Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
Team Udayavani, Jan 6, 2025, 9:27 AM IST
ಹೊನ್ನಾವರ: ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಹತ್ತಿರ ಲಾರಿ ಪಲ್ಟಿಯಾಗಿ ಇಬ್ಬರು ಮೃತಪಟ್ಟು ಮೂವರು ಗಾಯಗೊಂಡ ಘಟನೆ ರವಿವಾರ (ಜ.05) ತಡರಾತ್ರಿ ಸಂಭವಿಸಿದೆ.
ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಹೊನ್ನಾವರ ಕಡೆ ಬರುತ್ತಿದ್ದ ಲಾರಿ ಪಲ್ಟಿಯಾಗಿದೆ. ಮಧ್ಯರಾತ್ರಿ ಈ ಅಪಘಾತ ನಡೆದಿದೆ.
ಮೃತರು ಮತ್ತು ಗಾಯಾಳುಗಳು ಮೂಲತ ಬಿಹಾರ ರಾಜ್ಯದವರು ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ನಳಂದಾ ಜಿಲ್ಲೆಯ ಸಜ್ಜನ ಕುಮಾರ್, ಗಯಾ ಜಿಲ್ಲೆಯ ಗಣವ್ರಿ ಮತ್ತು ಪಾಟ್ನಾ ಜಿಲ್ಲೆಯ ಪಪ್ಪು ಕುಮಾರ್ ಎಂದು ಗುರುತಿಸಲಾಗಿದೆ.
ಮೂವರು ಗಾಯಳುಗಳನ್ನು ಹೊನ್ನಾವರದ ತಾಲೂಕ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.