ಸಿಐಟಿಯು ಹಿರಿಯ ಮುಖಂಡ ಆರ್.ಎಂ. ಮುಲ್ಲಾ ನಿಧನ
Team Udayavani, Jul 30, 2023, 5:24 PM IST
ಹಳಿಯಾಳ : ಜಿಲ್ಲೆಯ ಸಿಐಟಿಯು ಹಿರಿಯ ಮುಖಂಡರಾದ ತಾಲ್ಲೂಕಿನ ಹವಗಿ ಗ್ರಾಮದ ನಿವಾಸಿ ಆರ್.ಎಂ.ಮುಲ್ಲಾ(77) ಅವರು ಇಂದು ವಿಧಿವಶರಾದರು.
ರಾಜೇಸಾಬ ಮುಲ್ಲಾ ಅವರು ಹವಗಿ ಗ್ರಾಮ ಪಂಚಾಯತ್ ಗುಮಾಸ್ತರಾಗಿ ಸೇವೆ ಸಲ್ಲಿಸಿದ್ದರು. ಸಿಐಟಿಯು ಸಂಘಟನೆಯ ಹಿರಿಯ ಮುಖಂಡರಾಗಿ ಅನೇಕ ಜನಪರ ಹೋರಾಟಗಳನ್ನು ಸಂಘಟಿಸಿದ್ದರು. ಸಿಐಟಿಯು ಸಂಯೋಜಿತ ಗ್ರಾಮ ಪಂಚಾಯತ್ ನೌಕರರ ಸಂಘದ ಉತ್ತರ ಕನ್ನಡ ಜಿಲ್ಲಾ ಸಂಸ್ಥಾಪಕ ಅಧ್ಯಕ್ಷರಾಗಿ ಅನುಪಮ ಸೇವೆಯನ್ನು ಸಲ್ಲಿಸಿದ್ದರು.
ಅಂಗನವಾಡಿ, ಬಿಸಿಯೂಟ ನೌಕರರ ಸಂಘಟನೆ, ಪ್ರಾಂತ ರೈತ ಸಂಘ ಹೀಗೆ ಮೊದಲಾದ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಮುಲ್ಲಾ ಅವರು ದುಡಿಯುವ ವರ್ಗದವರ ಅಭ್ಯುದಯಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಕಮ್ಯುನಿಸ್ಟ್ ಸಂಘಟನೆಯಲ್ಲಿದ್ದರೂ ಸಹ ಹವಗಿ ಗ್ರಾಮದ ಮಾರುತಿ ದೇವಸ್ಥಾನ ಸಮಿತಿಯ ಕಾರ್ಯದರ್ಶಿಯಾಗಿ ಶೃದ್ಧಾ ಭಕ್ತಿಯಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದರು.
ಮೊನ್ನೆ ಮೊನ್ನೆಯವರೆಗೂ ರಾಜ್ಯದ ವಿವಿಧೆಡೆಗಳಲ್ಲಿ ಸಂಘಟನೆ ವತಿಯಿಂದ ಆಯೋಜಿಲಾಗುತ್ತಿದ್ದ ಕಾರ್ಯಾಗಾರಗಳು, ಹೋರಾಟಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುತ್ತಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಮೊಮ್ಮಕ್ಕಳು ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ತಾಲ್ಲೂಕು ಹಾಗೂ ಜಿಲ್ಲೆಯ ಗಣ್ಯರನೇಕರು ಕಂಬನಿ ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.