ಕಲ್ಲು ಗಣಿಗಳಿಂದ ಜಲ ಮೂಲಗಳಿಗೆ ಧಕ್ಕೆ -ಆತಂಕ

ಬಸ್ತಿಕೊಪ್ಪದ ಗಣಿಗಾರಿಕೆಯಿಂದ ದೇವಸ್ಥಾನ-ಮನೆಗಳ ಗೋಡೆ ಬಿರುಕು

Team Udayavani, Apr 21, 2022, 10:04 AM IST

4

ಶಿರಸಿ: ನೆರೆಯ ಸೊರಬ-ಚಂದ್ರಗುತ್ತಿ ಹೋಬಳಿಯ ಹಳ್ಳಿಗಳು ಭಾರೀ ಕಲ್ಲುಗಾರಿಕೆಯಿಂದ ನಿರ್ಜೀವ ಆಗುವ ಪರಿಸ್ಥಿತಿಗೆ ಬಂದಿದ್ದು, ಶಿರಸಿ, ಸಿದ್ದಾಪುರ ತಾಲೂಕಿನಲ್ಲಿಯೂ ದುಷ್ಪರಿಣಾಮ ಬೀರಬಹುದು ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿ ನಿಕಟಪೂರ್ವ ಅಧ್ಯಕ್ಷ ಅನಂತ ಅಶೀಸರ ಆತಂಕ ವ್ಯಕ್ತಪಡಿಸಿದ್ದಾರೆ.

ಚಂದ್ರಗುತ್ತಿ ಬಸ್ತಿಕೊಪ್ಪದಲ್ಲಿ ನಡೆದಿರುವ ಗಣಿಗಾರಿಕೆಯಿಂದ ಪ್ರಸಿದ್ಧ ರೇಣುಕಾಂಬಾ ದೇವಾಲಯದ ಅಸ್ತಿತ್ವಕ್ಕೆ ಧಕ್ಕೆ ಬರುತ್ತಿದೆ. ಗ್ರಾಮಗಳ ಮನೆಗಳು ಸ್ಫೋಟದಿಂದ ಬಿರುಕು ಬಿಟ್ಟಿವೆ. ಕೃಷಿ ತೋಟಗಾರಿಕೆ ನಾಶವಾಗಿ ಬರಗಾಲ ಎದುರಿಸುತ್ತಿವೆ. ಬೋರ್‌ವೆಲ್‌ಗ‌ಳಲ್ಲಿ ತೆರೆದ ಬಾವಿಗಳಲ್ಲಿ ನೀರಿಲ್ಲ, ಸ್ವಲ್ಪ ನೀರಿದ್ದರೂ ಮಾಲಿನ್ಯವಾಗಿದೆ. ಪ್ರತಿದಿನ ಗಣಿ ಸ್ಫೋಟಕ ನಡೆಯುವುದರಿಂದ ಆರೋಗ್ಯ ಹಾಳಾಗಿದೆ. ಕಾಯಿಲೆಗಳು ಹೆಚ್ಚಾಗಿವೆ. ಎಲ್ಲ ಧೂಳಿನಿಂದ ತುಂಬಿದೆ. ರಸ್ತೆ ಸಂಪೂರ್ಣ ಹಾಳಾಗಿದೆ. ಚಂದ್ರಗುತ್ತಿ ಜನರ ಆಹ್ವಾನದಂತೆ ವೃಕ್ಷಲಕ್ಷ ಆಂದೋಲನದ ತಜ್ಞರ ತಂಡ ಮಾರ್ಚ್‌ 2ನೇ ವಾರ ಚಂದ್ರಗುತ್ತಿಗೆ ಭೇಟಿ ನೀಡಿ ಸ್ಥಳ ಸಮೀಕ್ಷೆ ಮಾಡಿತು. ಸ್ಥಳೀಯ ಗ್ರಾಪಂ ಜೀವ ವೈವಿಧ್ಯ ಸಮಿತಿಯವರನ್ನು ಭೇಟಿ ಮಾಡಿತು. ನಂತರ ಶಿವಮೊಗ್ಗಾ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚಂದ್ರಗುತ್ತಿ ಜನರ ಜೊತೆ ಅಲ್ಲಿನ ಪರಿಸ್ಥಿತಿ ವರದಿ ನೀಡಿತು. ಜಿಲ್ಲಾಧಿಕಾರಿಗಳು ಅಧಿಕಾರಿಗಳ ತಂಡವನ್ನು ಕಳಿಸಿ ಸ್ಥಳ ವರದಿ ಪಡೆದರು.

ಜಿಲ್ಲಾಧಿಕಾರಿಗಳು ಸ್ವತಃ ಚಂದ್ರಗುತ್ತಿ ಗಣಿಗಾರಿಕೆ ಅಧ್ವಾನ ಪರಿಶೀಲಿಸಿ ಗಣಿ ಕಾಮಗಾರಿ ನಿಲ್ಲಿಸಿದರು. ಚಂದ್ರಗುತ್ತಿ ಸುತ್ತಲಿನ ಹಳ್ಳಿಗಳು ಸೇರಿದಂತೆ ಅಂಚಿನ ಶಿರಸಿ ಸಿದ್ದಾಪುರ ತಾಲೂಕಿನ ಅರಣ್ಯ, ಹಳ್ಳಿಗಳು, ಜಲ ಮೂಲಗಳ ಮೇಲೆ ಭಾರೀ ಗಣಿಗಾರಿಕೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ ಎಂಬ ತಜ್ಞರ ವರದಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ರಾಜ್ಯ ಗಣಿ, ಅರಣ್ಯ, ಪರಿಸರ ಇಲಾಖೆ ಮುಖ್ಯಸ್ಥರ ಗಮನ ಸೆಳೆಯಲಾಗಿದೆ. ಚಂದ್ರಗುತ್ತಿ, ಬಸ್ತಿಕೊಪ್ಪ ಹಳ್ಳಿಗಳ ಜಲ, ಆರೋಗ್ಯ, ಸಂಪರ್ಕ, ಕೃಷಿ ಪರಿಸ್ಥಿತಿ, ಪರಿಹಾರ ನೆರವು ನೀಡುವ ಕುರಿತು ಗ್ರಾಮೀಣ ಅಭಿವೃದ್ಧಿ ಇಲಾಖೆ ಧಾವಿಸಬೇಕು ಎಂದು ವೃಕ್ಷಲಕ್ಷ ಆಂದೋಲನ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

3-dandeli

Dandeli: ಸಂಡೇ ಮಾರ್ಕೆಟ್ ಬಳಿ ಸರಣಿ ಕಳ್ಳತನ

8-dandeli

Dandeli: ನ. 11ರಂದು ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ

2-dandeli

Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ

High-Court

Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.