ಆನ್‌ಲೈನ್‌ ವ್ಯವಸ್ಥೆ ಯಿಂದ ಸಮಸ್ಯೆ


Team Udayavani, Oct 29, 2019, 1:22 PM IST

uk-tdy-2

ಭಟ್ಕಳ: ಕಟ್ಟಡ ಕಾರ್ಮಿಕರಿಗೆ ಆನ್‌ಲೈನ್‌ ವ್ಯವಸ್ಥೆಯಿಂದ ಅನ್ಯಾಯ ಆಗುತ್ತಿದ್ದು, ಶೀಘ್ರ ಗೊಂದಲ ನಿವಾರಿಸಿ ಕಟ್ಟಡ ಕಾರ್ಮಿಕರಿಗೆ ಸರಕಾರದ ಸೌಲಭ್ಯ ಸಿಗುವಂತಾಗಬೇಕೆಂದು ಉತ್ತರ ಕನ್ನಡ ಜಿಲ್ಲಾ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಪ್ರಧಾನಕಾರ್ಯದರ್ಶಿ ಜಿ.ಎನ್‌. ರೇವಣಕರ ತಿಳಿಸಿದ್ದಾರೆ.

ಪಟ್ಟಣದ ಖಾಸಗಿ ಹೊಟೆಲ್‌ ಸಭಾಂಗಣದಲ್ಲಿ ಕರೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚಿನವರೆಗೂ ಕಟ್ಟಡ ಕಾರ್ಮಿಕರ ಅರ್ಜಿಗಳನ್ನುಮೆನ್ಯುವಲ್‌ ಆಗಿ ಸ್ವೀಕರಿಸುತ್ತಿದ್ದರಿಂದ ಶೀಘ್ರ ಅರ್ಜಿ ಪರಿಶೀಲನೆ ಆಗಿ ತ್ವರಿತ ರೀತಿಯಲ್ಲಿ ಕಾರ್ಮಿಕರಿಗೆ ಸೌಲಭ್ಯ ಸಿಗುತ್ತಿತ್ತು. ಆದರೆ ಅರ್ಜಿಗಳನ್ನು ಆನ್‌ ಲೈನ್‌ ಮೂಲಕ ಸಲ್ಲಿಸುವುದು ಮಾಡಿದ ದಿನದಿಂದ ಇಲ್ಲಿಯವರೆಗೂ ಫಲಾನುಭವಿಗಳಿಗೆ ಸರಿಯಾದ ರೀತಿಯಲ್ಲಿ ಸೌಲಭ್ಯ ಸಿಗುತ್ತಿಲ್ಲ. ಆನಲೈನ್‌ ಅರ್ಜಿಗಳನ್ನು ಪರಿಶೀಲಿಸಲು ಮೂರ್‍ನಾಲ್ಕು ದಿನ ವಿಳಂಬ ಮಾಡಲಾಗುತ್ತಿದೆ.

ಒಮ್ಮೆ ಪರಿಶೀಲಿಸಿದರೂ ಅರ್ಜಿಯನ್ನು ಇಲ್ಲದ ಸಬೂಬು ಹೇಳಿ ತಿರಸ್ಕರಿಸುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಕಾರ್ಮಿಕ ಕಚೇರಿಯಲ್ಲಿ ಪ್ರಶ್ನಿಸಿದರೂ ಸಮರ್ಪಕ ಉತ್ತರ ಸಿಗುತ್ತಿಲ್ಲ ಎಂದ ಅವರು ಆನ್‌ಲೈನ್‌ ವ್ಯವಸ್ಥೆಯಿಂದ ಕಟ್ಟಡ ಕಾರ್ಮಿಕರಿಗೆ ತೊಂದರೆಯಾಗುತ್ತಿದ್ದು, ಎಲ್ಲಿ ಅರ್ಜಿ ಹಾಕಲಾಗಿದೆಯೋ ಅಲ್ಲಿಯೇ ಅವರ ವಿವರ ಪರಿಶೀಲಿಸಬೇಕಿದೆ. ಅದನ್ನು ಬಿಟ್ಟು ಬೇರೆ ಕಡೆಗೆ ಪರಿಶೀಲಿಸಿಲು ಹೋದರೆ ಯಾವುದೇ ವಿವರ ಸಿಗುತ್ತಿಲ್ಲ. ಆನ್‌ಲೈನ್‌ ವ್ಯವಸ್ಥೆಯಲ್ಲೇ ನಿಗೂಢತೆ, ಗೊಂದಲವಿದ್ದು, ಆದಷ್ಟು ಬೇಗ ಸರಿಪಡಿಸಬೇಕು, ಕಟ್ಟಡ ಕಾರ್ಮಿಕರ ಕೆಲಸ ಆಗಲು ಹಾಗೂ ಸರಕಾರದಿಂದ ಸೌಲಭ್ಯ ತ್ವರಿತಗತಿಯಲ್ಲಿ ಸಿಗುವಂತಾಗಲು ಈ ಮೊದಲಿನಂತೆಯೇ ಕಾರ್ಮಿಕರ ನಿರೀಕ್ಷಕರ ಕಚೇರಿಯಲ್ಲೇ ಅರ್ಜಿ ಸ್ವೀಕಾರ ಮಾಡಬೇಕು.

ಅಧಿಕೃತ ಸಂಘಟನೆ ಕಚೇರಿಯಲ್ಲಿ ಮಾತ್ರ ಕಾರ್ಮಿಕರ ಅರ್ಜಿ ಸ್ವೀಕೃತವಾಗಬೇಕು ಎಂದು ಹೇಳಿದ ಅವರು, ಕಾರ್ಮಿಕರ ಪಿಂಚಣಿ, ಮದುವೆ ಸಹಾಯಧನ ಕಳೆದ ನಾಲ್ಕು ವರ್ಷಗಳಿಂದ ಬಿಡುಗಡೆಯಾಗಿಲ್ಲ. ಸರಕಾರ ಈ ಬಗ್ಗೆಯೂ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದರು. ಸಿಐಟಿಯು ತಾಲೂಕು ಅಧ್ಯಕ್ಷ ಪುಂಡಲೀಕ ನಾಯ್ಕ, ಸಿಐಟಿಯು ಕಾರ್ಯದರ್ಶಿ ಶ್ರೀಧರ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.