ಮಹಿಳೆಯರಿಗೆ ರಕ್ಷಣೆ ನೀಡುವುದೇ ಆಯೋಗದ ಮುಖ್ಯ ಉದ್ದೇಶ: ಪ್ರಮಿಳಾ ನಾಯ್ಡು
ಯಾವುದೇ ಸಮಯದಲ್ಲೂ ತಮ್ಮ ದೂರವಾಣಿ ಸಂಖ್ಯೆ ಸಂಪರ್ಕಿಸಿ
Team Udayavani, Sep 15, 2022, 3:18 PM IST
ಕಾರವಾರ: ಮಹಿಳೆ ವಿದ್ಯಾವಂತಳಾಗಿ, ಉದ್ಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲಳಾಗಿ ಸ್ವಾವಲಂಬಿಯಾಗಿ ಜೀವನ ನಡೆಸು ವಂತಾಗಬೇಕು. ಈ ನಿಟ್ಟಿನಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವುದೇ ಮಹಿಳಾ ಆಯೋಗದ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಹೇಳಿದರು.
ಕಾರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ಗುರುವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯ ಎನ್.ಜಿ.ಓ, ಸಿ.ಡಿ.ಪಿ.ಓ ಇಲಾಖೆಯ ಕಚೇರಿಯಲ್ಲಿ ಸಭೆ, ಮಹಿಳಾ ಠಾಣೆ, ಒನ್ ಸ್ಟಾಫ್ ಸೆಂಟರ್, ಬಾಲಕಿಯರ, ಮಹಿಳೆಯರ ವಿದ್ಯಾರ್ಥಿನಿಲಯಗಳ ಭೇಟಿ ನೀಡಿದ್ದಾಗಿ ಹೇಳಿದರು.
ನಿನ್ನೆ ಕೈಗಾದಲ್ಲಿ ಮಹಿಳಾ ಕಾರ್ಮಿಕ ಸದಸ್ಯರು ಹಾಗೂ ಕಾರವಾರ ಕಾರಾಗೃಹದ ಮಹಿಳೆಯರ ಜೊತೆಗೆ ಸಂವಾದ ನಡೆಸಿದ್ದೇನೆ ಹಾಗೂ ಜಿಲ್ಲೆಯಲ್ಲಿ ಎರಡು ದಿನಗಳಿಂದ ಹಲವಾರು ಸ್ಥಳಗಳಿಗೆ ಭೇಟಿ ನೀಡಿ ಮಹಿಳೆಯರ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದೆ. ಮಹಿಳೆಯರ ರಕ್ಷಣೆಯ ಕುರಿತಾಗಿ ಪರಿಶೀಲನೆ ಮಾಡಲಾಗಿದೆ ಎಂದರು. ಜಿಲ್ಲೆಯಲ್ಲಿ ಮಹಿಳೆಯರ ರಕ್ಷಣೆಯ ವಿಚಾರದಲ್ಲಿ ಸಕಾರಾತ್ಮಕ ಅಂಶಗಳು ಕಂಡುಬಂದಿದ್ದು ಸಂತೋಷದ ವಿಚಾರವಾಗಿದೆ ಎಂದರು.
ರಾಜ್ಯದ 29 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 9 ಪ್ರಕರಣಗಳು ಕಂಡುಬಂದಿದ್ದು ಅವುಗಳ ಬಗ್ಗೆ ಮಾಹಿತಿ ಪಡೆದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಹೆಣ್ಣು ಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಪಾಲಿದೆ ಎಂಬ ಹಕ್ಕಿನನ್ವಯ ಮಹಿಳೆಯರಿಗೆ ಕಾನೂನಾತ್ಮಕವಾಗಿ ಆಸ್ತಿಯಲ್ಲಿ ಪಾಲು ನೀಡಬೇಕು. ಯಾರೂ ಸಹ ದೌರ್ಜನ್ಯದ ಮೂಲಕ ಆ ಹಕ್ಕಿನ ದಮನ ಮಾಡುವಂತಿಲ್ಲ, ಮಾಡಿದ್ದಲ್ಲಿ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ, ಕಾನೂನಿನಿಂದ ದಂಡನೆಗೆ ಒಳಗಾಗಬೇಕಾಗುತ್ತದೆ. ಮಹಿಳೆಯರ ಸ್ವಾವಲಂಬಿ ಬದುಕು ನಿರ್ಮಾಣಕ್ಕಾಗಿ ಮತ್ತು ರಕ್ಷಣೆಗಾಗಿ ಸರಕಾರ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದೆ. ಪೋಕ್ಸೋ ಕಾಯ್ದೆಯನ್ನು ತಂದು ಬಾಲಕಿಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಉತ್ತಮ ಕಾರ್ಯ ಮಾಡುತ್ತಿದೆ. ಮಹಿಳೆಯರೂ ಸಹ ತಮ್ಮ ಮೇಲಿನ ದೌರ್ಜನ್ಯವನ್ನು ಸಹಿಸಿಕೊಂಡು ಕೂಡದೇ ತಮಗಾಗುವ ಸಮಸ್ಯೆಯ ಕುರಿತು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಬೇಕು. ದೂರಿನನ್ವಯ ಸೂಕ್ತ ರಕ್ಷಣೆ ಹಾಗೂ ತಪ್ಪಿತಸ್ಥರಿಗೆ ದಂಡನೆ ವಿಧಿಸಲಾಗುವುದು ಎಂದ ಅವರು ಯಾವುದೇ ಸಮಯದಲ್ಲೂ ತಮ್ಮ ದೂರವಾಣಿ ಸಂಖ್ಯೆ9741149589 ಗೆ ಸಂಪರ್ಕಿಸಿ ದೂರು ನೀಡಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಕಾ ಎಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಶ್ಯಾಮಲಾ ಸಿ.ಕೆ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.