ಉತ್ತರ ಕನ್ನಡದ ಸಮಗ್ರ ಅಭಿವೃದ್ಧಿಗೆ ಬದ್ಧ: ಸಂಸದ ಅನಂತಕುಮಾರ ಹೆಗಡೆ
Team Udayavani, Oct 2, 2021, 4:40 PM IST
ಶಿರಸಿ: ಉತ್ತರ ಕನ್ನಡ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ, ಕಡಲ ಅಭಿವೃದ್ಧಿ, ಬೃಹತ್ ಸರಕು ಸಾಗಣೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 4 ಬೃಹತ್ ಯೋಜನೆಗಳ ಕುರಿತಂತೆ ಸಮಗ್ರ ಕಾರ್ಯಸಾಧ್ಯತಾ ವರದಿಗಳನ್ನು ಸಾಗರಮಾಲಾ ಸೆಲ್ ಮತ್ತು ಸಾಗರಮಾಲಾ ಅಭಿವೃದ್ಧಿ ಕಂಪನಿ ಲಿಮಿಟೆಡ್‌ಗೆ ಸಲ್ಲಿಸಲಾಗಿದೆ ಎಂದು ಸಂಸದ ಅನಂತಕುಮಾರ ಹೆಗಡೆ ತಿಳಿಸಿದ್ದಾರೆ.
ಇನ್ನೂ ಎರಡು ಅಭಿವೃದ್ಧಿ ಯೋಜನೆಗಳಿಗಾಗಿ ಸಮಗ್ರ ವರದಿಯನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು. ಈ ಯೋಜನೆಗಳು ಕಾರವಾರ ಬಂದರುಗಳಲ್ಲಿ ಅಗತ್ಯ ಸಲಕರಣೆಗಳನ್ನು ಸ್ಥಾಪಿಸುವುದು, ಕಾರವಾರ ಬಂದರಿನ ಯಾಂತ್ರೀಕರಣ, ಸೀಪ್ಲೇನ್ ಸೌಲಭ್ಯಗಳು ಮತ್ತು ಜಲಮಾರ್ಗ ಅಭಿವೃದ್ಧಿಯಂತಹ ಘಟಕಗಳಗೆ ಮಾತ್ರ ಸೀಮಿತವಾಗಿರದೇ, ಆರ್ಥಿಕ ನೆರವಿನ ಕುರಿತ ಒಪ್ಪಂದಗಳನ್ನು ಒಳಗೊಂಡಿರುವಂತಹ ಪ್ರಸ್ತಾವನೆಗಳನ್ನು ಸಾಗರಮಾಲಾ ಸೆಲ್‌ಗೆ ಸಲ್ಲಿಸಲಾಗಿದೆ ಎಂದಿದ್ದಾರೆ.
ಬಂದರುಗಳು, ಹಡಗು ಮತ್ತು ಜಲಮಾರ್ಗಗಳು, ಸ್ಥಳೀಯ ಜನಸಂಖ್ಯೆ ಹಾಗೂ ಸರಿಸುಮಾರು 30 ಲಕ್ಷ ಪ್ರವಾಸಿಗರನ್ನು ಸಂಪರ್ಕಿಸುವ ಜೊತೆಗೆ ಸಾರಿಗೆ ಮತ್ತು ಬೃಹತ್ ಸರಕು ಸಾಗಾಣಿಕೆ ಅಗತ್ಯತೆಗಳನ್ನು ಪೂರೈಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಇದಲ್ಲದೆ, ಅಭಿವೃದ್ಧಿಪಡಿಸಿದ ಸೌಲಭ್ಯಗಳು ಪಶ್ಚಿಮ ಕರಾವಳಿಯಲ್ಲಿ ಕಡಲ ಕಾರ್ಯಾಚರಣೆಗಳಿಗೆ ಪ್ರಮುಖ ಮುಖ್ಯ ಭೂಮಿಕೆಯಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಆ ಮೂಲಕ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಆದ್ದರಿಂದ, ಭಾರತದ ಸಾಗರ ವಲಯವನ್ನು ಬಲಪಡಿಸುವ ಪ್ರಧಾನ ಮಂತ್ರಿಯವರ ದೂರದೃಷ್ಟಿ ಯೋಜನೆಗಳಿಗೆ ಅನುಮೋದನೆ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಕೇಂದ್ರದ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನವಾಲ ಅವರಿಗೆ ಅನಂತಕುಮಾರ ಹೆಗಡೆ ಅವರು ಪತ್ರ ಮುಖೇನ ವಿನಂತಿಸಿದ್ದಾರೆ ಎಂದು ಪ್ರಕಟನೆಯಲ್ಲಿ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.