Special Tribal Scheme; ಆರು ತಿಂಗಳಿನಿಂದ ಸಿದ್ದಿ ಜನರಿಗೆ ಸಿಗುತ್ತಿಲ್ಲ ಪೌಷ್ಟಿಕ ಆಹಾರ

Team Udayavani, Nov 20, 2023, 2:20 PM IST

Special Tribal Scheme; ಆರು ತಿಂಗಳಿನಿಂದ ಸಿದ್ದಿ ಜನರಿಗೆ ಸಿಗುತ್ತಿಲ್ಲ ಪೌಷ್ಟಿಕ ಆಹಾರ

ಕಾರವಾರ: ವಿಶೇಷ ಗಿರಿಜನ ಯೋಜನೆಯಡಿ ಪೌಷ್ಟಿಕ ಆಹಾರ ಉತ್ತರ ಕನ್ನಡದ‌ ಸಿದ್ದಿಗಳಿಗೆ ಕಳೆದ ಆರು ತಿಂಗಳಿಂದ ನೀಡಿಲ್ಲ ಎಂದು ಕರ್ನಾಟಕ ರಾಜ್ಯ ಸಿದ್ದಿ ಬುಡಕಟ್ಟು ಜನಪರ ಸಂಘ ರಾಜ್ಯಾಧ್ಯಕ್ಷ ಬೆನೆತ್ ಸಿದ್ದಿ ಆರೋಪಿಸಿದರು.

ಕಾರವಾರದ ಪತ್ರಿಕಾಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಮಾಡಿದ ಅವರು 2011 ರಿಂದ ವರ್ಷದ ಪ್ರತಿ ಆರು ತಿಂಗಳು ಗಿರಿಜನರಿಗೆ ಪೌಷ್ಟಿಕ ಆಹಾರ ಕೊಡುವ ಯೋಜನೆ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಾರಂಭವಾಗಿತ್ತು. ಜೂನ್ ನಿಂದ ಡಿಸೆಂಬರ್ ತನಕ ಪ್ರತಿ ತಿಂಗಳು ಜಿಲ್ಲೆಯ ಆರು ಸಾವಿರ ಸಿದ್ದಿ ಬುಡಕಟ್ಟು ಜನಾಂಗಕ್ಕೆ ಪೌಷ್ಟಿಕ ಆಹಾರ ತಲುಪುತ್ತಿತ್ತು. ಆದರೆ 2023 ಜೂನ್ ಜುಲೈ ತಿಂಗಳಿಂದ ಪೌಷ್ಟಿಕ ಆಹಾರ ಸರಬರಾಜಾಗಿಲ್ಲ. ಅಧಿಕಾರಿಗಳು ಆಹಾರ ಸರಬರಾಜಿಗೆ ಟೆಂಡರ್ ಆಗಿಲ್ಲ ಎನ್ನುತ್ತಿದ್ದಾರೆ. ಇದೇ ಮೊದಲ ಬಾರಿಗೆ ಈ ಸಮಸ್ಯೆ ಉಂಟಾಗಿದೆ ಎಂದು ಬೆನತ್ ಸಿದ್ದಿ ಹೇಳಿದರು.

ಪೌಷ್ಟಿಕ ಆಹಾರ ಬಾರದೆ ಆರು ತಿಂಗಳು ತಡವಾಗಿದೆ. ಈ ಸಲ ಮಳೆ ಸರಿಯಾಗಿ ಬಂದಿಲ್ಲ. ಕಾಡಿನ ವಾಸಿಗಳಾದ ನಮಗೆ ಕೂಲಿ ಸಹ ಸಿಕ್ಕಿಲ್ಲ ಎಂದರು.

ಮಳೆಗಾಲದಲ್ಲಿ ಪೌಷ್ಟಿಕ ಆಹಾರದ ಅವಶ್ಯಕತೆ ಇದೆ. ಈ ಸಲ ನಮ್ಮ ಬುಡಕಟ್ಟು ಜನರು ಉಪವಾಸ ಇರುವಂತಾಗಿದೆ. ಈ ಸಲ ಪೌಷ್ಟಿಕ ಆಹಾರ ಸಿಗದಿದ್ದರೆ, ಡಿಸೆಂಬರ್ ನಲ್ಲಿ ಬೃಹತ್ ಪ್ರತಿಭಟನೆ ಮಾಡ್ತಿವಿ ಎಂದು ಸಿದ್ದಿ ಸಮುದಾಯದ ಗೌರವಾಧ್ಯಕ್ಷ ಜಾನ್ ಕೆ. ಸಿದ್ದಿ ಎಂದರು.

ಕಾಡಿನಲ್ಲಿ ವಾಸವಿರುವದ ಸಿದ್ದಿಗಳಿಗೆ ಸಮಾಜ ಕಲ್ಯಾಣ ಇಲಾಖೆಯವರು ಪೌಷ್ಟಿಕ ಆಹಾರ ಕೊಡುತ್ತಾರೆ. ಈ ಯೋಜನೆ ಕಳೆದ 13 ವರ್ಷದಿಂದ ನಡಿಯುತ್ತಿದೆ.   ಸಿದ್ದಿಗಳು ಕಾಡಿನ ಕಿರು ಉತ್ಪನ್ನ ಸಂಗ್ರಹಿಸಿ,‌ ಮಾರಾಟ ಮಾಡಿ ಬದುಕುತ್ತೇವೆ. ಈಗ ಕಾಡಿನ ಉತ್ಪನ್ನ ಸಿಗುತ್ತಿಲ್ಲ. ಪೌಷ್ಟಿಕ ಆಹಾರ ಮೊದಲ ಸಾರಿ ಕಳೆದ ಆರು   ತಿಂಗಳಿಂದ ಸಿಕ್ಕಿಲ್ಲ ಎಂದರು.

ಇದನ್ನೂ ಓದಿ:BJP Karnataka; ನಮ್ಮ ಪಕ್ಷದಲ್ಲಿ ಅಸಮಾಧಾನ ಇರುವುದು ಸತ್ಯ: ಬಿ.ವೈ ವಿಜಯೇಂದ್ರ

ಗಿರಿಜನ ಯೋಜನೆ ಅಡಿ, 6000 ಸಿದ್ದಿ ಕುಟುಂಬಗಳಿಗೆ 8 ಕೆಜಿ ಅಕ್ಕಿ, 30 ಕೊಳಿ ಮೊಟ್ಟೆ, 6 ಕೆಜಿ ಬೇಳೆ ಕಾಳು,‌ ಒಂದು ಲೀಟರ್ ನ ಎರಡು ಪ್ಯಾಕೆಟ್ ಅಡುಗೆ ಎಣ್ಣೆ, ಅರ್ಧ ಕೆ.ಜಿ. ತುಪ್ಪ ವಿತರಿಸುತ್ತಿದ್ದರು. ಈ ಸಲ ಟೆಂಡರ್ ಆಗಿಲ್ಲ ಎಂಬ ನೆಪ ಅಧಿಕಾರಿಗಳು ಹೇಳುತ್ತಿದ್ದಾರೆ. ‌ಇದರಿಂದ ಬುಡಕಟ್ಟು ಜನಾಂಗಕ್ಕೆ ತೊಂದರೆಯಾಗಿದೆ‌. ಈ ಸಂಬಂಧ ಜಿಲ್ಲಾಧಿಕಾರಿ, ಸಮಾಜ ಕಲ್ಯಾಣ ಅಧಿಕಾರಿಗೆ ಸೋಮವಾರ ಮನವಿ ನೀಡಿದ್ದೇವೆ ಎಂದು ಬೆನೆತ್ ಸಿದ್ದಿ ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಸಹ ಈ ಸಮಸ್ಯೆ ತರಲಾಗಿದೆ. ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ ಎಂದು ಸಿದ್ದಿ ಬುಡಕಟ್ಟು ಸಮುದಾಯದ ಮುಖಂಡರು ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಸಿದ್ದಿಗಳು ಎಸ್ ಟಿ ಜನಾಂಗದಡಿ ಬರುತ್ತಾರೆ. ಗಿರಿಜನ ಪೌಷ್ಟಿಕ ಆಹಾರ ಸೌಲಭ್ಯದ ಯೋಜನೆ ಬೆಳಗಾವಿ, ಧಾರವಾಡ ಜಿಲ್ಲೆಯ ಸಿದ್ದಿ ಕುಟುಂಬಗಳಿಗೆ ಸಿಗುತ್ತಿಲ್ಲ ಎಂದು ಸಿದ್ದಿ ಬುಡಕಟ್ಟು ಜನಪರ ಸಂಘದ ಅಧ್ಯಕ್ಷ ಬೆನೆತ್ ಸಿದ್ದಿ ಹೇಳಿದರು.

ಥೆರೇಜಾ, ಫಾತಿಮಾ, ಬಸ್ಯ್ಯಾವ್ ಸಿದ್ದಿ ಮುಂತಾದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

10

Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

4-

Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.