ಗಾಂಜಾ ಜಾಲದ ಹಿಂದೆ ಬಿದ್ದ ಪೊಲೀಸರು

Team Udayavani, Jul 15, 2019, 11:08 AM IST

uk-tdy-2..

ಕಾರವಾರ: ಮಕ್ಕಳ ಮೂಲಕ ಗಾಂಜಾ ಮಾರಾಟ ಮಾಡುವ ಜಾಲದ ಪತ್ತೆಗೆ ಇದೀಗ ಪೊಲೀಸರು ಮುಂದಾಗಿದ್ದಾರೆ. ಕಳೆದ ಗುರುವಾರ ಹುಬ್ಬಳ್ಳಿ-ಧಾರವಾಡ ಪೊಲೀಸರು 52.5 ಕೆಜಿ ಗಾಂಜಾ ವಶಪಡಿಸಿಕೊಂಡ ಘಟನೆ ನಂತರ ಗಾಂಜಾ ಜಾಲದ ಲಿಂಕ್‌ ಬೀದರ್‌ದಿಂದ ಕಾರವಾರದ ವರೆಗೆ ಹಬ್ಬಿದೆ ಎಂಬ ಸೂಕ್ಷ್ಮಗಳು ಬಯಲಾಗಿವೆ.

ಧಾರವಾಡದ ಕಲ್ಲಾಪುರ ಬಡಾವಣೆ ಬಳಿ ವಾಹನವೊಂದನ್ನು ತಡೆದು ಪೊಲೀಸರು ಪರಿಶೀಲಿಸುವಾಗ ಅರ್ಧ ಕ್ವಿಂಟಾಲ್ ಗಾಂಜಾ ಸಿಕ್ಕಿತ್ತು. ವಾಹನ ಚಾಲಕ ಗಾಂಜಾವನ್ನು ಕಾರವಾರಕ್ಕೆ ಸಾಗಿಸುತ್ತಿದ್ದೇನೆ ಎಂಬ ಸಂಗತಿ ಬಾಯಿಬಿಟ್ಟಿದ್ದಾನೆ. ಈತನ ಹೆಸರು ಸಿದ್ರಾಮ ಅಲಿಯಾಸ್‌ ಸುನೀಲ್ ಗುಂಡೆ. ಈತ ಬೀದರ್‌ ಜಿಲ್ಲೆ ಬಸವ ಕಲ್ಯಾಣ ತಾಲೂಕಿನ ತ್ರಿಪುರನಾಥ ಗ್ರಾಮದವನು. ಗಾಂಜಾ ಭಾಲ್ಕಿ ನಗರದ ವಿಕ್ರಮ್‌ ರಾಥೋಡ್‌ ಮತ್ತು ಎಸ್‌.ಬಿ. ಮುದ್ದಾ ಎಂಬುವವರಿಗೆ ಸೇರಿದ್ದು ಎಂದು ಪೊಲೀಸರಿಗೆ ವಿವರಿಸಿದ್ದಾನೆ. ಈ ಸಂಗತಿಯನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನರ್‌ ಎಂ.ಎನ್‌. ನಾಗರಾಜ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದು ಆಗಿದೆ. ಹಾಗಾಗಿ ಪೊಲೀಸರು ಈ ಅಂತಾರಾಜ್ಯ ಮಾದಕ ವಸ್ತು ಸಾಗಾಟ ಮತ್ತು ವ್ಯಾಪಾರದ ಲಿಂಕ್‌ಗಳನ್ನು ಹಿಡಿದು ಕಾನೂನು ಚೌಕಟ್ಟಿನಲ್ಲಿ ಸಿಕ್ಕಿಸಲು ಯತ್ನ ಮುಂದುವರಿಸಿದ್ದಾರೆ.

ಓರಿಸ್ಸಾ, ಆಂಧ್ರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮಾದಕ ವಸ್ತು ಸಾಗಾಟದ ಜಾಲ ಹರಡಿಕೊಂಡಂತೆ ಕಾಣುತ್ತಿದೆ. ಈಚೆಗೆ ಗೋಕರ್ಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ ಸಹ ಬಯಲಾಗಿತ್ತು. ಗೋವಾದಲ್ಲಿ ಗಾಂಜಾ ಮಾರಾಟಕ್ಕೆ ಅಲ್ಲಿನ ಸರ್ಕಾರ ತಡೆಯೊಡ್ಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಂತೆ ಈ ವಹಿವಾಟು ಕಾರವಾರ ಮತ್ತು ಗೋಕರ್ಣದಂಥ ಪ್ರವಾಸಿ ತಾಣಗಳಲ್ಲಿ ಹರಡಿಕೊಂಡಿದೆ ಎಂಬ ಗುಸು ಗುಸು ಪ್ರಾರಂಭವಾಗಿದೆ.

ಮೆಡಿಕಲ್ ಮತ್ತು ಎಂಜಿನಿಯರಿಂಗ್‌ಗೆ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿ ಗಾಂಜಾ ಮಾರಾಟ ನಡೆಯುತ್ತಿದೆ ಎನ್ನಲಾಗುತ್ತಿದೆ. ಜೊತೆಗೆ ವಿಲಾಸಿ ಪ್ರವಾಸಿಗರಿಗೂ ಗಾಂಜಾ ಮಾರಾಟದ ಯತ್ನಗಳಾಗುತ್ತಿವೆ. ಅಲ್ಲದೇ ನಗರದಲ್ಲಿನ ಗಾಂಜಾ ವ್ಯಸನಿಗಳನ್ನು ಹುಡುಕಿಕೊಂಡು ಗಾಂಜಾ ವ್ಯಾಪಾರಿಗಳು ನಾನಾ ತಂತ್ರ ಬಳಸುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ಗಾಂಜಾ ವಶ: ಮೂವರು ಬಾಲಕರು ವಶಕ್ಕೆ: ನಗರದ ಬಸ್‌ ನಿಲ್ದಾಣದಲ್ಲಿ ತಲಾ ಹತ್ತು ಗ್ರಾಂ ಗಾಂಜಾದೊಂದಿಗೆ ನಿಂತಿದ್ದ ಮೂವರು ಬಾಲಕರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರ ಬಸ್‌ ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ನಿಂತಿದ್ದ ಮಕ್ಕಳನ್ನು ಪೊಲೀಸರು ತಪಾಸಣೆ ಮಾಡಿದಾಗ ತಲಾ ಹತ್ತು ಗ್ರಾಂ ಗಾಂಜಾ ದೊರೆತಿದೆ. ಬಾಲಾಪರಾಧಿ ಕೇಂದ್ರಕ್ಕೆ ಮಕ್ಕಳನ್ನು ನೀಡಲಾಗಿದ್ದು, ತನಿಖೆ ನಡೆದಿದೆ ಎಂದು ಪಿಎಸ್‌ಐ ನವೀನ್‌ ನಾಯ್ಕ ತಿಳಿಸಿದ್ದಾರೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.