ಬಾರದ ಶಿಕ್ಷಕರು: ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Dec 31, 2019, 2:55 PM IST
ಮುಂಡಗೋಡ: ಶಾಲೆಗೆ ಶಿಕ್ಷಕರು ಬಾರದ ಕಾರಣ ಗ್ರಾಮಸ್ಥರು ವಿದ್ಯಾರ್ಥಿಗಳೊಂದಿಗೆ ಶಾಲೆ ಎದುರು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕೊಡಂಬಿ ಗ್ರಾಪಂ ವ್ಯಾಪ್ತಿಯ ಭದ್ರಾಪುರ ಗ್ರಾಮದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಿದ್ದು ಈ ಶಾಲೆಯಲ್ಲಿ ಒಂದರಿಂದ ಐದನೆ ತರಗತಿವರೆಗೆ 50ವಿದ್ಯಾರ್ಥಿಗಳಿದ್ದು ಆದರೆ ಕಳೆದ ಕೆಲ ತಿಂಗಳಿಂದ ಶಿಕ್ಷಕರು ಸಮರ್ಪಕವಾಗಿ ಶಾಲೆಗೆ ಬರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಸೋಮವಾರ ಬೆಳಗ್ಗೆ ಎಂದಿನಂತೆ ವಿದ್ಯಾರ್ಥಿಗಳು ಶಾಲೆಗೆ ತೆರಳಿದಾಗ 11ಗಂಟೆಯಾದರೂ ಶಿಕ್ಷಕರು ಶಾಲೆಗೆ ಬರಲಿಲ್ಲ. ಬಿಸಿಯೂಟದವರು ಮಾತ್ರ ಶಾಲೆಗೆ ಬಂದು ಅಡುಗೆ ತಯಾರಿಸಿದರು. ವಿದ್ಯಾರ್ಥಿಗಳು ನಮ್ಮ ಶಾಲೆಗೆ ಶಿಕ್ಷಕರು ಬೇಕು ಎಂದು ಹಾಗೂ ಶಾಲೆಗೆ ಬಾರದ ಶಿಕ್ಷಕರ ವಿರುದ್ಧ ಸಹ ಘೋಷಣೆ ಕೂಗಿದರು. ಶಾಲೆಗೆ ಶಿಕ್ಷಕರು ಸರಿಯಾಗಿ ಬಾರದಿರುವುದನ್ನು ಕಂಡ ಗ್ರಾಮಸ್ಥರು ಮೂರು ತಿಂಗಳ ಹಿಂದೆಯೆ ಶಿಕ್ಷಣಾಧಿಕಾರಿಗೆ ಮನವಿ ನೀಡಿದ್ದು ಮತ್ತೂಬ್ಬ ಶಿಕ್ಷಕರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಶಾಲಾ ಸಮಿತಿಯವರು ಹೇಳಿದ್ದಾರೆ.
ಈ ಕುರಿತು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಈ ಕುರಿತು ಪರಿಶೀಲಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.