ಶಿರಸಿ: ಅರಣ್ಯ ಇಲಾಖೆ ದಿನಗೂಲಿ ನೌಕರರ ಮುಷ್ಕರ


Team Udayavani, Feb 13, 2024, 6:11 PM IST

ಶಿರಸಿ: ಅರಣ್ಯ ಇಲಾಖೆ ದಿನಗೂಲಿ ನೌಕರರ ಮುಷ್ಕರ

ಉದಯವಾಣಿ ಸಮಾಚಾರ
ಶಿರಸಿ: ಜಿಲ್ಲೆಯ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಕಳೆದ 15 ವರ್ಷಗಳಿಂದ ಪಿಸಿಪಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸೇವಾ ಕಾಯಮಾತಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ಇಲ್ಲಿನ ಸಿಸಿಎಫ್‌ ಕಚೇರಿ ಎದುರು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಯಿತು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಚಂದ್ರಶೇಖರ ಹಿರೇಮಠ ಮಾತನಾಡಿ, ಅರಣ್ಯ ಇಲಾಖೆ ಕಾಯಂ ನೌಕರರು ಮಾಡುವ ಎಲ್ಲ ಕೆಲಸವನ್ನು ದಿನಗೂಲಿ ನೌಕರರೂ ಮಾಡುತ್ತಿದ್ದು, ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ದಟ್ಟ ಅರಣ್ಯ ಪ್ರದೇಶಗಳಲ್ಲಿ ಹಗಲು ರಾತ್ರಿ ಕಾರ್ಯ ನಿರ್ವಹಿಸುತ್ತಿದ್ದು, ವೈಲ್ಡ್‌ ಲೈಫ್‌ನಲ್ಲಿ ಸೇವೆ ಸಲ್ಲಿಸುವರು, ದಟ್ಟ ಕಾಡಿನಲ್ಲಿ ಜೀವವನ್ನೇ ಪಣಕಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಇವರಿಗೆ ಯಾವುದೇ ಸೇವಾ ಭದ್ರತೆ ಇಲ್ಲ. ಕೇವಲ 5000ದಿಂದ 8000 ರೂ. ಸಂಬಳ ನೀಡಲಾಗುತ್ತಿದೆ.

ಈವರೆಗೆ ಕಾಯಮಾತಿ ಮಾಡುವುದು, ವೇತನ, ಭತ್ಯೆ ವಿಸ್ತರಿಸುವ ಕುರಿತು ಇಲಾಖೆ ಮಾತನಾಡಿಲ್ಲ. ಹೀಗಾಗಿ ಅರಣ್ಯ ಇಲಾಖೆ
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅರಣ್ಯ ಇಲಾಖೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ
ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ನೌಕರರ ಬಗ್ಗೆ ಸಂಬಂಧ ಪಟ್ಟ ಪ್ರಾದೇಶಿಕ ಕಚೇರಿಯಿಂದ ನೌಕರರ ವಿವರ ಕೇಳಲಾಗಿತ್ತು. ಆದರೆ ಈ ವರೆಗೆ ಶಿರಸಿ ವಿಭಾಗದಿಂದ ಯಾವುದೇ ವರದಿ ಹೋಗಿಲ್ಲ. ಅಲ್ಲದೇ ಶಿರಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಈವರೆಗೂ ಸಲ್ಲಿಸಿದ ಯಾವ ಮನವಿಗೂ ಸ್ಪಂದಿಸಿಲ್ಲ. ಇದನ್ನು ಖಂಡಿಸಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ. ತಕ್ಷಣ ನೌಕರರ ವಿವರವನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವಂತೆ ಒತ್ತಾಯಿಸುವುದಾಗಿ ಹೇಳಿದರು.

ದಿನಗೂಲಿ ನೌಕರರಾಗಿ ಈಗಾಗಲೇ ನಿವೃತ್ತಿ ಹೊಂದಿದ ನೌಕರರಿಗೆ ಪಿಂಚಿಣಿ ಸೌಲಭ್ಯ ಸಿಗುವಂತೆ ಮಾಡಬೇಕು. 2012 ರಲ್ಲಿ ಕಾಯಂ ಆದ ದಿನಗೂಲಿ ನೌಕರರಿಗೆ 1 ವರ್ಷದ ಬಾಕಿ ಮೊತ್ತದ ಹಣ ಸರ್ಕಾರಕ್ಕೆ ಸಲ್ಲಿಸಿದ್ದು, ಕೂಡಲೇ ಆ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡಿ ಕೊಡಬೇಕು. ಕಾಯಂ ಆದ ಕ್ಷೇಮಾಭಿವೃದ್ಧಿ ಡಿ ನೌಕರರಿಗೆ ಅರಣ್ಯ ವೀಕ್ಷಕ ಹುದ್ದೆಗೆ 10400
ರೂ. ನೀಡಲಾಗುತ್ತಿತ್ತು. ಆದರೆ ಈಗ ಅದನ್ನು ಮೊಟಕುಗೊಳಿಸಿದ್ದು, ಖಂಡನೀಯ. ಈ ಹಿಂದೆ ಅರಣ್ಯ ವೀಕ್ಷಕ ಹುದ್ದೆಗೆ ನೀಡಲಾಗುತ್ತಿದ್ದ 1400 ರೂ. ಸಂಬಳವನ್ನು ಮರು ನಿಗದಿ ಮಾಡಬೇಕು ಎನ್ನುವ ಮನವಿಯನ್ನು ಸಿಸಿಎಫ್‌ ವಸಂತ ರೆಡ್ಡಿ
ಅವರಿಗೆ ನೀಡಲಾಯಿತು.

ಈ ವೇಳೆ ಸಿಸಿಎಫ್‌ ವಸಂತ ರೆಡ್ಡಿ ಮಾತನಾಡಿ, ಈ ಕುರಿತ ಸಮಗ್ರ ವರದಿಯನ್ನು ಸರಕಾರದ ಗಮನಕ್ಕೆ ತರಲಾಗುವುದು. ದಿನಗೂಲಿ ನೌಕರರನ್ನು ಕಾಯಮಾತಿ ಮಾಡಲು ಬೇಕಾಗುವ ಎಲ್ಲ ಪ್ರಯತ್ನ ಮಾಡಲು ಇನ್ನು 15 ದಿನಗಳ ಒಳಗೆ ಸರಕಾರಕ್ಕೆ ವರದಿ ಸಲ್ಲಿಸುವ ಭರವಸೆ  ನೀಡಿದರು. ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಕೃಷ್ಣ ಹೆಗಡೆ, ಡಿಎಫ್‌ಒ ಅಜ್ಜಯ್ಯ, ಆರ್‌ಎಫ್‌ಒ
ಶಿವಾನಂದ ನಿಂಗಾಣಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.