Sirsi: ಶ್ರೀಸ್ವರ್ಣವಲ್ಲಿಯಲ್ಲಿ ದಕ್ಷಿಣ ಭಾರತದ ಕ್ಷೇತ್ರೀಯ ವೇದ ಸಮ್ಮೇಳನ

ಸ್ವರ್ಣವಲ್ಲೀಯಲ್ಲಿ ಮೂರು ದಿನಗಳ ಕಾಲ ಏರ್ಪಾಟು; ವೇದ ಶೋಭಾ -ಶೋಭಾಯಾತ್ರೆ

Team Udayavani, Jan 3, 2024, 3:46 PM IST

10-sirsi

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಜನವರಿ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ದಕ್ಷಿಣ ಭಾರತದ ಕ್ಷೇತ್ರೀಯ ವೇದ ಸಮ್ಮೇಳನ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಮತ್ತು ಉಜ್ಜಯಿನಿ ಮಹರ್ಷಿ ಸಾಂದೀಪನಿ ರಾಷ್ಟ್ರಿಯ ವೇದವಿದ್ಯಾ ಪ್ರತಿಷ್ಠಾನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಕಾರ್ಯಕ್ರಮ ಜ.13ರಂದು ಯತಿಗಳ ದಿವ್ಯಸಾನ್ನಿಧ್ಯ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಯಾಗಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಸ್ವರ್ಣವಲ್ಲೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಕೂಡಲಿ ಶೃಂಗೇರಿ ಮಹಾಸಂಸ್ಥಾನದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಅಭಿನವ ಶಂಕರ ಭಾರತೀ ಮಹಾಸ್ವಾಮಿಗಳವರು ದಿವ್ಯಸಾನ್ನಿಧ್ಯ ನೀಡಲಿದ್ದಾರೆ.

ಅತಿಥಿಗಳಾಗಿ ಶಾಸಕ ಶಿವರಾಮ ಹೆಬ್ಬಾರ್, ಉಜ್ಜಯಿನಿಯ ಮಹರ್ಷಿ ಸಾಂದೀಪನಿ ರಾಷ್ಟ್ರಿಯ ವೇದವಿದ್ಯಾ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೊ. ಪ್ರಫುಲ್ಲಕುಮಾರ ಮಿಶ್ರ, ಕಾರ್ಯದರ್ಶಿ ಪ್ರೋ| ವಿರೂಪಾಕ್ಷ ವಿ. ಜಡ್ಡೀಪಾಲ, ಮಾಜಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಯಲ್ಲಾಪುರದ ಧಾತ್ರೀ ಪೌಂಡೇಶನ್ ಅಧ್ಯಕ್ಷ ಶ್ರೀನಿವಾಸ ಭಟ್ಟ ಅವರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಬೆಂಗಳೂರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೋ| ಕಾ. ಈ. ದೇವನಾಥನ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ವೇದಶೋಭಾ -ಶೋಭಾಯಾತ್ರೆ: ಚತುರ್ವೇದಗಳ ಮಹತ್ವ ಜನಮಾನಸಕ್ಕೆ ತಲುಪಿಸುವ ಉದ್ದೇಶದಿಂದ ಜ. 13ರಂದು 4 ಗಂಟೆಯಿಂದ ಶಿರಸಿ ನಗರದಲ್ಲಿ ವೇದಶೋಭಾ-ಶೋಭಾಯಾತ್ರೆ ಆಯೋಜಿಸಲಾಗಿದೆ. ಶಿರಸಿಯ ಮಾರಿಕಾಂಬಾ ದೇವಾಲಯದಿಂದ ಆರಂಭಗೊಂಡು ಶಿವಾಜಿ ಚೌಕ, ಸಿ. ಪಿ. ಬಝಾರ್, ದೇವಿಕೆರೆ ಮಾರ್ಗವಾಗಿ ಸಾಗಿ ಯೋಗಮಂದಿರದಲ್ಲಿ ಸಮಾಪ್ತಿಗೊಳ್ಳಲಿದೆ.

ಈ ವಿಶಿಷ್ಟ, ವಿನೂತನ ವೇದಮಾತೆಯ ಸೇವಾ ಕೈಂಕರ್ಯದ ಶೋಭಾಯಾತ್ರೆಯಲ್ಲಿ ಸ್ವರ್ಣವಲ್ಲೀ ಮಹಾಸ್ವಾಮಿಗಳು, ಕೂಡಲಿ ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರ ಭಾರತೀ ಮಹಾಸ್ವಾಮಿಗಳು ಮತ್ತು ಸಿದ್ದಾಪುರದ ಶ್ರೀಮನ್ನೆಲೆಮಾವಿನಮಠದ ಶ್ರೀಮಾಧವಾನಂದ ಭಾರತೀ ಮಹಾಸ್ವಾಮಿಗಳು ಸಾನ್ನಿಧ್ಯ ನೀಡಲಿದ್ದಾರೆ.

ವೈದಿಕರು, ವಿದ್ವಾಂಸರು, ವಿದ್ಯಾರ್ಥಿಗಳು, ಮಾತೆಯರು, ವೇದಾಭಿಮಾನಿಗಳು, ಆಸ್ತಿಕ ಮಹನೀಯರು ಸಹಸ್ರಾರು ಸಂಖ್ಯೆಯಲ್ಲಿ ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ವೇದಪಾರಾಯಣ: ಕ್ಷೇತ್ರೀಯ ವೇದ ಸಮ್ಮೇಳನ ಮೂರು ದಿನಗಳ ಕಾಲ ಶ್ರೀ ಸ್ವರ್ಣವಲ್ಲಿಯಲ್ಲಿ ನಡೆಯಲಿದ್ದು, ವೇದಪಾರಾಯಣ, ವಿದ್ವಾಂಸರಿಗೆ ಸಂಮಾನ, ಗೋಷ್ಠೀ, ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂತಾದ ವಿವಿಧ ಆಯಾಮಗಳಲ್ಲಿ ಜರುಗಲಿದೆ.

ಜ. 13ರಿಂದ 15ರವರೆಗೆ ಪ್ರತಿದಿನ ಬೆಳಗ್ಗೆ 8.30 ರಿಂದ 11 ಗಂಟೆಯವರೆಗೆ ಐದು ರಾಜ್ಯಗಳಿಂದ ಆಮಂತ್ರಿತರಾದ ನೂರಕ್ಕೂ ಹೆಚ್ಚು ವೇದವಿದ್ವಾಂಸರಿಂದ ನಾಲ್ಕು ವೇದಗಳ 8 ಶಾಖೆಗಳ ವೇದ ಪಾರಾಯಣವು ಪ್ರತ್ಯೇಕವಾಗಿ 8 ಸ್ಥಳಗಳಲ್ಲಿ ನಡೆಯಲಿದೆ.

ವೇದಗಳ ಕುರಿತು ವಿಶೇಷ ಜ್ಞಾನ ಜನಸಾಮಾನ್ಯರಿಗೂ ಅರಿವಿಗೆ ಬರುವಂತಾಗಬೇಕು ಎಂಬ ಘನೋದ್ದೇಶದಿಂದ ಚತುರ್ವೇದಗಳ ಕುರಿತಾದ ಉಪನ್ಯಾಸಗಳ 4 ಗೊಷ್ಠಿಗಳನ್ನು ಆಯೋಜಿಸಲಾಗಿದೆ.

ಜ. 13ರಂದು ಬೆಳಗ್ಗೆ 12ರಿಂದ ಮೈಸೂರಿನ ವೇದ ವಿಜ್ಞಾನ ವಿಪ್ಪರಮ್ ಸಂಸ್ಥಾಪಕ ವೇ| ಬ್ರ| ಶ್ರೀ ಡಾ|| ವಂಶೀಕೃಷ್ಣ ಘನಪಾಠಿಗಳಿಂದ ಕೃಷ್ಣಯಜುರ್ವೇದದ ಕುರಿತು, ಜ. 14ರಂದು 11ರಿಂದ 1ರವರೆಗೆ ಹಾಸನದ ವೇ.ಬ್ರ.ಶ್ರೀ. ಎಂ. ವಿ. ಕೃಷ್ಣಮೂರ್ತಿ ಘನಪಾಠಿಗಳು ಹಾಗೂ ಬ್ಯಾಡಗಿಯ ವೇ.ಬ್ರ.ಶ್ರೀ.ಗೋಪಾಲಕೃಷ್ಣ ಶಿವಪೂಜಿ ಅವರಿಂದ ಋಗ್ವೇದ ಮತ್ತು ಶುಕ್ಲಯಜುರ್ವೇದದ ಕುರಿತು, ಜ. 14ರಂದು 3 ರಿಂದ 5 ರವರೆಗೆ ಮೈಸೂರಿನ ವೇ.ಬ್ರ.ಶ್ರೀ. ಸುಬ್ರಹ್ಮಣ್ಯ ಭಟ್ಟ ಹಾಗೂ ಕುಮಟಾದ ವೇ.ಬ್ರ.ಶ್ರೀ.ರಮೇಶ ವರ್ಧನ ಅವರಿಂದ ಸಾಮವೇದ ಮತ್ತು ಅಥರ್ವವೇದದ ಕುರಿತು ಉಪನ್ಯಾಸಗಳು ಜರುಗಲಿವೆ.

ಜ. 15ರಂದು ಬೆಳಗ್ಗೆ 11.30 ರಿಂದ 12.30 ರವರೆಗೆ ಮೈಸೂರಿನ ಪ್ರಾಚಾರ್ಯ, ಟಿ. ಎನ್. ಪ್ರಭಾಕರ ಅವರಿಂದ ಮಹಾಭಾರತದ ಕುರಿತು ಉಪನ್ಯಾಸ ಸಂಯೋಜಿಸಲಾಗಿದೆ.

ವಿದ್ವಾಂಸರಿಗೆ ಸಂಮಾನ:

ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಋಗ್ವೇದ ವಿದ್ವಾಂಸ ವೇ.ಬ್ರ.ಶ್ರೀ ಗಣೇಶ ಘನಪಾಠಿಗಳನ್ನು ಹಾಗೂ ಸಾಮವೇದ ವಿದ್ವಾಂಸರಾದ ವಿಜಯವಾಡದ ವೇ.ಬ್ರ.ಸುಂದರರಾಮ ಶ್ರೌತಿಗಳನ್ನು ಸಂಮಾನಿಸಲಾಗುವುದು.

ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ಆಹಿತಾಗ್ನಿಗಳಾದ ವೇ.ಬ್ರ. ಶ್ರೀ. ಗೋವಿಂದ ಪ್ರಕಾಶ ಘನಪಾಠಿಗಳನ್ನು ಹಾಗೂ ಅಥರ್ವವೇದದ ವಿದ್ವಾಂಸರಾದ ಓರಿಸ್ಸಾದ ಪುರಿಯ ವೇ.ಬ್ರ. ಶ್ರೀ. ಕುಂಜಬಿಹಾರೀ ಉಪಾಧ್ಯಾಯರನ್ನು ಸಂಮಾನಿಸಲಾಗುವುದು.

ಜ. 14ರಂದು ಸಾಯಂಕಾಲ 5.30 ರಿಂದ ವಿ|| ಸುಬ್ರಾಯ ಭಟ್ಟ, ವಿ. ಗೀತಾ ಚಿನ್ನಾಪುರ ಅವರಿಂದ ಭಕ್ತಿಸಂಗೀತ, ಶ್ರೀ ಸ್ವರ್ಣವಲ್ಲಿ ಮಾತೃವೃಂದದವರಿಂದ ಭಜನಾಮೃತ ಕಾರ್ಯಕ್ರಮ ನಡೆಯಲಿದೆ.

ಜ. 15ರಂದು 3.30 ರಿಂದ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದ್ದು,  ಸ್ವರ್ಣವಲ್ಲೀ ಶ್ರೀ ಶ್ರೀಗಳು, ಕೂಡಲಿ ಶೃಂಗೇರಿ ಶ್ರೀ ಶ್ರೀಗಳವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಅಭ್ಯಾಗತರಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದ ಅನಂತಕುಮಾರ ಹೆಗಡೆ, ಶಾಸಕ ಭೀಮಣ್ಣ ನಾಯ್ಕ ಹಾಗೂ ಉಜ್ಜಯಿನಿಯ ಮಹರ್ಷಿ ಸಾಂದೀಪನಿ ರಾಷ್ಟ್ರಿಯ ವೇದವಿದ್ಯಾ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೊ. ಪ್ರಫುಲ್ಲಕುಮಾರ ಮಿಶ್ರ ಹಾಗೂ ಕಾರ್ಯದರ್ಶಿ ಪ್ರೋ. ವಿರೂಪಾಕ್ಷ ವಿ. ಜಡ್ಡೀಪಾಲ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.