Sirsi: ಫಂಡರಾಪುರಕ್ಕೆ ವಿಶೇಷ ರೈಲ್ವೆ: ಕಾಗೇರಿ ಮನವಿಗೆ ಕೇಂದ್ರ ಸಚಿವರ ತಕ್ಷಣ ಸ್ಪಂದನೆ
Team Udayavani, Jun 25, 2024, 5:27 PM IST
ಶಿರಸಿ: ವಾರಕರಿ ಸಂಪ್ರದಾಯದವರು ಫಂದರಾಪುರ ವಾರಿ ಆಚರಣೆ ಹಿನ್ನೆಲೆ ಫಂಡರಾಪುರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆ ಯಶವಂತಪುರ -ಫಂಡರಾಪುರ ಎಕ್ಸ್‌ಪ್ರೆಸ್ ರೈಲನ್ನು (ಸಂಖ್ಯೆ-16541) ವಾರಕ್ಕೊಮ್ಮೆ ಬದಲಾಗಿ ಜೂನ್ 25 ರಿಂದ ಜುಲೈ 30ರ ವರೆಗೆ ಪ್ರತಿ ತ್ಯ ಸಂಚರಿಸುವಂತೆ ಮಾಡಬೇಕು ಎನ್ನುವ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಡಿದ ಮನವಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಕ್ಷಣ ಸ್ಪಂದಿಸಿದ್ದಾರೆ.
ನವದೆಹಲಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು. ಜೂನ್ 25 ರಿಂದ ಜುಲೈ 30ರವರೆಗೆ ರೈಲು ಪ್ರತಿದಿನ ಚಲಿಸಿದರೆ ಅಪಾರ ಸಂಖ್ಯೆಯ ಯಾತ್ರಾರ್ಥಿಗಳಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ. ಆದ್ದರಿಂದ ಈ ಮನವಿಯನ್ನು ಪರಿಗಣಿಸಿ ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ನಿತ್ಯ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ವಿನಂತಿಸಿದರು.
ತಕ್ಷಣ ಸ್ಪಂದಿಸಿದ ಸಚಿವ ಅಶ್ವಿನಿ ವೈಷ್ಣವ್, ಈ ಬಗ್ಗೆ ಕೂಡಲೆ ಅಧಿಕಾರಿಗಳ ಜೊತೆ ಮಾತನಾಡಿ, ಹುಬ್ಬಳ್ಳಿಯಿಂದ ಪಂಡರಾಪುರಕ್ಕೆ ಜೂನ್ 28 ಹಾಗೂ 29 ರಂದು ವಿಶೇಷ ರೈಲು ಪ್ರಯಾಣಿಸಲಿದೆ ಎಂಬ ಭರವಸೆ ನೀಡಿ, ಅಧಿಕೃತ ಪ್ರಕಟನೆ ಹೊರಡಿಸಿದರು.
ಈ ಮೊದಲು ನಿಟ್ಟೂರಿನ ರಮೇಶ್ ಎಸ್. ನಾರ್ವೇಕರ್ ಮತ್ತು ಖಾನಾಪುರದ ಶಾಂತಾರಾಮ ಗಂಗಾರಾಮ ಹೆಬ್ಬಾಳ್ಕರ್ ಅವರು ಹುಬ್ಬಳ್ಳಿಯಿಂದ ಫಂಡರಾಪುರಕ್ಕೆ ರೈಲು ಸೇವೆಯ ಸಮಸ್ಯೆಯ ಕುರಿತು ವಾರಕರಿಯ ಸಂಪ್ರದಾಯದ ಜನರ ಪರವಾಗಿ ಕಾಗೇರಿಗೆ ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆ ಕಾಗೇರಿ ಕೇಂದ್ರ ಸಚಿವರನ್ನು ಭೇಟಿಯಾಗಿ ಈ ಕುರಿತು ಮನವಿ ಮಾಡಿ, ರೈಲಿನ ಅಗತ್ಯತೆಯನ್ನು ಮನದಟ್ಟು ಮಾಡಿದರು. ತಮ್ಮ ಮನವಿಗೆ ಸ್ಪಂದಿಸಿದ ಸಚಿವರಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಧನ್ಯವಾದ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.