ಜನರ ಸಹಕಾರದಿಂದ ತಂಬಾಕು ನಿಯಂತ್ರಣ
ವಿಶ್ವ ತಂಬಾಕು ದಿನಾಚರಣೆ,ನರ್ಸಿಂಗ್ ವಿದ್ಯಾರ್ಥಿಗಳು-ಆಶಾ ಕಾರ್ಯಕರ್ತರಿಂದ ಜಾಗೃತಿ ಜಾಥಾ
Team Udayavani, Jun 1, 2019, 2:27 PM IST
ಕಾರವಾರ: ವಿಶ್ವ ತಂಬಾಕು ರಹಿತ ದಿನಾಚರಣೆಗೆ ಜಿಲ್ಲಾಧಿಕಾರಿ ಡಾ| ಹರೀಶಕುಮಾರ ಚಾಲನೆ ನೀಡಿದರು.
ಕಾರವಾರ: ತಂಬಾಕು ಮತ್ತು ಮಾದಕ ವಸ್ತುಗಳನ್ನು ಕಾನೂನಿನ ಮೂಲಕವೇ ನಿಯಂತ್ರಣದಲ್ಲಿಡುವುದು ಕಷ್ಟಕರವಾಗಿರುವುದರಿಂದ ಜನರ ಸಹಭಾಗಿತ್ವ ಇದ್ದಾಗ ಮಾತ್ರ ಇವುಗಳ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ| ಹರೀಶಕುಮಾರ ಹೇಳಿದರು.
ನಗರದ ಜಿಲ್ಲಾ ನ್ಯಾಯವಾಗಳ ಸಂಘದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ವಿಶ್ವ ತಂಬಾಕು ರಹಿತ ದಿನಾಚರಣೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಿಗರೇಟು ಸೇರಿದಂತೆ ತಂಬಾಕು ಉತ್ಪನ್ನಗಳಿಗೆ ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿರುವುದು ಕಳವಳಕಾರಿಯಾಗಿದೆ. ತಂಬಾಕು ಸೇವನೆಯಿಂದ ಉಂಟಾಗುವ ಅನಾಹುತಗಳ ಬಗ್ಗೆ ಯುವ ಜನತೆಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಮಾನಸಿಕ ಪರಿವರ್ತನೆಯಾದಾಗ ತಂಬಾಕಿನಂತಹ ಮಾದಕಗಳನ್ನು ತೇಜಿಸಲು ಸಹಕಾರಿಯಾಗುತ್ತದೆ ಎಂದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶ ನಾರಾಯಣ ಮಾತನಾಡಿ, ತಂಬಾಕು ಸೇವನೆ ಮಾನವ ಜೀವಕ್ಕೆ ಪೀಡಕವಾಗಿದೆ. ದೇಶದ ಜನರಲ್ಲಿ ಆರೋಗ್ಯದ ತಿಳಿವಳಿಕೆ ಇಲ್ಲದ ಕಾರಣ ಬಾಯಿ ಕ್ಯಾನ್ಸರ್‌ನಂತಹ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಜನರಲ್ಲಿ ಹೆಚ್ಚಿನ ಜನ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಅಶೋಕ ಕುಮಾರ ಪ್ರಾಸ್ತಾವಿಕ ಮಾತನಾಡಿ, ರಾಜ್ಯದಲ್ಲಿ 2ಕೋಟಿಯಷ್ಟು ಜನರು ತಂಬಾಕಿನ ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ಇವರಲ್ಲಿ 30ಲಕ್ಷದಷ್ಟು ಮಂದಿ ಅಕಾಲಿಕವಾಗಿ ಮರಣ ಹೊಂದುತ್ತಿದ್ದಾರೆ. ವಿಶ್ವದಲ್ಲಿ ಭಾರತವು ಹೆಚ್ಚು ಬಾಯಿ ಕ್ಯಾನ್ಸರ್ ಹೊಂದಿರುವವರ ದೇಶವಾಗಿದೆ. ಈ ಹಿನ್ನಲೆಯಲ್ಲಿ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ ಎಂಬುದು ಈ ವರ್ಷದ ವಿಶ್ವ ತಂಬಾಕು ರಹಿತ ದಿನಾಚರಣೆಯ ಘೋಷವಾಕ್ಯವಾಗಿದೆ ಎಂದು ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಮಾತನಾಡಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ ಸರ್ಕಾರ ಈಗಾಗಲೇ ಕಾಯ್ದೆ ಜಾರಿಗೊಳಿಸಿದೆ. ಇದರ ಪ್ರಕಾರ ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಸಾರಿಗೆ, ಹೊಟೇಲ್, ಉದ್ಯಾನವನ, ಆಸ್ಪತ್ರೆ, ಶಾಲೆಗಳು ಇತ್ಯಾದಿ ಕಡೆಗಳಲ್ಲಿ ಧೂಮಪಾನ ಮಾಡಿದರೆ ರೂ. 200 ದಂಡ ವಿಧಿಸಲು ಅವಕಾಶವಿದೆ. 18ವರ್ಷದ ಒಳಗಿನವರಿಗೆ ತಂಬಾಕಿನ ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದ್ದು, ಇದರ ಉಲ್ಲಂಘನೆಗೆ ರೂ. 200ದಂಡ ವಿಧಿಸಲಾಗುವುದು. ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕಾದುದು ಎಲ್ಲರ ಕರ್ತವ್ಯವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ನಡೆಸುತ್ತಿರುವುದು ಕಂಡು ಬಂದರೆ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಿನೋದ ಭುತೆ ಅವರು ತಂಬಾಕು ಸೇವನೆಯಿಂದಾಗುವ ದುಷ್ಟಪರಿಣಾಮಗಳು, ನ್ಯಾಯವಾದಿ ನಿತಿನ ರಾಯ್ಕರ ಅವರು ಕೋಟ್ಪಾ ಕಾಯ್ದೆ 2003 ಹಾಗೂ ಕೋಟ್ಪಾ ಕಾಯ್ದೆಯ ಉನ್ನತ ಅನುಷ್ಠಾನ ಕುರಿತು ಉಪನ್ಯಾಸ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೊವಿಂದಯ್ಯ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಜಾಗೃತಿ ಜಾಥಾ: ವೇದಿಕೆ ಕಾರ್ಯಕ್ರಮ ಮುನ್ನ ಬೆಳಗ್ಗೆ 9:30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನ ಅಂಗವಾಗಿ ಜನ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಚಾಲನೆ ನೀಡಿದರು. ಜಾಥಾದಲ್ಲಿ ವಿವಿಧ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.