ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ ಶಿವಮೊಗ್ಗ Congress ಮಾಜಿ ಅಧ್ಯಕ್ಷ ತೀನ ಶ್ರೀನಿವಾಸ್

ಅನೇಕ ಆಶಯಗಳೊಂದಿಗೆ ಕಣಕ್ಕೆ ಇಳಿಯುತ್ತಿದ್ದೇನೆ...

Team Udayavani, Apr 13, 2023, 4:02 PM IST

1-wwewqe

ಸಾಗರ: ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಜನಸಾಮಾನ್ಯರಿಗೆ ಪ್ರಾಮಾಣಿಕ ಸೇವೆ ಸಿಗಬೇಕು. ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ಕೆಲಸ ಮಾಡಿಕೊಡಬೇಕು. ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತೀ.ನ.ಶ್ರೀನಿವಾಸ್ ತಿಳಿಸಿದರು.

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ, ಸಚ್ಚಾರಿತ್ರ್ಯದ ರಾಜಕಾರಣಕ್ಕೆ ಮುನ್ನುಡಿ ಬರೆಯಲು ನಾನು ಸ್ಪರ್ಧೆ ಮಾಡಿದ್ದೇನೆ. ಸಾಗರ ಕ್ಷೇತ್ರದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ 5 ಸಾವಿರ ಕುಟುಂಬವಿದೆ. 63ವರ್ಷವಾದರೂ ಅವರಿಗೆ ಹಕ್ಕುಪತ್ರ ಸಿಕ್ಕಿಲ್ಲ. ಅರಣ್ಯ ಭೂಮಿ ಸಾಗುವಳಿದಾರರದ್ದು 14 ಸಾವಿರ ಕುಟುಂಬವಿದ್ದು ಅವರ ಎಲ್ಲ ಅರ್ಜಿಯನ್ನು ವಜಾ ಮಾಡಲಾಗಿದೆ. ಸಿಂಗಳೀಕ ಅಭಯಾರಣ್ಯ ಮಾಡಿ ಜನರು ರಸ್ತೆಯಲ್ಲಿ ತಿರುಗಲು ಸಾಧ್ಯವಾಗದ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸ್ಲಂ ಮಾಡಿದ್ದಾರೆ. ಅದನ್ನು ಸುಂದರಗೊಳಿಸುವುದು ನನ್ನ ಪ್ರಮುಖ ಆದ್ಯತೆಯಾಗಿದೆ ಎಂದರು.

ಮಲೆನಾಡನ್ನು ಶ್ಮಶಾನ ಮಾಡಲು ಹೊರಟಿದ್ದಾರೆ.38 ಸಾವಿರ ಎಕರೆ ರೈತರ ಹಕ್ಕುಪತ್ರ, ಆರ್‌ಟಿಸಿ ಇರುವ ಜಮೀನು ಅರಣ್ಯ ಎಂದು ಘೋಷಣೆ ಮಾಡಿದ್ದಾರೆ. ರೈತರು ಅವರ ಕುಟುಂಬ ತಮ್ಮ ಹಕ್ಕು ದಕ್ಕಿಸಿಕೊಳ್ಳಲು ನ್ಯಾಯಾಲಯಕ್ಕೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಇದರ ವಿರುದ್ಧ ಮಲೆನಾಡಿನ ಶಾಸಕನಾಗಿ ಸದನದಲ್ಲಿ ಗಟ್ಟಿಧ್ವನಿಯಲ್ಲಿ ಮಾತನಾಡುತ್ತೇನೆ. ರಾಜ್ಯಕ್ಕೆ ವಿದ್ಯುತ್ ಕೊಟ್ಟವರು ವಿದ್ಯುತ್ ಸಂಪರ್ಕಕ್ಕೆ ಪರಿತಪಿಸಬೇಕಾಗಿದೆ. ಇನ್ನು ಅನೇಕ ಆಶಯಗಳೊಂದಿಗೆ ಕಣಕ್ಕೆ ಇಳಿಯುತ್ತಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಯ ಶ್ರೀನಿವಾಸ್, ಎಲ್.ವಿ.ಸುಭಾಷ್, ದೇವಪ್ರಸಾದ್, ವಿಶ್ವನಾಥ ಗೌಡ ಅದರಂತೆ, ಕೃಷ್ಣಮೂರ್ತಿ ಹೆಗ್ಗೋಡು, ಪರಶುರಾಮ್, ಗೋಪಾಲಕೃಷ್ಣ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.