Bhatkal BJP ಶಾಸಕ ಸುನಿಲ್ ನಾಯ್ಕ ಅವರಿಗೆ ಪಿತೃ ವಿಯೋಗ
ಹಿರಿಯ ಸಹಕಾರಿ ಧುರೀಣ ಬಿಳಿಯಾ ಕುಪ್ಪಾ ನಾಯ್ಕ ವಿಧಿವಶ
Team Udayavani, Apr 12, 2023, 10:44 PM IST
ಭಟ್ಕಳ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ರಾಜಕೀಯದಲ್ಲಿ ಪಳಗಿದ ರಾಜಕಾರಣಿ ಶಿರಾಲಿಯ ಬಿ.ಕೆ. ನಾಯ್ಕ (76) ಅಲ್ಪ ಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿಳೆದಿದ್ದಾರೆ.
ಮೃತರು ಬಹಳ ವರ್ಷಗಳ ಕಾಲ ಇಲ್ಲಿನ ಭಟ್ಕಳ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ (ಪಿಎಲ್ ಡಿ) ಬ್ಯಾಂಕಿನ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದು ನಾಲ್ಕು ಬಾರಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಮಹತ್ತರ ಕಾರ್ಯ ಮಾಡಿದ್ದಾರೆ. ಬಿಳಿಯಾ ಕುಪ್ಪಾ ನಾಯ್ಕ ಅವರು ಅಧ್ಯಕ್ಷರಾಗಿರುವ ಅವಧಿಯಲ್ಲಿಯೇ ಪಿಎಲ್ ಡಿ ಬ್ಯಾಂಕು ನಬಾರ್ಡ್ ರಾಷ್ಟ್ರೀಯ ಪ್ರಶಸ್ತಿಯನ್ನು ಸಹ ಗಳಿಸಿತ್ತು.
ಶಿರಾಲಿ ಗ್ರಾಮ ಪಂಚಾಯತ್‌ಗೆ ಐದು ಬಾರಿ ಆರಿಸಿ ಬಂದಿದ್ದ ಅವರು ಒಂದು ಬಾರಿ ಮಂಡಲ ಪಂಚಾಯತ್ ಪ್ರಧಾನರಾಗಿ ಹಾಗೂ ಎರಡು ಬಾರಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅತ್ಯಂತ ಸರಳ ವ್ಯಕ್ತಿತ್ವದ ಅವರು ಹಲವಾರು ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಮಾವಳ್ಳಿ ಹೋಬಳಿಯ ನಾಮಧಾರಿ ಸಮಾಜದ ಅಧ್ಯಕ್ಷರಾಗಿ ಮೂರು ದಶಕಗಳಿಗೂ ಹೆಚ್ಚು ಕಾಲ ಸಮಾಜಕ್ಕೆ ಉತ್ತಮ ಸೇವೆ ಸಲ್ಲಸಿದ್ದ ಅವರು ಕಳೆದ ವರ್ಷ ಹಳೇಕೋಟೆ ಹನುಮಂತ ದೇವರ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿಯೂ ಕೂಡಾ ಭಾಗಿಯಾಗಿ ತಮ್ಮ ಬಾಬ್ತು ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಪುತ್ರ ಭಟ್ಕಳ ಶಾಸಕ ಸುನಿಲ್ ಬಿ. ನಾಯ್ಕ ಸೇರಿದಂತೆ ಇನ್ನೋರ್ವ ಪುತ್ರ, ಇಬ್ಬರು ಪುತ್ರಿಯರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.