ಪಂಪ್‌ಸೆಟ್ ನಿಲ್ಲಿಸಿ: ಕುಡಿವ ನೀರಿಗೆ ಸಹಕರಿಸಿ


Team Udayavani, May 12, 2019, 5:22 PM IST

nc-4

ಕಾರವಾರ: ಕುಡಿಯುವ ನೀರಿನ ಮೂಲವಾಗಿರುವ ನದಿಗಳಿಗೆ ಅಳವಡಿಸಿರುವ ಕೃಷಿ ಪಂಪ್‌ಸೆಟ್‌ಗಳನ್ನು ರೈತರು ಸ್ಥಗಿತಗೊಳಿಸಿ, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ತಿಳಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಈಗಾಗಲೇ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ಹಾಗೂ ಪಟ್ಟಣಗಳಿಗೆ ಗಂಗಾವಳಿ ಮತ್ತು ಅಘನಾಶಿನಿ ನದಿಗಳಿಂದ ನೀರಿನ ಸಂಪರ್ಕ ಪಡೆಯಲಾಗಿದೆ. ಗಂಗವಳಿ ಹಾಗೂ ಅಘನಾಶಿನಿ ನದಿಯಲ್ಲೂ ನೀರಿನ ಹರಿವು ಕಡಿಮೆಯಾಗುತ್ತಿದೆ. ಇಂಥ ಕಷ್ಟಕರ ಸನ್ನಿವೇಶದಲ್ಲಿ ನದಿ ನೀರನ್ನು ಕೃಷಿಗೆ, ತೋಟಗಳಿಗೆ ಬಳಸುವುದು ಸಮಂಜಸವಲ್ಲ. ಜನರ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿರುವುದರಿಂದ ಗಂಗಾವಳಿ, ಅಘನಾಶಿನಿ ನದಿಗಳಿಗೆ ರೈತರು ಪಂಪ್‌ಸೆಟ್‌ಗಳನ್ನು ಅಳವಡಿಸಿಕೊಂಡಿದ್ದಲ್ಲಿ, ತಕ್ಷಣ ಸ್ಥಗಿತಗೊಳಿಸಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ರೈತರಲ್ಲಿ ಮನವಿ ಮಾಡಿದ್ದಾರೆ. ಈ ತಿಂಗಳ ಕೊನೆ ವಾರದೊಳಗೆ ಮಳೆಯಾಗುವ ಸಾಧ್ಯತೆಗಳಿದ್ದು ಕೃಷಿ ಪಂಪ್‌ಸೆಟ್‌ಗಳನ್ನು ಸ್ಥಗಿತಗೊಳಿ ಸುವುದರಿಂದ ಹೆಚ್ಚಿನ ಪ್ರಮಾಣದ ಹಾನಿ ಸಂಭವಿಸುವುದಿಲ್ಲ. ಅಲ್ಲದೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿರುವುದರಿಂದ ಪಂಪ್‌ ಸೆಟ್‌ಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ. ಅದಕ್ಕೆ ರೈತರೂ ಜಿಲ್ಲಾಡಳಿತದೊಂದಿಗೆ ಕುಡಿಯುವ ನೀರನ್ನು ಜನತೆಗೆ ನೀಡುವ ಮಹತ್ತರ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ.

ಈಗಾಗಲೇ ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಸರಬರಾಜು ಮಾಡಲಾಗುತ್ತಿದೆ. ನೀರಿನ ಲಭ್ಯತೆ ಇರುವ ಕಡೆಗಳನ್ನು ಪೈಪ್‌ಲೈನ್‌ಗಳನ್ನು ಮಾಡುವ ಅಥವಾ ಕೊಳವೆ ಭಾವಿಗಳನ್ನು ಮತ್ತಷ್ಟು ಆಳಕ್ಕೆ ತೋಡುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನದಿ ಭಾಗದಲ್ಲಿ ಪಂಪ್‌ಸೆಟ್‌ಗಳನ್ನು ನಿಲ್ಲಿಸುವುದರಿಂದ ಆ ನದಿಗಳಿಂದ ಕೈಗೊಂಡಿರುವ ಕುಡಿಯುವ ನೀರು ಸರಬರಾಜು ಯೋಜನೆಗಳಿಗೆ ಅನುಕೂಲವಾಗುತ್ತವೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

34 ಮಜಿರೆಗಳಿಗೆ 11 ಟ್ಯಾಂಕರ್‌ನಲ್ಲಿ ನೀರು ಪೂರೈಕೆ ಆರಂಭ

ಕುಮಟಾ: ತಾಲೂಕಿನ ಎಲ್ಲೆಡೆ ನೀರಿನ ಬವಣೆ ಹೆಚ್ಚುತ್ತಲೇ ಇದ್ದು, ಟ್ಯಾಂಕರ್‌ ಮೂಲಕ ನೀರನ್ನು ಪೂರೈಸುವ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ.

ನೀರಿನ ಬರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜನ ನೀರಿಗಾಗಿ ಕಿ.ಮೀ.ಗಳಷ್ಟು ದೂರ ಸಾಗಿ ನೀರು ತರುವ ಪರಿಸ್ಥಿತಿಯೂ ಎದುರಾಗಿದೆ. ಹೀಗಾಗಿ ತಾಲೂಕಿನ ಬಹುತೇಕ ನೀರಿನ ಬರ ಇರುವ ಪ್ರದೇಶಕ್ಕೆ ನೀರನ್ನು ಪೂರೈಸುವುದು ಅನಿವಾರ್ಯವಾಗಿದೆ.

ತಾಲೂಕಿನ ಯಾವ ಪ್ರದೇಶಗಳಲ್ಲಿ ಹೆಚ್ಚು ನೀರಿನ ಸಮಸ್ಯೆ ಇದೆ ಎಂದು ಆಯಾ ಗ್ರಾಪಂ ಪಿಡಿಓಗಳ ಮುಖಾಂತರ ಮಾಹಿತಿ ಪಡೆದು ತಹಶೀಲ್ದಾರ್‌ ಪರಿಮಳ ದೇಶಪಾಂಡೆ ಹಾಗೂ ತಾಪಂ ಇಒ ಸಿ.ಟಿ. ನಾಯ್ಕ ಜಂಟಿಯಾಗಿ ಕೂಡಲೇ ಸ್ಥಳ ಪರಿಶೀಲಿಸಿ ನೀರು ಪೂರೈಕೆಗೆ ಮುಂದಾಗುತ್ತಿರುವುದು ಗ್ರಾಮದ ಜನತೆಯಲ್ಲಿ ಹರ್ಷ ಮೂಡಿಸಿದೆ.

ನೀರು ಪೂರೈಸಲು ಅಷ್ಟು ದೊಡ್ಡ ಜಲಮೂಲ ಇಲ್ಲದಿರುವುದು ಕೂಡ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆದರೂ ಖಾಸಗಿ ಜಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಇರುವುದು ಪರಿಶೀಲನೆಯಿಂದ ತಿಳಿದು ಬಂದಿರುವುದರಿಂದ ಲಭ್ಯವಿರುವ ಕಡೆ ಸಂಪರ್ಕಿಸಿ ನೀರು ನೀಡುವಂತೆ ವಿನಂತಿಸಲಾಗಿದೆ.

ಈಗಾಗಲೇ 11 ಗ್ರಾಮ ಪಂಚಾಯತಗಳ 13 ಗ್ರಾಮಗಳಿಗೆ, 34 ಮಜರೆಗಳಿಗೆ 11 ಟ್ಯಾಂಕರ್‌ ಮೂಲಕ 28ಕ್ಕೂ ಹೆಚ್ಚು ಟ್ರಿಫ್‌ ನೀರು ಪ್ರತಿದಿನ ಸರಬರಾಜು ಮಾಡಲಾಗುತ್ತಿದೆ. ನೀರಿನ ಬರವಿರುವ ಎಲ್ಲಾ ಪ್ರದೇಶಕ್ಕೂ ಕುಡಿಯುವ ನೀರನ್ನು ಪೂರೈಸಲಾಗುವುದು.
• ಪರಿಮಳ ದೇಶಪಾಂಡೆ,ತಹಶೀಲ್ದಾರ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.