ಶಿರಸಿ: ಏ.15 ರಂದು ಸ್ವರ್ಣವಲ್ಲೀ ರಾಜಗೋಪುರ ಸಮರ್ಪಣೆ
Team Udayavani, Apr 11, 2022, 12:06 PM IST
ಶಿರಸಿ: ಸ್ವರ್ಣವಲ್ಲೀ ಮಹಾಸಂಸ್ಥಾನದ ಚರಿತ್ರೆಯ ಪುಟಗಳಲ್ಲಿ ಇನ್ನೊಂದು ದಾಖಲೆ ಕಾರ್ಯಕ್ಕೆ ಏ.15 ರಂದು ಸಾಕ್ಷಿಯಾಗಲಿದೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಬಹು ನಿರೀಕ್ಷಿತ ಗೋಪುರದ ಸಮರ್ಪಣೆ ಆಗಲಿದೆ.
ಸ್ವರ್ಣವಲ್ಲೀ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಸಂಕಲ್ಪ ಮತ್ತು ಕ್ರಿಯಾಶೀಲತೆಗೆ ಮೇರು ಸಾಕ್ಷಿಯಾಗಿ ದ್ರಾವಿಡ ಶೈಲಿಯಲ್ಲಿ ಉತ್ತರ ದಿಕ್ಕಿನ ಏಳು ಅಂತಸ್ತಿನ ರಾಜಗೋಪುರ, ಮಹಾದ್ವಾರ, ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.
ತಮಿಳುನಾಡಿನ ಶಿಲ್ಪಿ ಕರುಪ್ಪಯ್ಯ ಆಚಾರಿ ಅವರಿಂದ ತಮಿಳುನಾಡಿನ ಸೇಲಂ ಜಿಲ್ಲೆಯ ರಾಶೀಪುರಂ ಊರಿನ ಕಪ್ಪುಕಲ್ಲು ತಂದು 18ಅಡಿ ಎತ್ತರದವರೆಗೆ ಶಿಲ್ಪಕಲಾ ಶಾಸ್ತ್ರ ಪ್ರಕಾರ ನಿರ್ಮಾಣಮಾಡಿ ಅದರ ಮೇಲೆ 44ಅಡಿ ಇಟ್ಟಿಗೆ ಮತ್ತು ಸಿಮೆಂಟಿನಿಂದ ನಿರ್ಮಾಣ ಮಾಡಲಾಗಿದೆ. ಶಿವ ಸಂಬಂಧ ಮೂರ್ತಿಗಳು ವಿಷ್ಣು ಸಂಬಂಧ ಮೂರ್ತಿಗಳು ದೇವಿಯರು ಮತ್ತು ಗಣಪತಿ ಮೂರ್ತಿಗಳನ್ನು ಕೂಡ ಕೆತ್ತಲಾಗಿದೆ. ಈ ಸುಂದರವಾದ ರಾಜಗೋಪುರ ದರ್ಶನೀಯವಾಗಿದೆ.
ಇದರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಉದ್ಘಾಟನಾ ಕಾರ್ಯ ಏ.15 ರ ಬೆಳಿಗ್ಗೆ 11ಕ್ಕೆ ನಡೆಯಲಿದೆ. ನವಕಲಶ ಪ್ರತಿಷ್ಠಾನ್ವಿತ ರಾಜಗೋಪುರ ಸಮರ್ಪಣೆ ಸಮಾರಂಭವು ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಲೋಕಾರ್ಪಣೆಗೊಳಿಸಲಿದ್ದಾರೆ.
ಈ ವೇಳೆ ಹಿರಿಯ ಸಾಮಾಜಿಕ ಮುಂದಾಳು ವಿ.ಟಿ.ಹೆಗಡೆ ಜಾನ್ಮನೆ ಉಪಸ್ಥಿತರಿರಲಿದ್ದಾರೆ. ಮಠದ ಶಿಷ್ಯರು, ಭಕ್ತರು ಈ ವೇಳೆ ಪಾಲ್ಗೊಳ್ಳಲು ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.