ಶಿರಸಿ: ವಿಘ್ನೇಶ ಕೂರ್ಸೆಗೆ ಬಾಲ ಪುರಸ್ಕಾರ; ಡಿಸೆಂಬರ್‌ನಲ್ಲಿ ಪ್ರಶಸ್ತಿ ಪ್ರದಾನ

ಡಾ. ವೆಂಕಟರಮಣ ಹೆಗಡೆ, ಡಿಎಸ್‌ಪಿ ಸುಧೀರ್‌ಗೆ ನಮ್ಮನೆ ಪ್ರಶಸ್ತಿ

Team Udayavani, Sep 23, 2022, 12:04 PM IST

9

ಶಿರಸಿ: ಕಳೆದ ಹನ್ನೊಂದು ವರ್ಷದಿಂದ ನಿರಂತರ ನಡೆಸಲಾಗುತ್ತಿರುವ ನಮ್ಮನೆ ಹಬ್ಬದಲ್ಲಿ ನೀಡಲಾಗುವ ನಮ್ಮನೆ ಪ್ರಶಸ್ತಿ ಹಾಗೂ ಬಾಲ ಪುರಸ್ಕಾರ ಪ್ರಕಟವಾಗಿದ್ದು, ಈ ಬಾರಿ ನಾಡಿನ ಹೆಸರಾಂತ ವೈದ್ಯ, ಅಂಕಣಕಾರ ಶಿರಸಿಯ ಡಾ. ವೆಂಕಟರಮಣ ಹೆಗಡೆ, ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿ ಸುಧೀರ್ ಹೆಗಡೆ ಅವರಿಗೆ ನಮ್ಮನೆ ಪ್ರಶಸ್ತಿ ಹಾಗೂ ಗೋಕರ್ಣದ ಬಾಲ ಕಲಾವಿದ ವಿಘ್ನೇಶ ಕೂರ್ಸೆಗೆ ಬಾಲ ಪುರಸ್ಕಾರ ಪ್ರಕಟವಾಗಿದೆ.

ಡಿಸೆಂಬರ್ ಎರಡನೇ ವಾರ ವಿಶ್ವಶಾಂತಿ ಸೇವಾ ಟ್ರಸ್ಟ್ ಕರ್ನಾಟಕ ನಡೆಸುವ ನಮ್ಮನೆ ಹಬ್ಬದಲ್ಲಿ ಈ ಪ್ರಶಸ್ತಿಗಳನ್ನು ಗಣ್ಯರು ಪ್ರದಾನ ಮಾಡಲಿದ್ದಾರೆ ಎಂದು ಟ್ರಸ್ಟ್ ಕಾರ್ಯದರ್ಶಿ ಗಾಯತ್ರೀ ರಾಘವೇಂದ್ರ ತಿಳಿಸಿದ್ದಾರೆ.

ನಿಸರ್ಗ ವೈದ್ಯ:

ನಿಸರ್ಗ ಚಿಕಿತ್ಸೆ ಜನಪ್ರಿಯ ಇಲ್ಲದ ಕಾಲದಲ್ಲೇ ಡಾ. ವೆಂಕಟರಮಣ ಹೆಗಡೆ ಅವರು ನಿಸರ್ಗ ಚಿಕಿತ್ಸೆಯ ಪದವಿ ಪಡೆದು ಚಾರಿಟೇಬಲ್ ಟ್ರಸ್ಟ್ ಮೂಲಕ ತವರು ಊರಿನಲ್ಲೇ ಆಸ್ಪತ್ರೆಯನ್ನು ಸ್ಥಾಪಿಸಿ ಈಗ ನಿಸರ್ಗ ಮನೆಯನ್ನೂ ನಡೆಸುತ್ತಿದ್ದಾರೆ. ಕಳೆದ ಎರಡು ದಶಕಗಳಿಂದ ರೋಗಿಗಳಿಗೂ ಚಿಕಿತ್ಸೆ ನೀಡಿ, ನಿರೋಗಿಯಾಗಿ ಬದುಕುವುದನ್ನೂ ಕಲಿಸುವ ಕೈಂಕರ್ಯ ಮಾಡುತ್ತಿದ್ದಾರೆ. ನಿಸರ್ಗ ಚಿಕಿತ್ಸೆ, ಆಹಾರ ಪದ್ಧತಿ, ವ್ಯಾಯಾಮ, ದಿನಚರಿಯ ಪಾಠದ ಮೂಲಕ ನಿರಂತರ ಆರೋಗ್ಯ ಜಾಗೃತಿ ಮೂಡಿಸುತ್ತಿದ್ದಾರೆ.

ದೇಶದಾದ್ಯಂತ ಯೋಗ ಕುರಿತು ಜಾಗೃತಿ ಮೂಡಿಸಿರುವ ಡಾ. ಹೆಗಡೆ ಅವರು ವಿವಿಧ ದೂರದರ್ಶನ ವಾಹಿನಿಗಳಲ್ಲಿ ಸರಣಿ ಕಾರ್ಯಕ್ರಮಗಳನ್ನು ನೀಡಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ 1200 ಕ್ಕೂ ಅಧಿಕ ಅಂಕಣ ಬರಹ ನೀಡಿ, ಎಂಟಕ್ಕೂ ಅಧಿಕ ಕೃತಿಗಳನ್ನು ಪ್ರಕಟಿಸಿದ್ದಾರೆ.

ಈ‌ ಮೂಲಕ ವೈದ್ಯಕೀಯ ಸಾಹಿತ್ಯಕ್ಕೂ ಅನವರತ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನೋಬೆಲ್ ಮ್ಯಾನ್ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಪರಿಮಳ ಪ್ರಶಸ್ತಿ, ಇಂಡಿಯನ್ ಸ್ಟಾರ್ ಸಾಗಾ ಪ್ರಶಸ್ತಿ ಕೂಡ ಅರಸಿ ಬಂದಿದೆ. ಇವರು ನಿಸರ್ಗ ವೈದ್ಯ ಎಂದೇ ಹೆಸರಾಗಿದ್ದಾರೆ.

ಧೀರ ಸುಧೀರ:

ಪ್ರಾಮಾಣಿಕತೆ, ಭದ್ಧತೆಯ ಮೂಲಕ ಹೆಸರು ಮಾಡಿ ಸಿಎಂ, ರಾಷ್ಟ್ರಪತಿ ಪದಕವನ್ನೂ ಪಡೆದಿರುವ ಪೊಲೀಸ್ ಅಧಿಕಾರಿ ಸುಧೀರ್ ಹೆಗಡೆ ಅವರು ತಮ್ಮ ಕಾರ್ಯಶೈಲಿಯ ಮೂಲಕ ಹೆಸರು ಮಾಡಿದವರು. ಇವರು ಧೀರ ಸುಧೀರ ಎಂದೇ ಜನಪ್ರಿಯರೂ ಆಗಿದ್ದಾರೆ.

ಮಡಿವಾಳದ ಎಸಿಪಿಯಾಗಿ ಕರ್ತವ್ಯ ನಿರ್ವಹಿಸಿ, ಇದೀಗ ರಾಜ್ಯ ಮಾನವ ಹಕ್ಕು ಆಯೋಗದ ಡಿಎಸ್‌ಪಿಯಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮೂಲತಃ ಹುಲೇಮಳಗಿಯ ಸುಧೀರ ಹೆಗಡೆ ನಿಷ್ಠಾವಂತ ಹಾಗೂ ದಿಟ್ಟ ಪೊಲೀಸ್ ಅಧಿಕಾರಿಯಾಗಿದ್ದಾರೆ.

1996ರಲ್ಲಿ ಪೊಲೀಸ್ ಇಲಾಖೆಗೆ ಸೇರಿ ಸೇವೆ ಆರಂಭಿಸಿದ ಅವರು, ವಿವಿಧ ಹುದ್ದೆಗಳಲ್ಲಿ ಗುಲ್ಬರ್ಗ, ಯಾದಗಿರಿ, ದಾವಣಗೆರೆ, ಕಾರವಾರ, ಚಿಕ್ಕಮಗಳೂರು, ಮಂಗಳೂರುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಭೀಮಾ ತೀರದ ಹಂತಕ ಚಂದ್ರಪ್ಪ ಹರಿಜನ ತಂಡವನ್ನು ಎನ್‌ಕೌಂಟರ್ ಮಾಡಿದ ಸುಧೀರ ಹೆಗಡೆ, ಲಷ್ಕರ್ ಇ‌ ತೋಯ್ಬಾ ಭಯೋತ್ಪಾದಕರನ್ನೂ ಮಟ್ಟ ಹಾಕುವಲ್ಲಿ ಶ್ರಮಿಸಿದವರು. ನಕಲಿ ಅಂಕ ಪಟ್ಟಿ ಜಾಲವನ್ನೂ ಸದೆ ಬಡಿಯುವಲ್ಲಿ ಎದೆ ಒಡ್ಡಿದವರು. ಮಡಿವಾಳದ ಎಸಿಪಿಯಾಗಿದ್ದಾಗ ಕೇವಲ ನಾಲ್ಕು ವರ್ಷಗಳಲ್ಲಿ 8.48 ಕೋ.ರೂ. ಮೌಲ್ಯದ ಮಾದಕ ದ್ರವ್ಯ ವಶಪಡಿಸಿಕೊಂಡು ಹಲವರನ್ನು ಜೈಲಿಗೆ ಕಳುಹಿಸಿದ್ದರು.

ಹೆಗಡೆ ಅವರಿಗೆ 2002ರಲ್ಲಿ ಮುಖ್ಯಮಂತ್ರಿ ಪದಕ, 2017ರಲ್ಲಿ ರಾಷ್ಟ್ರಪತಿ ಪದಕ, 2019ರಲ್ಲಿ ಸ್ವರ್ಣವಲ್ಲಿ ಮಠದಿಂದ ಸುರಕ್ಷಾ ಸುಧೀರ, 2021ರಲ್ಲಿ ಯುನಿಯನ್ ಹೋಂ ಮಿನಿಸ್ಟರ್ ಪದಕಗಳೂ ಅರಸಿ ಬಂದಿವೆ.

ಇಲ್ಲಿ ತಟ್ಟೆಯೂ ವಾದನ!

ಚಹಾ ಕುಡಿಯುವ ತಟ್ಟೆಯನ್ನೇ ಬಳಸಿ ಪದ್ಯ‌ ನುಡಿಸುವ ಅಪರೂಪದ ಬಾಲ ಕಲಾವಿದ ಗೋಕರ್ಣದ ಬಾಲಕ ವಿಘ್ನೇಶ ಜಿ. ಕೂರ್ಸೆಗೆ ನಮ್ಮನೆ ಬಾಲ ಪುರಸ್ಕಾರ ನೀಡಲಾಗುತ್ತಿದೆ. ಸಣ್ಣ ವಯಸ್ಸಿನಲ್ಲೇ ನಾಡಿನ ಹಲವೆಡೆ ಪ್ರದರ್ಶನ ನೀಡಿದ ವಿಘ್ನೇಶ, ಗೋಕರ್ಣದ ವಿಷ್ಣುಗುಪ್ತ ವಿಶ್ವ ವಿದ್ಯಾಲಯದಲ್ಲಿ ಎಂಟನೇ ತರಗತಿ ಓದುತ್ತಿದ್ದಾನೆ.

ಲೋಹ ತರಂಗ ವಾದನದ‌ ಮೂಲಕ ರಾಜ್ಯದ ಗಮನ ಸೆಳೆದ ಪ್ರತಿಭೆ ವಿಘ್ನೇಶನಾಗಿದ್ದು, ಸ್ವರಶ್ರೀ, ಹವ್ಯಕ ಪಲ್ಲವ ಪುರಸ್ಕಾರವೂ ಬಂದಿದೆ.

ಉದಯ ಟಿವಿಯ ಕಿಲಾಡಿ ಕಿಡ್ಸ್‌, ಮಜಾ ಟಾಕೀಸ್‌ನಲ್ಲೂ ಪ್ರದರ್ಶನ ನೀಡಿದ್ದಾನೆ. ಅಪ್ಪ ಗಣಪತಿ ಕೂರ್ಸೆ ಕೂಡ ಕಲಾವಿದರಾಗಿದ್ದು, ಅನೇಕ ವೇದಿಕೆಗಳಲ್ಲಿ ಇಬ್ಬರೂ ಕಾರ್ಯಕ್ರಮ ನೀಡಿದ್ದಾರೆ ಎಂಬುದು‌ ಉಲ್ಲೇಖನೀಯ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.