ಉಕ್ರೇನ್ ಸಂಕಷ್ಟ: ಸ್ವದೇಶಕ್ಕೆ ಮರಳಲು ಏಳು ತಾಸು ನಡಿಗೆ!
ಯುದ್ದ ಭೂಮಿಯಲ್ಲಿ ಸಾಗರ ವಿದ್ಯಾರ್ಥಿನಿಯ ಸಂಕಷ್ಟ
Team Udayavani, Feb 27, 2022, 10:32 AM IST
ಸಾಗರ: ಯುದ್ಧಗ್ರಸ್ತ ಉಕ್ರೇನ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಸಾಗರದ ವಿದ್ಯಾರ್ಥಿನಿ ಮನಿಷಾ ಶನಿವಾರ ಗಡಿಭಾಗದ ಎಲ್ವಿವ್ ನಗರಕ್ಕೆ ಪ್ರಯಾಣ ಆರಂಭಿಸಿದ್ದಾರೆ.
ಅಣಲೇಕೊಪ್ಪದ ನಿವಾಸಿ ಎಲೆಕ್ಟ್ರಿಕ್ ದುರಸ್ತಿ ವೃತ್ತಿಯ ಜಾನ್ ಲೋಬೋ ಮತ್ತು ಬ್ಯೂಟಿ ಪಾರ್ಲರ್ ನಡೆಸುತ್ತಿರುವ ತ್ರೀಜಾ ಲೋಬೋ ಅವರ ಏಕೈಕ ಪುತ್ರಿ ಮನಿಷಾ ಲೋಬೋ ಉಕ್ರೇನ್ ನ ಕೀವ್ ನಗರದ ಕೀವ್ ವಿವಿಯಲ್ಲಿ 6 ವರ್ಷಗಳಿಂದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಅಂತಿಮ ವರ್ಷದಲ್ಲಿ ಅಭ್ಯಾಸ ಮಾಡುತ್ತಿರುವ ಮನಿಷಾ ಅವರು ಫೆ.28 ರಂದು ಭಾರತಕ್ಕೆ ಮರಳಲು ಸಿದ್ಧತೆ ನಡೆಸಿದ್ದರು. ಯದ್ಧ ಭೀತಿಯ ನಡುವೆ ಮನಿಷಾ ಬಂಕರ್ ನಲ್ಲಿ ಆಶ್ರಯ ಪಡೆದಿದ್ದರು.
ಇದನ್ನೂ ಓದಿ:ಉಕ್ರೇನ್ ಸಂಕಷ್ಟ: ಕೆಐಎಲ್ ನಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಸಚಿವರಿಂದ ಸ್ವಾಗತ
ಗಡಿಭಾಗದ ಪ್ರಯಾಣದ ಕುರಿತು ಮಾಹಿತಿ ನೀಡಿದ ಮನಿಷಾ, ಎಲ್ವಿವ್ ನಗರಕ್ಕೆ ಶನಿವಾರ ಪ್ರಯಾಣ ಆರಂಭವಾಗಿದೆ. ಅಂದಾಜು 7 ತಾಸುಗಳ ನಡಿಗೆಯ ಪ್ರಯಾಣ ಇದಾಗಿದ್ದು, ಪೊಲಾಂಡ್ ದೇಶದ ಗಡಿಭಾಗದಲ್ಲಿರುವ ಉಕ್ರೇನ್ನ ನಗರ ಇದಾಗಿದೆ. ಅಲ್ಲಿಂದ ಭಾರತಕ್ಕೆ ನಮ್ಮನ್ನೆಲ್ಲ ಸಾಗಿಸಲು ವ್ಯವಸ್ಥೆಯಾಗಬಹುದು ಎಂಬ ನಿರೀಕ್ಷೆಯಲ್ಲಿ ಪ್ರಯಾಣ ಮುಂದುವರಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.