕೆಗಳ ಹುಟ್ಟು, ಅವುಗಳ ಬೆಳವಣಿಗೆ, ಜನರ ವಿರೋಧ ಇದ್ದರೂ ಅದನ್ನು ಎದುರಿಸಿ ಜನತೆಯ ಆರೋಗ್ಯ ರಕ್ಷಣೆಗೆ ಕಟಿಬದ್ಧರಾದ ವಿಜ್ಞಾನಿಗಳು ಹಾಗೂ ಅವರು ನೀಡಿದ ಕೊಡುಗೆಯ ಕುರಿತಾದ ಚಿತ್ರಣವನ್ನು ಹೊಂದಿದ ಒಂದು‌ ಲಸಿಕೆಯ ಕಥೆ ಮೂವತ್ತು‌ ನಿಮಿಷದಲ್ಲಿ ಶತಮಾನದ ಒಟ್ಟೂ ಸಾಧನೆ ಬಿಚ್ಚಿಟ್ಟಿವೆ ಎಂಬುದು ತೀರ್ಪುಗಾರರ ಮೆಚ್ಚುಗೆಗೆ ಕಾರಣವಾಗಿದೆ.
ಇಡೀ ನಾಟಕದಲ್ಲಿ ವಿಜ್ಞಾನದ ಸಂಗತಿಯನ್ನು ಮನೋಜ್ಞವಾಗಿ ತೆರೆದಿಟ್ಟ ಬಗೆ ಹಾಗೂ ವಿದ್ಯಾರ್ಥಿಗಳ ಭಾವಪೂರ್ಣ ಲವಲವಿಕೆಯ ಅಭಿನಯವು ಪ್ರೇಕ್ಷಕರ ಮನಗೆಲ್ಲಿಸಿ ಪ್ರಥಮ ಸ್ಥಾನ ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾದವು.

ಈ ನಾಟಕದಲ್ಲಿ ತುಳಸಿ ಹೆಗಡೆ, ಎಂ.ವಿ ಶ್ರೇಯಾ, ಸ್ಪಂದನಾ ಭಟ್ಟ, ಜಯಶ್ರೀ ಭಟ್ಟ, ನವ್ಯಾ ಹೆಗಡೆ, ಶ್ರೀಜಾ ಭಟ್ಟ, ಮಾನ್ಯ ಹೆಗಡೆ, ಕಿಶನ್ ಕುಮಾರ ಹೆಗಡೆ , ದರ್ಶನ್ ಎಸ್. ಭಟ್, ಪ್ರತ್ವಿಕ್ ಮೋಹನದಾಸ ನಾಯಕ ಅಚ್ಚುಕಟ್ಟಾಗಿ ನಿರ್ವಹಿಸಿ ನಾಟಕ ಪರಿಣಾಮಕಾರಿಯಾಗಿಸಿದರು. ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮಾರಿಕಾಂಬಾದ‌ ಕನ್ನಡ ಭಾಷಾ ಶಿಕ್ಷಕ ನಾರಾಯಣ ಭಾಗ್ವತ್ ನಿರ್ದೇಶನದ ನಾಟಕಕ್ಕೆ ವಿಜ್ಞಾನ ಶಿಕ್ಷಕಿ ಜಯಲಕ್ಷ್ಮೀ ಗುನಗಾ ಅಚ್ಚುಕಟ್ಟಾಗಿ ನಿರ್ವಹಣೆ ನಡೆಸಿದ್ದರು. ಆಂಗ್ಲಾ ಭಾಷಾ ಶಿಕ್ಷಕ ಧರ್ಮಾನಂದ ಭಟ್ಟ ಸಹಕಾರ ನೀಡಿದರು.

ದಕ್ಷಿಣ ಭಾರತ‌ ಮಟ್ಟದಲ್ಲಿ ಒಟ್ಟೂ ಏಳು ರಾಜ್ಯಗಳಿಂದ ಹದಿನಾಲ್ಕು ತಂಡಗಳು ಡಿಸೆಂಬರ್ 1, 2 ರಂದು ಬೆಂಗಳೂರಿನಲ್ಲಿ ಸ್ಪರ್ಧೆ ನೀಡಲಿವೆ.
ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆ ಆದ ಮಾರಿಕಾಂಬಾದ ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಡಿಡಿಪಿಐ ಬಸವರಾಜು, ಬಿಇಓ ಎಂ.ಎಸ್.ಹೆಗಡೆ, ಮಾರಿಕಾಂಬಾ ಪ್ರೌಢಶಾಲೆಯ ಪ್ರಭಾರಿ‌ ಮುಖ್ಯ ಶಿಕ್ಷಕ ಆರ್.ವಿ.ನಾಯ್ಕ, ಶಾಲಾಭಿವೃದ್ದಿ ಸಮಿತಿ ಪದಾಧಿಕಾರಿಗಳು, ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.