ಬಿತ್ತನೆ ಬೀಜ ವಿತರಣೆಗೆ ಚಾಲನೆ
Team Udayavani, May 14, 2020, 5:09 AM IST
ಭಟ್ಕಳ: ತಾಲೂಕಿನ ಸೂಸಗಡಿ ಹೋಬಳಿ ಹಾಗೂ ಮಾವಳ್ಳಿ ಹೋಬಳಿಗಳಲ್ಲಿ ಸಾವಿರಾರು ರೈತರು ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದು, ರೈತರಿಗೆ ಅನುಕೂಲವಾಗುವಂತೆ ಕೃಷಿ ಇಲಾಖೆಯಿಂದ ಬೀಜ ವಿತರಣೆ ಕಾರ್ಯಕ್ಕೆ ಮಾವಳ್ಳಿ ಹೋಬಳಿಯಲ್ಲಿ ಶಾಸಕ ಸುನೀಲ್ ನಾಯ್ಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಟ್ಕಳ ನಗರ ಹಾಟ್‌ಸ್ಪಾಟ್ ಆಗಿದ್ದರೂ ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆಗೊಳಿಸಲಾಗಿದೆ. ಕೃಷಿಕರು ಕೃಷಿ ಇಲಾಖೆಯಿಂದ ಭತ್ತದ ಬೀಜ ಖರೀದಿಸುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದರಲ್ಲದೇ, ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ಕೂಡಾ ಮಾಸ್ಕ್ ಹಾಕುವುದರ ಜೊತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಕರೆ ನೀಡಿದರು. ಅಧಿಕಾರಿಗಳ ಬಳಿ ಭತ್ತದ ಬೀಜ ದಾಸ್ತಾನು ಕುರಿತು ಶಾಸಕರು ಮಾಹಿತಿ ಪಡೆದುಕೊಂಡರು.
ಮಾವಳ್ಳಿ ಹೋಬಳಿಯ ಶಿರಾಲಿಯ ಸಾರದೊಳೆ, ಕಾಯ್ಕಿಣಿಯ ತೆರ್ನಮಕ್ಕಿ ಮತ್ತು ಬೈಲೂರಿನಲ್ಲಿ ಭತ್ತದ ಬೀಜಗಳನ್ನು ವಿತರಿಸಲಾಗುತ್ತಿದ್ದು, ಎಂಟಿಯು 1001, ಎಂಓ-4, ಜಯಾ ತಳಿ ಸೇರಿದಂತೆ ಒಟ್ಟೂ 550 ಕ್ವಿಂಟಾಲ್ ಬೀಜಗಳನ್ನು ದಾಸ್ತಾನು ಇಡಲಾಗಿದೆ. ಭಟ್ಕಳದ ರೈತ ಸಂಪರ್ಕ ಕೇಂದ್ರಕ್ಕೆ 170 ಕ್ವಿಂಟಾಲ್ ಭತ್ತದ ಬೀಜ ದಾಸ್ತಾನಿದ್ದು, ಕೆಲವೇ ದಿನಗಳಲ್ಲಿ ರೈತರಿಗೆ ವಿತರಿಸುವ ಕಾರ್ಯ ಮಾಡುತ್ತೇವೆಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರದೊಳೆಯಲ್ಲಿ ಒಂದೇ ದಿನ 160 ರೈತರಿಗೆ ಭತ್ತದ ಬೀಜಗಳನ್ನು 200 ಕ್ವಿಂಟಲ್ ವಿತರಿಸಲಾಗಿದೆ. ಈ ಸಂದರ್ಭದಲ್ಲಿ ಕೃಷಿ ಅಧಿಕಾರಿಗಳಾದ ಜಿ.ಎನ್. ನಾಯ್ಕ, ಜಿ.ಎಲ್. ನಾಯ್ಕ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ
Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.