ಜು.3 ರಿಂದ ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ವ್ರತ ಸಂಕಲ್ಪ

ಈ ಬಾರಿ‌ ಮೂರು ತಿಂಗಳ ವ್ರತಾಚರಣೆ, ಸಾಧಕರಿಗೆ‌ ಸಮ್ಮಾನ, ಶಿಷ್ಯರಿಂದ 'ಗುರು ಸೇವೆ'

Team Udayavani, Jun 24, 2023, 3:16 PM IST

swarnavalli

ಶಿರಸಿ: ಸೋಂದಾ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳ ೩೩ನೇ ಚಾತುರ್ಮಾಸ್ಯ ವ್ರತಾಚರಣೆ ಜುಲೈ 3 ರಿಂದ ಸೆಪ್ಟೆಂಬರ್ 29 ರ ತನಕ ನಡೆಯಲಿದೆ ಎಂದು ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ ತಿಳಿಸಿದ್ದಾರೆ.

ನಗರದ ಯೋಗ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಅವರು, ಸಾಮಾನ್ಯವಾಗಿ ನಾಲ್ಕು ಪಕ್ಷಗಳ ಕಾಲ ಚಾತುರ್ಮಾಸ್ಯ ವ್ರತಾಚರಣೆ ನಡೆಯುತ್ತದೆ. ಈ ಸಲ ಶ್ರಾವಣ‌ ಮಾಸ ಅಧಿಕ ಆಗಿದ್ದರಿಂದ ಒಟ್ಟು 3 ತಿಂಗಳು ವ್ರತಾಚರಣೆ ನಡೆಯಲಿದೆ ಎಂದರು.

ವ್ರತ‌ ಸಂಕಲ್ಪ
ಆಷಾಢ ಪೂರ್ಣಿಮೆಯಂದು ಬೆಳಗ್ಗೆ 10 ಕ್ಕೆ ಶ್ರೀಗಳು ಶ್ರೀವೇದ ವ್ಯಾಸರ ಪೂಜೆ ನಡೆಸಿ‌ ವ್ರತ ಸಂಕಲ್ಪ‌ ಮಾಡಲಿದ್ದಾರೆ. ಬಳಿಕ ಸಮಸ್ತ ಶಿಷ್ಯರ ಪರವಾಗಿ ಪಾದುಕಾ ಪೂಜೆ‌ ನಡೆಯಲಿದೆ ಎಂದರು. ಈ ವ್ರತ ಶೋಭನ ಸಂವತ್ಸರದ ಆಷಾಢ ಪೂರ್ಣಿಮೆಯಿಂದ ಭಾದ್ರಪದ ಶುದ್ದ ಹುಣ್ಣಿಮೆಗೆ ಪೂರ್ಣವಾಗಲಿದೆ. ಚಾತುರ್ಮಾಸ್ಯದ ಅವಧಿಯಲ್ಲಿ ನಿತ್ಯವೂ ಒಂದೊಂದು ಸೀಮೆಯಿಂದ ಪಾದ ಪೂಜೆ‌ ನಡೆಯಲಿದೆ ಎಂದರು.

ಸ್ವರ್ಣವಲ್ಲೀ ಮಠದಲ್ಲೇ ವ್ರತ ಸಂಕಲ್ಪ
ಕಳೆದ 33 ವರ್ಷದಿಂದ ತಪೋ ಭೂಮಿಯಾದ ಸ್ವರ್ಣವಲ್ಲೀ ಮಠದಲ್ಲಿಯೇ ಶ್ರೀಗಂಗಾಧರೇಂದ್ರ ಸರಸ್ವತೀ ಶ್ರೀಗಳು ಚಾತುರ್ಮಾಸ್ಯ‌ ವ್ರತಾಚರಣೆ ಯಾವತ್ತೂ ನಡೆಯುತ್ತಿರುವದು ಸ್ವರ್ಣವಲ್ಲೀಯಲ್ಲಿ ವಿಶೇಷವಾಗಿದೆ. ಈ ಅವಧಿಯಲ್ಲಿ ಶಿಷ್ಯರು‌ ಮಠಕ್ಕೆ ಆಗಮಿಸಿ ಗುರು ಸೇವೆ‌ ನಡೆಸಲಿದ್ದಾರೆ ಎಂದರು.

ವ್ರತ ಸಂಕಲ್ಪ ದಿನ ಋಗ್ವೇದ, ಕೃಷ್ಣಜುರ್ವೇದ, 18 ಪುರಾಣ ಪಾರಾಯಣಗಳು ನಡೆಯಲಿದೆ. ಜುಲೈ 10 ರಿಂದ 24 ರ ತನಕ ಶ್ರೀಗಳಿಂದ ಕಾಷ್ಠ ಮೌನ ಇದ್ದು, ಅಂದಿನ ದಿನದಲ್ಲಿ ಶ್ರೀ ದರ್ಶನ ಇಲ್ಲವಾಗಿದೆ‌ ಎಂದರು.

ಸಾಧಕರಿಗೆ‌ ಸಮ್ಮಾನ
ಶ್ರೀಗಳ ಚಾತುರ್ಮಾಸ್ಯ ಆರಂಭದ‌ ಹಿನ್ನಲೆಯಲ್ಲಿ ಜು.೩ರಂದು ಸಂಜೆ 4ಕ್ಕೆ ಸಭಾ‌ ಕಾರ್ಯಕ್ರಮ ನಡೆಯಲಿದೆ. ಅಂದು ಅತಿಥಿಗಳಾಗಿ ಶಾಸಕ ಶಿವರಾಮ ಹೆಬ್ಬಾರ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಅಧ್ಯಕ್ಷ ಅಶೋಕ ಹಾರ್ನಳ್ಳಿ ಪಾಲ್ಗೊಳ್ಳುವರು ಎಂದರು.

ನಾಡಿನ ಖ್ಯಾತ ವೈದ್ಯ ದಾವಣಗೆರೆಯ ಡಾ. ಎಸ್.ಆರ್.ಹೆಗಡೆ, ವಾತುಲಾಗಮ ವಿದ್ವಾಂಸ ವೇ. ಗಜಾನನ ಹಿರೇ ಭಟ್ಟ ಗೋಕರ್ಣ, ದಕ್ಷ ಆಡಳಿತಗಾರ ರಘುಪತಿ ಎನ್.ಭಟ್ಟ ಸುಗಾವಿ, ಜೀವ ಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಅವರನ್ನು ಸಮಾರಂಭದ ಸಾನ್ನಿಧ್ಯ‌ ನೀಡುವ ಶ್ರೀಗಳು ಗೌರವಿಸಲಿದ್ದಾರೆ. ಶ್ರೀಗಳು ಬರೆದ ಲೇಖನಗಳ ಸಂಕಲನ ಗುರುವಾಣಿ ಕೃತಿ ಬಿಡುಗಡೆ ಕೂಡ ಆಗಲಿದೆ ಎಂದರು.

ಗುರು ಸೇವೆ
ಮಠದ ವ್ಯಾಪ್ತಿಯ ಹಾಗೂ ವಿವಿಧ ನಗರಗಳಲ್ಲಿ ಇರುವ ಸ್ವರ್ಣವಲ್ಲೀ ಸೀಮಾ ಪರಿಷತ್ ಸದಸ್ಯರು, ಶ್ರೀರಾಮ ಕ್ಷತ್ರಿಯ ಶಿಷ್ಯರು ಸೇರಿದಂತೆ ಅನೇಕ ಶಿಷ್ಯರು ಈ ಅವಧಿಯಲ್ಲಿ ಸೇವೆ ಸಲ್ಲಿ ಸಲಿದ್ದಾರೆ.

ಶಿಷ್ಯರಿಗಾಗಿ ಪ್ರತಿ‌ ದಿನ‌ ಸಂಜೆ ಶ್ರೀ ಮಹಾಭಾರತ ಪುರಾಣ ಪ್ರವಚನ ನಡೆಯಲಿದೆ. ಚಾತುರ್ಮಾಸ್ಯ ಅವಧಿಯಲ್ಲಿ ಸ್ವಸಹಾಯ ಸಂಘಗಳ‌ ಸಮಾವೇಶ, ಯಕ್ಷ ಶಾಲ್ಮಲಾ‌ ಸಂಸ್ಥೆಯಿಂದ ಮಕ್ಕಳ‌ ತಾಳಮದ್ದಲೆ ಸ್ಪರ್ಧೆ, ಸನ್ಮಾನ ನಡೆಯಲಿದೆ. ಚಾತುರ್ಮಾಸ್ಯ ವೇಳೆ ಉಪನೀತರು ಕನಿಷ್ಠ 1008 ಗಾಯತ್ರಿ ಜಪ‌ ಅನುಷ್ಠಾನ ಮಾಡಬೇಕು ಎಂಬುದು ಶ್ರೀಗಳ ಅಪೇಕ್ಷೆ ಆಗಿದೆ ಎಂದೂ ತಿಳಿಸಿರು.ಈ ವೇಳೆ ಪ್ರಮುಖರಾದ ಆರ್.ಎಸ್.ಹೆಗಡೆ ಭೈರುಂಬೆ, ಕೆ.ವಿ.ಭಟ್ಟ, ಎಸ್.ಎನ್.ಭಟ್‌ ಉಪಾಧ್ಯ ಇತರರು ಇದ್ದರು.

ಸ್ವರ್ಣವಲ್ಲೀ ಮಠದ ಭಗವತ್ಪಾದಕ ಪ್ರಕಾಶನ ಹಾಗೂ ಸ್ವರ್ಣವಲ್ಲೀ ಪ್ರಭಾಕ್ಕೆ25 ವರ್ಷ ಸಂಭ್ರಮ. ನವೆಂಬರನಲ್ಲಿ ಇದರ ಆಚರಣೆ ಮಾಡಲಾಗುತ್ತದೆ. -ಪ್ರೊ.ಕೆ.ವಿ.ಭಟ್ಟ, ಪ್ರಮುಖರು, ಭಗವತ್ಪಾದ ಪ್ರಕಾಶನ

ಚಾತುರ್ಮಾಸ್ಯ ಅವಧಿಯಲ್ಲಿ ಪೂರ್ವ ನಿಗದಿತ ವೇಳಾ ಪಟ್ಟಿಯಂತೆ ಸೀಮಾ ಶಿಷ್ಯರಿಂದ ಪಾದಪೂಜೆ, ಭಿಕ್ಷಾ ಸೇವೆ, ಮಾತೆಯರಿಂದ‌ ಕುಂಕುಮಾರ್ಚನೆ ನಡೆಯಲಿದೆ.-ಆರ್.ಎಸ್.ಹೆಗಡೆ ಬೈರುಂಬೆ, ಮಠದ ಆಡಳಿತ ಮಂಡಳಿ ಪ್ರಮುಖರು

ಟಾಪ್ ನ್ಯೂಸ್

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.