ವಿಧಾನಸಭಾ ಚುನಾವಣೆಯ ಗುರಿಯಲ್ಲಿ ಅನಗತ್ಯ ಗೊಂದಲ ಸೃಷ್ಟಿ;ತಾ.ಪಂ.ಮಾಜಿ ಸದಸ್ಯ ನಾಗರಾಜ ಶೆಟ್ಟಿ


Team Udayavani, Oct 23, 2022, 11:25 AM IST

6

ಶಿರಸಿ: ರಾಜಕೀಯಕ್ಕೆ ಬಡ ಅತಿಕ್ರಮಣದಾರರ ಬಳಕೆ ಮಾಡಿಕೊಳ್ಳಲಾಗುತ್ತಿದೆ.  ಬರಲಿರುವ ವಿಧಾನ ಸಭಾ ಚುನಾವಣೆಯ ಗುರಿಯಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಬಿಜೆಪಿ ಪ್ರಮುಖ, ತಾ.ಪಂ. ಮಾಜಿ ಸದಸ್ಯ ನಾಗರಾಜ ಶೆಟ್ಟಿ ಆರೋಪಿಸಿದರು.

ಅವರು ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿ ನಡೆಸಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅತಿಕ್ರಮಣದಾರರ ಪರವಾಗಿಯೇ ಇದ್ದಾರೆ. ವಿನಾ‌ಕಾರಣ ಕಾಂಗ್ರೆಸ್ ಪ್ರೇರಿತ ಸಮಾವೇಶ‌ ನಡೆಸುತ್ತಿದ್ದಾರೆ ಎಂದರು.

ಉತ್ತರ ಕನ್ನಡ ಕಾಡಿನ ಜಿಲ್ಲೆ. ಎಲ್ಲಿ ನೋಡಿದರೂ ಕಾಡೇ ತುಂಬಿದ್ದು, ಅಲ್ಲಿನ ಪರಿಸರದಲ್ಲಿ ಅತಿಕ್ರಮಣದಾರರೇ ಹೆಚ್ಚಿದ್ದು, ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ. ಹೀಗಿರುವಾಗ ಹೋರಾಟದ ಹೆಸರ‌ಲ್ಲಿ ವಕೀಲರೂ ಆದ ರವೀಂದ್ರ ನಾಯ್ಕ ಅವರು ಇಲ್ಲ ಸಲ್ಲದ ಆರೋಪ ಮತ್ತು ಗೊಂದಲವನ್ನು ಸೃಷ್ಟಿ ಮಾಡಿ, ಜನರಲ್ಲಿ ಭಯದ ವಾತಾವರಣವನ್ನು ಸೃಷ್ಟಿಮಾಡುತ್ತಿದ್ದಾರೆ. ಹಳ್ಳಿಯ ಜನರ ಮುಗ್ಧತೆಯನ್ನು ಬಳಸಿಕೊಂಡು ಅವರಿಗೆ ಅನಾವಶ್ಯಕ ಅವಶ್ಯಕತೆಯಿಲ್ಲದ ವಿಷಯಗಳನ್ನು ಅವರ ಮನಸ್ಸಿನಲ್ಲಿ ತುಂಬಿದ್ದಾರೆ ಎಂದರು.

ಇಲ್ಲಿ ನಿಜವಾದ ಪರಿಸ್ಥಿತಿ ಹಾಗಿಲ್ಲ. ಹಳೆಯ ಅತಿಕ್ರಮಣ ಮತ್ತು ಈಗಾಗಲೇ ಜಿ.ಪಿ.ಎಸ್. ಆದ ಯಾರದೇ ವಾಸದ ಮನೆ ಮತ್ತು ಕೃಷಿ ಜಮೀನನ್ನು ಯಾವುದೇ ಕಾರಣಕ್ಕೂ ತೊಂದರೆ ನೀಡುವುದಿಲ್ಲ ಎಂದು ಸರಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಆದರೂ ಶಿರಸಿ-ಸಿದ್ದಾಪುರ ತಾಲೂಕಿನಲ್ಲಿ ರವೀಂದ್ರನಾಥ ನಾಯ್ಕ ಇವರು ಹೋರಾಟದ ಹೆಸರಿನಲ್ಲಿ ಗೊಂದಲವನ್ನು ಸೃಷ್ಟಿ ಮಾಡುತ್ತಿದ್ದು, ಸಭಾಧ್ಯಕ್ಷರು ಮತ್ತು ಬಿ.ಜೆ.ಪಿ. ಪಕ್ಷದ ವಿರುದ್ಧ ಸುಮ್ಮನೇ ಆರೋಪ ಮಾಡುತ್ತಿದ್ದಾರೆ ಎಂದರು.

ಹೋರಾಟಗಾರರ ವಯಕ್ತಿಕ ಸ್ವಾರ್ಥ ಸಾಧನೆಗೆ ಈ ರೀತಿ ಹೇಳಿಕೆ ಕೊಡುತ್ತ ಬಂದಿದ್ದಾರೆ. ಈಗಾಗಲೇ ಸಭಾಧ್ಯಕ್ಷರು ಅಧಿಕಾರಿಗಳಿಗೆ ತಿಳಿಸಿರುವಂತೆ ಯಾವುದೇ ಕಾರಣಕ್ಕೂ ಜಿ.ಪಿ.ಎಸ್. ಆದ ಹಳೆಯ ಅತಿಕ್ರಮಣದಾರರ ವಿಷಯಕ್ಕೆ ಹೋಗದಂತೆ ಖಡಕ್ ಸೂಚನೆ ನೀಡಿರುತ್ತಾರೆ.  ಅಂತಹ ಪ್ರಕರಣ ನಮ್ಮ ತಾಲೂಕಿನಲ್ಲಿ ಯಾವುದೂ ನಡೆದಿರುವುದಿಲ್ಲ ಎಂದರು.

32 ವರ್ಷಗಳಿಂದ ಅತಿಕ್ರಮಣ ಹೋರಾಟ ಮಾಡುತ್ತೇನೆಂದು ಹೇಳಿಕೊಳ್ಳುವ ನಾಯ್ಕ ಅವರಿಂದ ಜನರಿಗೆ ಆದ ಲಾಭ ಏನು?. ಗೊಂದಲ ಸೃಷ್ಟಿಸುವುದನ್ನು ಬಿಟ್ಟು ಬೇರೆ ಯಾವ ರೀತಿಯಿಂದ ಸಹಾಯ ಮಾಡಿದ್ದೀರಿ? ಸುಮ್ಮನೆ ಬೇರೆಯವರ ಮೇಲೆ ಇಲ್ಲ-ಸಲ್ಲದ ಆಪಾದನೆ ಮಾಡುವುದು ಬಿಟ್ಟು ಜನರು ನೆಮ್ಮದಿಯಿಂದ ಜೀವನವನ್ನು ನಡೆಸಲು ನೀವು ಸಹಕಾರ ನೀಡಿ ಎಂದು ಹೇಳಿದರು.

ಪ್ರತಿ ಸಲ ಚುನಾವಣೆ ಬಂದಾಗ ಮಾತ್ರ ಹೋರಾಟದ ನೆಪ ಮಾಡಿಕೊಂಡು ಬರುವನನ ಉದ್ದೇಶವೇನು? ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದ ಪ್ರಚಾರ ನಡೆಸುತ್ತಿರುವಂತೆ ಕಾಣುತ್ತದೆ. ನೀವು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕನಾಗಿ ಕನಸು ಕಂಡಿದ್ದರೆ ನೇರವಾಗಿ ಜನರ ಬಳಿ ಹೋಗಿ. ಅದನ್ನು ಬಿಟ್ಟು ಗೊಂದಲದ ವಾತಾವರಣ ಸೃಷ್ಟಿಸುವ ಅವಶ್ಯಕತೆಯಿಲ್ಲ ಎಂದಿದ್ದಾರೆ.

ಸಭಾಧ್ಯಕ್ಷರು ಅತಿಕ್ರಮಣದಾರರ ಪರವಾಗಿ ಹಿಂದಿನ ಯಾವುದೂ ಸರಕಾರಗಳು ಮಾಡದೇ ಇರುವಂತಹ ಅತಿಕ್ರಮಣದಾರರಿಗೆ ಸರಕಾರದ ವಸತಿ ಮನೆ ನೀಡುವಂತೆ ಮಾಡಿದ್ದು ಕಾಗೇರಿಯವರು. ಈಗಾಗಲೇ ಸಭಾಧ್ಯಕ್ಷರು ವಿಧಾನಸಭೆಯಲ್ಲಿ ಈ ವಿಚಾರವನ್ನು ಚರ್ಚಿಸಿದ್ದು, ಗಮನಕ್ಕಿದೆ. ಇತ್ತೀಚೆಗೆ ಉನ್ನತ ಮಟ್ಟದ ಅಧಿಕಾರಿಗಳನ್ನು ಕರೆದು ಚರ್ಚಿಸಿದ್ದು, ಅತಿಕ್ರಮಣದಾರರಿಗೆ ಯಾವ ರೀತಿಯ ನ್ಯಾಯ ಕೊಡಿಸಬೇಕೆಂಬುದನ್ನು ಮೇಲ್ಮನವಿ ಸಲ್ಲಿಸಲು ತಿಳಿಸಿದ್ದಾರೆ. ಪಕ್ಷಾತೀತ ಹೋರಾಟ ಎಂಬ ಹೆಸರಿನಲ್ಲಿ ರಾಜಕೀಯ ಹಿತಾಸಕ್ತಿ ಸಾಧಿಸುವುದು ಸರಿಯಲ್ಲ ಎಂದರು.

2013 ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಸ್ಥಳೀಯ ಮಟ್ಟದಲ್ಲಿ ಸಮಿತಿಯನ್ನು ರಚಿಸಿ ಅತಿಕ್ರಮಣದಾರರು ಸಾಗುವಳಿ ಮಾಡಿಕೊಂಡಿರುವ ಜಮೀನು ಮತ್ತು ಮನೆಗಳನ್ನು ಜಿ.ಪಿ.ಎಸ್. ಮಾಡಿಸಿಕೊಟ್ಟಿದ್ದಾರೆ. ಅಂತಹ ಜಮೀನುಗಳಿಗೆ ಯಾವುದೇ ಕಾರಣಕ್ಕೂ ಅರಣ್ಯ ಅಧಿಕಾರಿಗಳು ತೊಂದರೆ ನೀಡಲು ಸಾಧ್ಯವಿಲ್ಲ ಎಂದೂ ತಿಳಿಸಿದರು.

ಈ ಸಂದರ್ಭದಲ್ಲಿ ತಾ.ಪಂ. ಮಾಜಿ ಸದಸ್ಯ‌ ನಾಗರಾಜ ಶೆಟ್ಟಿ ಹಾಗೂ ಇತರರು‌‌ ಮಾತನಾಡಿದರು. ಮಂಜುನಾಥ ಭಂಡಾರಿ, ರತ್ನ ‌ಶೆಟ್ಟಿ, ಪ್ರಭಾವತಿ ಗೌಡ ಹಾಗೂ ಇತರರಿದ್ದರು‌.

ಅರಣ್ಯ ಅತಿಕ್ರಮಣದಾರರ ಪರವಾಗಿ ಕಾಗೇರಿಯವರು ಮತ್ತು ಬಿ.ಜೆ.ಪಿ. ಸರಕಾರ ಬೆಂಬಲವಾಗಿ ನಿಂತಿದೆ. – ನಾಗರಾಜ್ ಶೆಟ್ಟಿ, ಬಿಜೆಪಿ ಪ್ರಮುಖ

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.