ಹತ್ತು ಬಡ ಕುಟುಂಬಕ್ಕೆ ಸೌರ ಬೆಳಕು ಭಾಗ್ಯ!

ನಮ್ಮನೆ ಹಬ್ಬದಲ್ಲಿ ಘೋಷಿಸಿದ ಯೋಜನೆ ; ಕರ್ಣಾಟಕ ಬ್ಯಾಂಕ್‌ ಶಿಕ್ಷಣಕ್ಕಾಗಿ ಬೆಳಕು ಅಡಿ ಅನುಷ್ಠಾನ

Team Udayavani, Sep 5, 2022, 4:05 PM IST

15

ಶಿರಸಿ: ಬೆಳಕೇ ಇಲ್ಲದ, ಬೆಳಕಿದ್ದೂ ಮಳೆಗಾಲದಲ್ಲಿ ನಿರಂತರ ವಿದ್ಯುತ್‌ ಪೂರೈಕೆಯ ಸಮಸ್ಯೆಯಲ್ಲಿದ್ದ ಪ್ರತಿಭಾವಂತ ಮಕ್ಕಳಿದ್ದ ಮನೆಗಳಿಗೆ ಕರ್ಣಾಟಕ ಬ್ಯಾಂಕ್‌ ಹಾಗೂ ಭಾರತೀಯ ವಿಕಾಸ ಟ್ರಸ್ಟ್‌ ಜತೆಯಾಗಿ ಸೆಲ್ಕೋ ಸೋಲಾರ್‌ ಸಂಸ್ಥೆ ಉಚಿತವಾಗಿ ಬೆಳಕಿನ ಭಾಗ್ಯ ಒದಗಿಸಿದೆ.

ಶಿರಸಿ, ಸಿದ್ದಾಪುರ, ಯಲ್ಲಾಪುರ, ಅಂಕೋಲಾ ತಾಲೂಕಿನ ಹತ್ತು ಕುಟುಂಬಗಳಿಗೆ ಸೌರ ವಿದ್ಯುತ್‌ ಕೊಡಲಾಗುತ್ತಿದೆ. ಗಣೇಶ ಹಬ್ಬದ ಮೊದಲೇ ಐದಕ್ಕೂ ಅಧಿಕ ಕುಟುಂಬಗಳಿಗೆ ಸೌರ ಬೆಳಕು ನೀಡಲಾಗಿದ್ದು, ಮಾಸಾಂತ್ಯದೊಳಗೆ ಉಳಿದ ಫಲಾನುಭವಿ ಮನೆಗಳಿಗೂ ಸೌರ ಬೆಳಕು ಬೆಳಗಲಿದೆ.

ನಮ್ಮನೆ ಹಬ್ಬದಲ್ಲಿ ಘೋಷಣೆ: ಕಳೆದ ವರ್ಷ ಡಿಸೆಂಬರ್‌ನಲ್ಲಿ ವಿಶ್ವಶಾಂತಿ ಸೇವಾ ಟ್ರಸ್ಟ್‌ ನಡೆಸಿದ ನಮ್ಮನೆ ಹಬ್ಬದ ದಶಮಾನೋತ್ಸವದಲ್ಲಿ ನಮ್ಮನೆ ಪ್ರಶಸ್ತಿ ಸ್ವೀಕರಿಸಿದ್ದ ಸೆಲ್ಕೋ ಇಂಡಿಯಾದ ಸಿಇಒ ಮೋಹನ ಭಾಸ್ಕರ ಹೆಗಡೆ ಅವರು ಟ್ರಸ್ಟ್‌ ಆಯ್ಕೆ ಮಾಡಿಕೊಟ್ಟ ಓದುವ ಮಕ್ಕಳಿರುವ ಐದು ಕುಟುಂಬಗಳಿಗೆ ಉಚಿತವಾಗಿ ಸೌರ ಬೆಳಕಿನ ನೆರವು ಒದಗಿಸುವುದಾಗಿ ಪ್ರಕಟಿಸಿದ್ದರು. ಆ ಯೋಜನೆ ಇಂದು ಕರ್ನಾಟಕ ಬ್ಯಾಂಕ್‌ ನೆರವಿನಲ್ಲಿ ಅನುಷ್ಠಾನಕ್ಕೆ ಬಂದಿದೆ.

ಆಯ್ಕೆಗೆ ಹೊಸ ಮಾರ್ಗ!: ಫಲಾನುಭವಿಗಳ ಆಯ್ಕೆಗೆ ವಿಶ್ವಶಾಂತಿ ಸೇವಾ ಟ್ರಸ್ಟ್‌ ಹೊಸ ವಿಧಾನ ಅನುಸರಿಸಿತು. ಶಿಕ್ಷಣ ಇಲಾಖೆ ಮೂಲಕ ವಿದ್ಯಾರ್ಥಿಗಳ ಆಯ್ಕೆ, ಹೆಸ್ಕಾಂ, ಅರಣ್ಯ ಇಲಾಖೆ ಹಾಗೂ ಸಾಮಾಜಿಕ ಪ್ರಮುಖರ ಮೂಲಕ ಅರ್ಹ ಕುಟುಂಬಗಳ ಆಯ್ಕೆಗೆ ಯೋಜಿಸಿತು.

ಶಿಕ್ಷಣ ಇಲಾಖೆ ಡಿಡಿಪಿಐ ಬಸವರಾಜು, ಬಿಇಒ ಎಂ. ಎಸ್‌. ಹೆಗಡೆ, ಹೆಸ್ಕಾಂ ಅಧಿಕಾರಿಗಳಾದ ಧರ್ಮ, ಧಾರವಾಡ ಹಾಲು ಒಕ್ಕೂಟ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಹುಬ್ಬಳ್ಳಿಯ ಉದ್ಯೋಗಿ ಜಗನ್ನಾಥ ಎಂ.ಪಿ., ಭಾಗವತರಾದ ಕೇಶವ ಹೆಗಡೆ ಕೊಳಗಿ, ತುಳಗೇರಿ ಗಜಾನನ ಹೆಗಡೆ, ಕಲಾವಿದ ವೆಂಕಟೇಶ ಹೆಗಡೆ ಬೊಗ್ರಿಮಕ್ಕಿ, ಲಕ್ಷ್ಮೀ ನಾರಾಯಣ ಶಿರಗುಣಿ, ಅಂಕಣಕಾರ ವೈಶಾಲಿ ವಿ.ಪಿ. ಹೆಗಡೆ, ಗ್ರಾಪಂ ಸದಸ್ಯ ಸಂದೇಶ ಭಟ್ಟ ಬೆಳಖಂಡ ಸೇರಿದಂತೆ ಇತರರು ಫಲಾನುಭವಿಗಳ ಆಯ್ಕೆಗೆ ನೆರವಾದರು.

ಹೇಳಿದ್ದು ಐವರಿಗೆ, ಕೊಟ್ಟಿದ್ದು 10 ಕುಟುಂಬಕ್ಕೆ!: ಸೆಲ್ಕೊ ಸಂಸ್ಥೆಯ ಸಿಇಒ ಮೋಹನ ಹೆಗಡೆ ಅವರು ಕರ್ಣಾಟಕ ಬ್ಯಾಂಕ್‌ ಹಾಗೂ ಭಾರತೀಯ ವಿಕಾಸ ಟ್ರಸ್ಟ್‌, ಶಿಕ್ಷಣಕ್ಕಾಗಿ ಬೆಳಕು ಯೋಜನೆ ಅಡಿಯಲ್ಲಿ ಐದು ಕುಟುಂಬಗಳಿಗೆ ಬೆಳಕು ನೀಡುವ ಪ್ರಸ್ತಾಪ ಮಾಡಿದ್ದರು. ಆದರೆ, ಆಯ್ಕೆ ವೇಳೆ ಐದಕ್ಕಿಂತ ಅಧಿಕ ಕುಟುಂಬಗಳು ಸಿಕ್ಕ ಕಾರಣಕ್ಕೆ ಇನ್ನೂ ಹೆಚ್ಚುವರಿಯಾಗಿ ಒಟ್ಟೂ ಹತ್ತು ಕುಟುಂಬಗಳಿಗೆ ನೆರವಾಗುವ ವಾಗ್ಧಾನ ನೀಡಿದರು !

ಕಾಡಿನ ನಡುವೆ ಇರುವ ಮನೆಗೆ ಬೆಳಕಿಲ್ಲದೇ, ಮಕ್ಕಳನ್ನು ಬಂಧುಗಳ ಮನೆಯಲ್ಲಿ ಉಳಿಸಿ ಕಳಿಸುತ್ತಿರುವವರು, ಓದಲು ಸೀಮೆ ಎಣ್ಣೆ ದೀಪಕ್ಕೂ ತತ್ವಾರ ಪಡುವ ಕುಟುಂಬಗಳು, ಪಕ್ಕದ ಮನೆಯಿಂದ ವಿದ್ಯುತ್‌ ಸಂಪರ್ಕ ಪಡೆದು ಒಂದು ಬಲ್ಬ ಹಾಕಿಕೊಂಡವರು, ವೃದ್ಧರಾದ ಅಜ್ಜಿ, ಮೊಮ್ಮಕ್ಕಳು ಇದ್ದರೂ ತಾಂತ್ರಿಕ ಕಾರಣದಿಂದ ಬೆಳಕು ಸಿಗದವರು, ಆಧಾರ ಕಾರ್ಡ್‌ನ ಹೆಸರು ವ್ಯತ್ಯಾಸದಿಂದ ಬೆಳಕು ಸಿಗದವರು, ಕುಟುಂಬದ ಆಧಾರದ ಅಪ್ಪನಿಗೇ ಆರೋಗ್ಯ ಸಮಸ್ಯೆ ಇದ್ದೂ ಸಾಧನೆ ಮಾಡಿದ ವಿದ್ಯಾರ್ಥಿನಿ, ಕರೆಂಟ್‌ ಇದ್ದೂ ಗಾಳಿ ಮಳೆ ಬಂದರೆ ಕೈಕೊಡುವ ಬೆಳಕಿನ ಮನೆಗೆ, ಹೀಗೆ ಎಲ್ಲ ಬಗೆಯ ಸಮಸ್ಯೆ ಉಳ್ಳವರೂ ಫಲಾನುಭವಿ ಆಯ್ಕೆ ಪಟ್ಟಿಯಲ್ಲಿ ಇದ್ದರು. ನಾಲ್ಕಕ್ಕೂ ಅಧಿಕ ಮಕ್ಕಳ ಕುಟುಂಬಕ್ಕೆ ಬೆಳಕಿಲ್ಲ, ಬೆಳಕಿನ ತೊಂದರೆ ಇರುವುದನ್ನು ಸ್ವತಃ ಆಯಾ ಶಾಲಾ ಮುಖ್ಯಾಧ್ಯಾಪಕರೂ ಶಿಫಾರಸ್ಸು ಮಾಡಿದ್ದೂ ವಿಶೇಷವೇ ಆಗಿದೆ.

ಯಾರಿಗೆಲ್ಲ ಬೆಳಕಿನ ಸ್ಪರ್ಶ?: ಶಿರಸಿ ನಗರದಿಂದ ದೂರ ಇರುವ ಶಿರಗುಣಿ ಸಮೀಪದ ರಾಯರಮನೆ ಮಂಜುನಾಥ ಗೌಡ, ಸುಮಿತ್ರಾ ಮರಾಠಿ ಬಾಳೆಕಾಯಿಮನೆ, ದಿನೇಶ ಅರಸಿಕೆರೆ, ರಮ್ಯಾ ಮರಾಠಿ ಬಾಳೆಕಾಯಿಮನೆ, ಶಿರಸಿ, ಕರಿಗುಂಡಿ ಸೀತಾ ಜೋಗಳೇಕರ್‌, ಸಿದ್ದಾಪುರದ ಕಲಾವಿದ, ಗೃಹೋದ್ಯೋಗಿ ವೆಂಕಟ್ರಮಣ ಹೆಗಡೆ ಮಾದಿನಕಳ್ಳು, ಯಲ್ಲಾಪುರ ಹೆಮ್ಮಾಡಿ ಸಿಂಧೂ ಮಧುಕೇಶ್ವರ ನಾಯ್ಕ, ಬನವಾಸಿ ಭಾಸಿ ಸಣ್ಮನೆ ಸಂದೇಶ ಕಾಳೇನರ್‌, ರಮ್ಯಾ ಬಂದಿಗೇರ ಸಣ್ಮನೆ, ಅಂಕೋಲಾದ ಅಚವೆ ತಿಮ್ಮಾ ಗೌಡ ಹುಡಗೋಡ ಕುಟುಂಬ ಆಯ್ಕೆ ಆಗಿದೆ.

ಕರೆಂಟ್‌ ಇಲ್ಲದೇ ಮಕ್ಕಳಿಗೆ ಓದುವ ಸಮಸ್ಯೆ ಆಗುತ್ತಿತ್ತು. ಪರೀಕ್ಷೆ ಎದುರಿಗೇ ಕರೆಂಟ್‌ ಇರುತ್ತಿರಲಿಲ್ಲ, ಬೆಳಕು ನೀಡಿ ಉಪಕಾರ ಆಗಿದೆ ಎಂದು ಫಲಾನುಭವಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಕರ್ಣಾಟಕ ಬ್ಯಾಂಕ್‌ ಹಾಗೂ ಸೆಲ್ಕೋ ಸಂಸ್ಥೆಯ ನೆರವಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕ ಬ್ಯಾಂಕ್‌ ಹಾಗೂ ಭಾರತೀಯ ವಿಕಾಸ ಟ್ರಸ್ಟ್‌ ಸಹಭಾಗಿತ್ವದಲ್ಲಿ ಶಿಕ್ಷಣಕ್ಕಾಗಿ ಬೆಳಕು ಯೋಜನೆ ಅನ್ವಯ ಈ ಕೆಲಸ ಆಗಿದೆ. ಬ್ಯಾಂಕ್‌ನ ಎಂ.ಡಿ. ಮಹಾಬಲೇಶ್ವರ ಅವರ ಅತ್ಯಂತ ಯಶಸ್ವೀ ಕನಸು ಇದು. ಬೆಳಕಿಲ್ಲದೇ ವಿದ್ಯಾಭ್ಯಾಸಕ್ಕಾಗಿ ಅವರು ಪಡುತ್ತಿರುವ ಶ್ರಮ ಇದರಿಂದ ಪರಿಹಾರ ಆಯಿತು ಎಂಬುದು ಸಮಾಧಾನ. -ಮೋಹನ ಭಾಸ್ಕರ ಹೆಗಡೆ, ಸಿಇಒ ಸೆಲ್ಕೋ ಇಂಡಿಯಾ

ಗ್ರಾಮೀಣ ಭಾಗದಲ್ಲಿ ಸಾಂಸ್ಕೃತಿಕ ಚಟುವಟಿಕೆ ಉಳಿಸಬೇಕು ಎಂದು ಆರಂಭಿಸಿದ ನಮ್ಮನೆ ಹಬ್ಬ ಈಗ ಹತ್ತು ಕುಟುಂಬಗಳಿಗೆ ಕರ್ಣಾಟಕ ಬ್ಯಾಂಕ್‌ ಹಾಗೂ ಸೆಲ್ಕೊ ಸಂಸ್ಥೆ ಮೂಲಕ ಮನೆಗಳಿಗೆ ಬೆಳಕಾಗುತ್ತಿರುವುದು ಖುಷಿ ತಂದಿದೆ. –ಗಾಯತ್ರೀ ರಾಘವೇಂದ್ರ, ಟ್ರಸ್ಟ್‌ ಕಾರ್ಯದರ್ಶಿ

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

10

Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

4-

Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.