ಶಿರಸಿ: 9 ಮಂದಿ ಅಂತರ್ ಜಿಲ್ಲಾ ದರೋಡೆಕೋರರ ಬಂಧನ

50 ಲಕ್ಷ ರೂ.ದರೋಡೆಗೆ ಸಂಬಂಧಿಸಿ ಪೊಲೀಸ್ ತಂಡದ ಕಾರ್ಯಾಚರಣೆ

Team Udayavani, Nov 26, 2022, 7:32 PM IST

1-sadsadsad

ಶಿರಸಿ: ಕಳೆದ ಎಂಟು ದಿನಗಳ ಹಿಂದೆ ತಾಲೂಕಿನ ಬನವಾಸಿ ಸಮೀಪದ ಅಂಡಗಿ ಸಮೀಪ ನಡೆದ 50 ಲಕ್ಷ ರೂ.ದರೋಡೆಗೆ ಸಂಬಂಧಿಸಿ 9 ಮಂದಿ ಅಂತರ್ ಜಿಲ್ಲಾ ದರೋಡೆಕೋರರನ್ನು ಶಿರಸಿ ಉಪ ವಿಭಾಗದ ಪೊಲೀಸರು ಬಂಧಿಸಿ 13.82 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.

ನ.19 ರ ಸಂಜೆ ಹಸನ್ ಜಾವೇದ್‌ಖಾನ್ ಎಂಬುವವರು ತನ್ನ ಇಬ್ಬರು ಸಂಬಂಧಿಕರೊಂದಿಗೆ 50 ಲಕ್ಷ ರೂ.ತೆಗೆದುಕೊಂಡು ಬೆಳಗಾವಿಯಲ್ಲಿ ಸೈಟ್ ನೋಡಿಕೊಂಡು ಕಾರಿನಲ್ಲಿ ವಾಪಸ್ ಬರುತ್ತಿರುವಾಗ ಅಂಡಗಿ ಬಸ್ ನಿಲ್ದಾಣದ ಹತ್ತಿರ ಒಂದು ಕೆಂಪು ಬಣ್ಣದ ಕಾರಿನಲ್ಲಿ ಬಂದ ದರೋಡೆಕೋರರು ಅಡ್ಡ ಹಾಕಿದ್ದರು. ಹಿಂಬದಿ ಸೀಟಿನ ಮೇಲಿದ್ದ 50 ಲಕ್ಷ ರೂಪಾಯಿ ಹಣವಿದ್ದ ಪ್ಲಾಸ್ಟಿಕ್ ಚೀಲವನ್ನು ಕಸಿದುಕೊಂಡು ಪರಾರಿಯಾದ ಬಗ್ಗೆ ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಸಿಪಿಐ ರಾಮಚಂದ್ರ ನಾಯಕ ನೇತೃತ್ವದಲ್ಲಿ ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಿ ಪ್ರಕರಣ ಬೇಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಆಸೀಫ್ ಅಬ್ದುಲ್ ಸತ್ತಾರ್ ಸಾಗರ, ಅಬ್ದುಲ್ ಹಮೀದ್ ಅಬ್ದುಲ್ ಸತ್ತಾರ್ ಸಿದ್ಧಾಪುರ, ಅಜಿಮುಲ್ಲಾ ಅಕ್ಷರಸಾಬ್ ಸಿದ್ಧಾಪುರ, ಮನ್ಸೂರ ಜಾಫರ್ ಖಾನ್ ಸಾಗರ, ಅಬ್ದುಲ್ ರೆಹಮಾನ ಶಟ್ಟರ್ ವಟರಾಗ ಭಟ್ಕಳ, ರಿಯಾಜ್ ಫಯಾಜ್ ಕೊಪ್ಪ,ವಿಶ್ವನಾಥ ವಾಸು ಶೆಟ್ಟಿ ಕೊಪ್ಪ, ಮನೋಹರ ಆನಂದ ಶೆಟ್ಟಿ ಕೊಪ್ಪ, ಈಕ್ವಾಲ್ ಅಬ್ದುಲ್ ಕೆ. ತೀರ್ಥಹಳ್ಳಿ ಇವರುಗಳನ್ನು ಬಂಧಿಸಲಾಗಿದೆ.

ಬಂಧಿತರಿಂದ ಕೃತ್ಯಕ್ಕೆ ಉಪಯೋಗಿಸಿದ ಎರಡು ಕಾರು, 12 ಮೊಬೈಲ್ ಹಾಗೂ ಜಿಪಿಎಸ್ ಟ್ರ‍್ಯಾಕರ್ ವಶಪಡಿಸಿಕೊಳ್ಳಲಾಗಿದೆ. ಇನ್ನೂ ಕೆಲ ಆರೋಪಿಗಳ ಪತ್ತೆ ಹಾಗೂ ನಗದು ಜಪ್ತು ಬಾಕಿ ಇದ್ದು ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದ ಪತ್ತೆಕಾರ್ಯದಲ್ಲಿ ಉಸ್ತುವಾರಿ ವಹಿಸಿದ ಡಿವೈಎಸ್‌ಪಿ ರವಿ ಡಿ. ನಾಯ್ಕ, ತನಿಖಾಧಿಕಾರಿಯಾದ ಸಿಪಿಐ ರಾಮಚಂದ್ರ ನಾಯಕ, ಪತ್ತೆ ತಂಡದ ಅಧಿಕಾರಿ ಪಿಎಸ್‌ಐಗಳಾದ ಹನುಮಂತ ಬಿರಾದಾರ, ಭೀಮಾ ಶಂಕರ ಸಿನೂರು, ಚಂದ್ರಕಲಾ ಪತ್ತಾರ, ಸಿಬಂದಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎನ್ ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.