ನಕಲಿ ಜಾಲ ತಾಣಗಳ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡ ಶಂಕೆ : ಪ್ರಸನ್ನ ಶೆಟ್ಟಿ ಕಳವಳ
Team Udayavani, Jun 2, 2022, 5:18 PM IST
ಶಿರಸಿ : ಜಿಲ್ಲೆಯಲ್ಲಿ ನಕಲಿ ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ರಾಷ್ಟ್ರ ಮತ್ತು ರಾಜ್ಯಗಳ ಹಾಗೂ ಸ್ಥಳೀಯ ನಾಯಕರು ಹಾಗೂ ವ್ಯಕ್ತಿಗಳ ಅವಹೇಳನ ಹಾಗೂ ಅವರ ವಿರುದ್ಧ ನಿರಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದು ನಡೆಯುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲ ತಾಣ ವಿಭಾಗದ ಜೊಲ್ಲಾಯ ಅಧ್ಯಕ್ಷ ಪ್ರಸನ್ನ ಶೆಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು ನಕಲಿ ಜಾಲ ತಾಣಗಳ ಹಿಂದೆ ಪ್ರಭಾವಿಗಳ ಬೆಂಬಲ ಇರುವ ಸಂಶಯ ಮೂಡುತ್ತಿದ್ದೂ ನಕಲಿ ಖಾತೆಗಳ ಬಳಕೆದಾರರ ಒಂದು ದೊಡ್ಡ ಮಾಫಿಯಾವೇ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈಖರಿ ಕಂಡುಬರುತ್ತಿದೆ ಎಂದೂ ಆತಂಕಿಸಿದ್ದಾರೆ.
ನಕಲಿ ಖಾತೆಗಳ ಬಳಕೆದಾರರಿಗೆ ಬೇಕಾಗುವ ಸಲಕರಣೆಗಳು ಮತ್ತು ವ್ಯಕ್ತಿಗಳ ಮಾಹಿತಿಗಳನ್ನು ಒದಗಿಸುತ್ತಿರುವವರು ಯಾರು ಎನ್ನುವುದನ್ನು ಪೊಲೀಸ್ ಇಲಾಖೆಯು ಪತ್ತೆ ಹಚ್ಚಲೇಬೇಕು. ಈ ಹಿಂದೆಯೇ ಕೆಲವು ಖಾತೆಗಳ ವಿರುದ್ಧ ಕಾರವಾರದಲ್ಲಿ ದೂರು ದಾಖಲಿಸಿದ್ದು ಯಾವುದೇ ಕ್ರಮ ಕೈಗೊಂಡಿಲ್ಲ ಎಂದೂ ದೂರಿದ್ದಾರೆ.
ಇದನ್ನೂ ಓದಿ : ಗೋವಾದ ಮಾಪ್ಸಾದಲ್ಲಿ ಹಾಡಹಗಲೇ ಪ್ರವಾಸಿಗರ ಲೂಟಿ
ಇತ್ತೀಚಿನ ದಿನಗಳಲ್ಲಿ ಫೇಸ್ ಬುಕ್ ಒಂದರಲ್ಲೆ ದಿನ ನಿತ್ಯ ಹೊಸ ಹೊಸ ನಕಲಿ ಖಾತೆಗಳು ಸೃಷ್ಟಿಯಾಗುತ್ತಿದ್ದರೂ ಕೂಡ ಜಿಲ್ಲೆಯ ಸೈಬರ್ ಕ್ರೈಂ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ.
ರಾಜ್ಯದ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದೂ ಜಿಲ್ಲೆಯಲ್ಲಿ ಜಾತಿ, ಧರ್ಮಗಳ ನಡುವೆ ಹಾಗೂ ಪಕ್ಷಗಳ ಕಾರ್ಯಕರ್ತರ ನಡುವೆ ದ್ವೇಷದ ಮನೋಭಾವನೆ ಬಿತ್ತುವ ಕಾರ್ಯವನ್ನು ಕಿಡಿಗೇಡಿಗಳು ಮಾಡುತ್ತಿದ್ದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕದಡುವ ಕಾರ್ಯಕ್ಕೆ ಮುಂದಾಗುತ್ತಿರುವ ನಕಲಿ ಖಾತೆಯ ಬಳಕೆದಾರರ ವಿರುದ್ಧ ಪೊಲೀಸ್ ಇಲಾಖೇಯು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳದೆ ಇದ್ದರೆ ಮುಂದಿನ ದಿನ ಈ ಕೃತ್ಯವು ಜಿಲ್ಲೆಯ ತಿಳಿಯಾದ ವಾತಾವರಣವನ್ನು ಕೆಡಿಸುವುದರಲ್ಲಿ ಸಂದೇಹವೇ ಇಲ್ಲ ಎಂದೂ ಆತಂಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.