ಸೈನಿಕರ ದೇಶಸೇವೆ ಅಮೋಘ: ದೇಶಪಾಂಡೆ
ಮಾಜಿ ಸೈನಿಕರಿಗೆ ವೀರ ನಮನ-ಸನ್ಮಾನ ; ಜನಪರ ಕಾರ್ಯಕ್ರಮಕ್ಕೆ ಶ್ಲಾಘನೆ
Team Udayavani, Jun 7, 2022, 12:35 PM IST
ದಾಂಡೇಲಿ: ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಆಶ್ರಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ದಾಂಡೇಲಿ ತಾಲೂಕಿನ ನಿವೃತ್ತ ಸೇನಾನಿಗಳ ಸಮ್ಮಿಲನ, ವೀರ ನಮನ-ಸನ್ಮಾನ ಕಾರ್ಯಕ್ರಮವನ್ನು ನಗರದ ಹಳೆ ದಾಂಡೇಲಿಯ ಹಾರ್ನ್ಬಿಲ್ ಸಭಾಭವನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ನಿವೃತ್ತ ಸೇನಾಧಿಕಾರಿ ಬ್ರಿಗೇಡಿಯರ್ ಸುಧೀಂದ್ರ ಇಟ್ನಾಳ ಅವರು ಉದ್ಘಾಟಿಸಿ ಮಾತನಾಡಿ, ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ದೇಶ ಸೇವೆ ಮಾಡುತ್ತಿರುವ ಸಂಸ್ಥೆಯಾಗಿದೆ. ಯೋಧರು ದೇಶದ ಗಡಿ ಕಾಯುವ ಮೂಲಕ ದೇಶ ಸೇವೆ ಮಾಡಿದರೆ, ವಿಆರ್‌ಡಿಎಂ ಟ್ರಸ್ಟ್ ಹಲವು ಸ್ತರಗಳಲ್ಲಿ ಸೇವಾ ಕೈಂಕರ್ಯಗಳನ್ನು ಮಾಡುವುದರ ಮೂಲಕ ರಾಷ್ಟ್ರಸೇವೆ ಮಾಡುತ್ತಿದೆ ಎಂದರು.
ಬಂಗೂರನಗರ ಪದವಿ ಮಹಾ ವಿದ್ಯಾಲಯದ ಪ್ರಾಚಾರ್ಯ ಡಾ| ಆರ್.ಜಿ. ಹೆಗಡೆ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಒತ್ತಡದ ನಡುವೆಯು ಇಂತಹ ಜನಪರ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವ ಆರ್.ವಿ. ದೇಶಪಾಂಡೆಯವರ ಸೇವಾ ಕಾರ್ಯಗಳನ್ನು ಕೊಂಡಾಡಿದರು. ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ವಿಷ್ಣು ಉಪ್ಪಾರ ಅವರು ನಿವೃತ್ತ ಸೈನಿಕರ ಸಂಘಕ್ಕೊಂದು ಜಾಗ ಒದಗಿಸಿಕೊಡುವಂತೆ ಮನವಿ ಮಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು ಹಾಗೂ ವಿಆರ್‌ಡಿಎಂ ಟ್ರಸ್ಟ್‌ನ ಅಧ್ಯಕ್ಷ ಆರ್ .ವಿ.ದೇಶಪಾಂಡೆಯವರು ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿಯೂ ದೇಶಸೇವೆ ಮಾಡುವ ಸೈನಿಕರ ಕರ್ತವ್ಯ ಅತ್ಯಂತ ಅಮೋಘವಾಗಿದೆ. ತಮ್ಮೆಲ್ಲ ಸುಖವನ್ನು ಬದಿಗೊತ್ತಿ ದೇಶಸೇವೆ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ. ಜೀವನದ ಮಹತ್ವದ ಘಟ್ಟದಲ್ಲಿರುವಾಗಲೆ ನಿವೃತ್ತಿಯನ್ನು ಹೊಂದುವ ಸೈನಿಕರ ಹಲವಾರು ಬೇಡಿಕೆಗಳು ನ್ಯಾಯೋಚಿತವಾಗಿದೆ ಎಂದು ಹೇಳಿ, ನಿವೃತ್ತ ಸೈನಿಕರ ಸಂಘಕ್ಕೆ ಆದ್ಯತೆಯಡಿ ಜಾಗವನ್ನು ನೀಡುವಂತೆ ನಗರ ಸಭೆಗೆ ಮನವಿಯನ್ನು ಮಾಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಿಗೆ ಹಾಗೂ ಮೃತ ಯೋಧರ ಕುಟುಂಬ ವರ್ಗದವರನ್ನು ಗೌರವಿಸಲಾಯಿತು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಶಿರಸಿಯ ಜನನಿ ಸಂಗೀತ ಸಂಸ್ಥೆ ಕಲಾವಿದರಿಂದ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರು, ನಗರ ಸಭೆಯ ಸದಸ್ಯರು, ನಾಗರಿಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.