Sirsi: ಅರಣ್ಯ ಇಲಾಖೆಯಲ್ಲಿ ನೇರ ನೇಮಕಾತಿಗೆ ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Feb 10, 2024, 12:51 PM IST
ಶಿರಸಿ: ಅರಣ್ಯ ಪದವಿ ಪಡೆದ ವಿದ್ಯಾರ್ಥಿಗಳಿಗೆ ಅರಣ್ಯ ಉದ್ಯೋಗದಲ್ಲಿ ನೇರವಾಗಿ ಅವಕಾಶ ಒದಗಿಸಬೇಕು. ಮುಂಬಡ್ತಿ ಕೈ ಬಿಟ್ಟು ಅರ್ಹ ವಿದ್ಯಾರ್ಥಿಗಳಿಗೆ ನೇಮಕಾತಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಅರಣ್ಯ ಕಾಲೇಜಿನಲ್ಲಿ ಅನಿರ್ಧಿಷ್ಟ ಅವಧಿಯ ಪ್ರತಿಭಟನೆ ನಡೆಸಲಾಗುತ್ತಿದೆ.
ಉಳಿದ ಇಲಾಖೆಯಲ್ಲಿ ಆಯಾ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಅವಕಾಶ ಇದೆ. ಆದರೆ ಅರಣ್ಯ ಇಲಾಖೆಯಲ್ಲಿ ಕಳೆದ ಐದು ವರ್ಷದಿಂದ ನೇಮಕಾತಿ ಆಗಿಲ್ಲ. ಈಗ ವಿಜಯ ಭಾಸ್ಕರ ಅವರ ವರದಿ ಪ್ರಕಾರ ಪೂರ್ಣ ಪ್ರಮಾಣದಲ್ಲಿ ಮುಂಬಡ್ತಿ ಪಡೆಯಲು ಸೂಚಿಸಿದ್ದಾರೆ. ಇದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ಹಕ್ಕು ಸಿಗುವ ತನಕ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಆಗ್ರಹಿಸಿದರು.
ಪೆ. 10ರ ಶನಿವಾರ ನಗರದ ಅರಣ್ಯ ಮಹಾವಿದ್ಯಾಲಯದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ ಅವರಿಗೆ ಈ ಬಗ್ಗೆ ಮನವಿ ನೀಡಿದರು. ಉಪ ವಲಯ, ವಲಯ, ಸಹಾಯಕ ಅರಣ್ಯಾಧಿಕಾರಿಗಳಲ್ಲಿ ನೇಮಕಾತಿ ಆಗಬೇಕು. 1500ಕ್ಕೂ ಅಧಿಕ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿದ್ದಾರೆ. ಅರಣ್ಯ ಇಲಾಖೆಯ ವಿದ್ಯಾರ್ಥಿಗಳಿಗೆ ಸರಕಾರ ಮಲತಾಯಿ ಧೋರಣೆ ಮಾಡುತ್ತಿದ್ದು, ಇದನ್ನು ಸರಿಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ಈ ವೇಳೆ ವಿದ್ಯಾರ್ಥಿಗಳಾದ ವೈಷ್ಣವಿ ಪಾಟೀಲ, ಯಶಸ್ ಟಿ.ಎನ್, ವಿನಾಯಕ ಎಸ್, ಶಿವಾನಂದ ಕಾನಟ್ಟಿ, ಶಕೀಲ ಅಹಮದ್, ವಂದನಾ ಚಿಕ್ಕಮಠ, ನಮೃತಾ ಕೊಳ್ಳಿ, ನಯನಾ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.