Sirsi: ‘ಉದಯವಾಣಿ’ಯ ರಾಘವೇಂದ್ರ ಬೆಟ್ಟಕೊಪ್ಪಗೆ ಮಾಧ್ಯಮ ಶ್ರೀ ಪ್ರಶಸ್ತಿ
Team Udayavani, Jul 9, 2024, 3:24 PM IST
ಶಿರಸಿ: ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪ್ರತಿ ವರ್ಷ ಕೊಡ ಮಾಡುವ ಮಾಧ್ಯಮ ಶ್ರೀ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಹಾಗೂ ಉದಯವಾಣಿ ವರದಿಗಾರ ರಾಘವೇಂದ್ರ ಬೆಟ್ಟಕೊಪ್ಪ ಆಯ್ಕೆ ಆಗಿದ್ದಾರೆ.
ಮಂಗಳವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ತಾಲೂಕು ಅಧ್ಯಕ್ಷ ಸಂದೇಶ ಭಟ್ಟ ಬೆಳಖಂಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಕ್ಕೊರಲಿನಿಂದ ಈ ತಿರ್ಮಾನ ಕೈಗೊಳ್ಳಲಾಗಿದೆ.
ಕಳೆದ 23 ವರ್ಷದಿಂದ ನಿರಂತರ ಪತ್ರಿಕೋದ್ಯಮದಲ್ಲಿ ಉಪ ಸಂಪಾದಕ, ವರದಿಗಾರನಾಗಿ ಸೇವೆ ಸಲ್ಲಿಸುತ್ತಿರುವ ರಾಘವೇಂದ್ರ ಬೆಟ್ಟಕೊಪ್ಪ 1995-96ರ ಹೈಸ್ಕೂಲ್ ವಿದ್ಯಾರ್ಥಿ ಜೀವನದ ವೇಳೆಗೆ ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ನುಡಿಚಿತ್ರ ಬರೆದು ಗಮನ ಸೆಳೆದಿದ್ದರು.
ಸ್ಥಳೀಯವಾಗಿ ಜನಮಾಧ್ಯಮ ಹಾಗೂ ಧ್ಯೇಯನಿಷ್ಠ ಪತ್ರಕರ್ತ, ಲೋಕಧ್ವನಿ ಪತ್ರಿಕೆಗಳಿಗೆ ವರದಿ, ಅಂಕಣ ಬರಹ ನೀಡುತ್ತಿದ್ದರು. 2001 ರಿಂದ ವಿಜಯ ಕರ್ನಾಟಕ, ಈ ಟಿವಿ, ಕನ್ನಡ ಜನಾಂತರಂಗ, ಉಷಾಕಿರಣದಲ್ಲಿ ಕೆಲಸ ನಿರ್ವಹಿಸಿದ್ದ ಬೆಟ್ಟಕೊಪ್ಪ ಕಳೆದ 17 ವರ್ಷಗಳಿಂದ ಶಿರಸಿ ವರದಿಗಾರರರಾಗಿ ಉದಯವಾಣಿ ಸಂಸ್ಥೆಗೆ ಕೆಲಸ ಮಾಡುತ್ತಿದ್ದಾರೆ.
ಸಾಂಸ್ಕೃತಿಕ, ಸಾಹಿತ್ಯ, ಕೃಷಿ, ಗ್ರಾಮೀಣಾಭಿವೃದ್ದಿ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಅವರು ಈಗಾಗಲೇ ಮೂರು ಕೃತಿಗಳನ್ನೂ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ್ದಾರೆ. ಇವರ ಬರಹಗಳಿಗೆ ನಾಲ್ಕು ಸಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ರಾಜ್ಯ ಮಟ್ಟದ ಅತ್ಯುತ್ತಮ ನುಡಿಚಿತ್ರ ಪ್ರಶಸ್ತಿ, ಜಿಲ್ಲಾ ಪತ್ರಿಕಾ ಸಂಘ ನೀಡುವ ಅಜ್ಜೀಬಳ ಹೆಗಡೆ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಎರಡು ಸಲ ಪ್ರಕಟಗೊಂಡಿದೆ ಎಂದು ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಕೆರೆಗದ್ದೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.