Shiroor Hill Slide:ಈಶ್ವರ ಮಲ್ಪೆ ತಂಡ, ಟಗ್ ಬೋಟ್ ಸಹಾಯದಿಂದ ಕಾರ್ಯಾಚರಣೆ:ಜಿಲ್ಲಾಧಿಕಾರಿ
Team Udayavani, Jul 27, 2024, 11:58 AM IST
ಅಂಕೋಲಾ: ಶಿರೂರು ಗುಡ್ಡ ಕುಸಿತ ಕಾರ್ಯಾಚರಣೆ 12 ದಿನಕ್ಕೆ ಕಾಲಿಟ್ಟಿದ್ದು ನಿರಂತರವಾಗಿ ಕಾರ್ಯಾಚರಣೆ ನಡೆಯುತ್ತಿದ್ದು, ದಿನಕ್ಕೊಂದು ಹೊಸ-ಹೊಸ ತಂತ್ರಜ್ಞಾನ ಬಳಕೆ ಮಾಡಿ ಗಂಗಾವಳಿ ನದಿಯಲ್ಲಿ ಹುಡುಕಾಟ ನಡೆಯುತ್ತಿದೆ.
ಜು.27ರ ಶನಿವಾರ ಕಾರ್ಯಾಚರಣೆಗೆ ಮುಳುಗುತಜ್ಞ ಈಶ್ವರ ಮಲ್ಪೆ ತಂಡ ಮತ್ತು ಟಗ್ ಬೋಟ್ ಸಹಾಯದಿಂದ ಕಾರ್ಯಾಚರಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಮಾಹಿತಿ ನೀಡಿದ್ದಾರೆ.
ಮುಂಜಾನೆ ಕಾರ್ಯಾಚರಣೆ ಆರಂಭಕ್ಕೂ ಮುನ್ನ ಮಾಧ್ಯಮಕ್ಕೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಈಗಾಗಲೇ ದೆಹಲಿಯ ನಿವೃತ್ತ ಮೇಜರ್ ಜನರಲ್ ಇಂದ್ರಬಾಲನ್ ಮತ್ತು ನೌಕಾದಳ, ಸೇನೆಯ ಮಾಹಿತಿ ಕಲೆ ಹಾಕಿ ಲೋಹದ ಅಂಶ ಇರುವ ನಾಲ್ಕು ಸ್ಥಳ ಗುರುತಿಸಿ ಅಲ್ಲಿ ಮುಳುಗು ತಜ್ಞರಿಂದ ಕಾರ್ಯಾಚರಣೆ ನಡೆಯಲಿದೆ. ಮಧ್ಯಾಹ್ನದ ಹೊತ್ತಿಗೆ ಟಗ್ ಬೋಟ್ ಸ್ಥಳಕ್ಕೆ ಆಗಮಿಸಲಿದ್ದು, ಆ ನಂತರ ಕಾರ್ಯಾಚರಣೆ ಆರಂಭ ಮಾಡಲಾಗುವುದು ಎಂದರು.
ಕೇರಳ ರಾಜ್ಯದ ಸಚಿವರ ಮತ್ತು ಶಾಸಕರ ದಂಡು ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಜು.27ರ ಶನಿವಾರ ಲೋಕೋಪಯೋಗಿ ಸಚಿವ ರಿಯಾಜ ಅಹ್ಮದ್, ಅರಣ್ಯ ಇಲಾಖೆ ಸಚಿವ ಏ.ಕೆ. ಶಶಿಂದ್ರ, ಕಲ್ಲೆಶಿರಿ ಶಾಸಕ ಬಿಜೀನ ಮಂಜೇಶ್ವರ ಶಾಸಕ ಆಶ್ರಪ್, ಕಾರ್ಯಾಚರಣೆ ನಡೆಯುವ ಸ್ಥಳದಲ್ಲಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ಸವಾರ: ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು
Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್
Udupi: ಗಾಜಿನ ಉದ್ಯಮಿ ನಾಪತ್ತೆ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.