Dandeli ವಿದ್ಯುತ್ ಬಿಲ್ ಏರಿಕೆಯ ವಿರುದ್ಧ ಸಣ್ಣ ಕೈಗಾರಿಕೋದ್ಯಮಿಗಳ ಪ್ರತಿಭಟನೆ
Team Udayavani, Jun 22, 2023, 10:19 PM IST
ದಾಂಡೇಲಿ : ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ನಗರದ ಅಂಬೇವಾಡಿ ಕೈಗಾರಿಕಾ ವಸಾಹತು ಪ್ರದೇಶ ವ್ಯಾಪ್ತಿಯಲ್ಲಿ ಬರುವ ಹಾಗೂ ಇನ್ನಿತರ ಸಣ್ಣ ಕೈಗಾರಿಕೋದ್ಯಮಿಗಳು ಇಂದು ಗುರುವಾರ ತಮ್ಮ ಉತ್ಪಾದನಾ ಚಟುವಟಿಕೆಯನ್ನು ಸ್ಥಗಿತಗೊಳಿಸಿ, ಆನಂತರ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ದಾಂಡೇಲಿ ನಗರದಲ್ಲಿರುವ ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಪ್ರತಿಭಟನೆಯನ್ನು ನಡೆಸಿದರು.
ವಿದ್ಯುತ್ ದರ ಏರಿಕೆಯಾಗಿರುವುದನ್ನು ಕಡಿಮೆಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ಉಪ ತಹಶೀಲ್ದಾರ್ ರಾಘವೇಂದ್ರ ಪೂಜೇರಿಯವರ ಮೂಲಕ ನೀಡಲಾಯ್ತು. ಮನವಿಯಲ್ಲಿ ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಿ ಸುಧಾರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ವಿದ್ಯುತ್ ದರವನ್ನು ದುಪ್ಪಟ್ಟು ಏರಿಕೆ ಮಾಡಿರುವುದರಿಂದ ಸಣ್ಣ ಕೈಗಾರಿಕೆಗಳನ್ನು ನಡೆಸಲು ಕಷ್ಟವಾಗತೊಡಗಿದೆ. ಸಣ್ಣ ಕೈಗಾರಿಕೆಗಳನ್ನು ನಂಬಿರುವ ನಗರದ ಸಾವಿರಾರೂ ಕಾಮರ್ಿಕರ ಬದುಕು ಬೀದಿಗೆ ಬೀಳುವ ಸಾಧ್ಯತೆಯಿದೆ. ಕಾರ್ಮಿಕರು ಮತ್ತು ಸಣ್ಣ ಕೈಗಾರಿಕೋದ್ಯಮಿಗಳ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ವಿದ್ಯುತ್ ದರವನ್ನು ಕಡಿಮೆ ಮಾಡಬೇಕು. ಇಲ್ಲವಾದಲ್ಲಿ ಸಣ್ಣ ಕೈಗಾರಿಕೆಗಳು ಸ್ಥಗಿತಗೊಂಡು ಕಾರ್ಮಿಕರ ಬದುಕು ಅತಂತ್ರವಾಗಲಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಈ ಸಂದರ್ಭದಲ್ಲಿ ಸಣ್ಣ ಕೈಗಾರಿಕೋದ್ಯಮಿಗಳಾಗಿರುವ ಪ್ರೇಮಾನಂದ ಗವಸ್, ಅಶೋಕ್.ಎನ್.ಸಾಳಸಕರ್, ಅನಿಲ್ ದಂಡಗಲ್, ರಫೀಕ್ ಖಾನ್, ಜಾನ್ಸನ್ ರೋಡ್ರಿಗಸ್, ಸುನೀಲ್ ಸೋಮನಾಚೆ, ರಾಜೇಸಾಬ ಜಂಬಗಿ, ಜಾಕಿ.ಬಿ.ಡಿಸೋಜಾ, ಸಂತಾನ ಫರ್ನಾಂಡೀಸ್, ಅಲ್ಲಾವುದ್ದೀನ್ ಚಮನಸಾಬ್ ನದಾಫ್, ಚಾಂದಸಾಬ್ ಕಿಲ್ಲೇದಾರ್, ಮಹಮ್ಮದ್ ಸಾದೀಕ್ ಸಂಪಗಾಂವಕರ್, ಅಶೋಕ್ ನಾಯ್ಕ, ಧ್ಯಾನೇಶ್ವರ.ಎಂ.ಗಾಂವಕರ, ಜೇಮ್ಸ್ ಕಲಕೋಟಿ, ಅಯೂಬ್ ಖಾನ್, ಮೋಜಸ್ ಇಸಾ, ಅನಿಲ್.ಕೆ.ಜಕನಾಚೆ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.