ಕಾರವಾರ: ದೇವರ ಮುಂದೆ ಮಗುವಿನ ಶವ ಕೊಂಡೊಯ್ದ ಅಜ್ಜಿ ; ಬದುಕಿಸು ಎಂದು ಪ್ರಾರ್ಥಿಸಿದಳು
Team Udayavani, May 19, 2021, 12:06 PM IST
ಕಾರವಾರ: ಮಗುವಿನ ಗಂಟಲಲ್ಲಿ ಶೇಂಗಾ ಬೀಜ ಸಿಲುಕಿ ಉಸಿರುಗಟ್ಟಿ ಮೃತಪಟ್ಟ ನಂತರ , ಆತನ ಅಜ್ಜಿ ಗಣಪತಿ ದೇವಸ್ಥಾನಕ್ಕೆ ತೆರಳಿ, ಮಗುವಿನ ಶವವಿಟ್ಟು , ಬದುಕಿಸುವಂತೆ ಪ್ರಾರ್ಥಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.
ಮಂಗಳವಾರ ಯಲ್ಲಾಪುರದ ಗಣಪತಿ ಗಲ್ಲಿಯಲ್ಲಿ ದೇವಸ್ಥಾನದಲ್ಲಿ ಈ ಮನ ಕಲಕುವ ಘಟನೆ ನಡೆಯಿತು. ಮಗು ಸಾವನ್ನಪ್ಪಿದ ತಕ್ಷಣ ದಿಕ್ಕೇ ತೋಚದ ಮಗುವಿನ ಅಜ್ಜಿ, ಸಮೀಪದ ದೇವಸ್ಥಾನಕ್ಕೆ ಮೃತದೇಹವನ್ನು ತೆಗೆದುಕೊಂಡು ಹೋಗಿ , ದೇವಸ್ಥಾನದ ಗಂಟೆ ಭಾರಿಸಿ ಪ್ರಾರ್ಥಿಸಿದರು.
ಇದನ್ನೂ ಓದಿ : ಮೈಸೂರು: ಡಿ ಬಾಸ್ ಸಾಂಗ್ ಗೆ ಸ್ಟೆಪ್ ಹಾಕಿದ ಕೋವಿಡ್ ಸೋಂಕಿತರು
ಯಲ್ಲಾಪುರದ ರಾಮನಾಥ ಆಚಾರಿ ಅವರ ಎರಡೂವರೆ ವರ್ಷದ ಸಾತ್ವಿಕ್ ಮೃತಪಟ್ಟ ಬಾಲಕ, ಎರಡುವೊರೆ ವರ್ಷದ ಬಾಲಕ ಸಾತ್ವಿಕ್ ಮನೆಯಲ್ಲಿ ಸಂಜೆ ಶೇಂಗಾ ಬೀಜ ತಿನ್ನುತ್ತಿದ್ದಾಗ ಅಚಾನಕ್ ಆಗಿ ಗಂಟಲಲ್ಲಿ ಸಿಲುಕಿಕೊಂಡವು. ಉಸಿರಾಡಲು ತೊಂದರೆ ಪಡುತ್ತಿದ್ದ ಮಗು ಕಂಡು ಮನೆಯವರು ತಕ್ಷಣ, ಗಂಟಲಿನಿಂದ ಶೇಂಗಾ ಬೀಜಗಳನ್ನು ಹೊರ ತೆಗೆದರು. ಆದರೂ ಉಸಿರಾಟ ಸುಧಾರಿಸದ ಕಾರಣ ಪಟ್ಟಣದ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಇದನ್ನೂ ಓದಿ : ಲಾಕ್ ಡೌನ್ ಸಂಕಷ್ಟ: 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಸಿಎಂ ಬಿಎಸ್ ವೈ
ವೈದ್ಯರು ಗಂಟಲಲ್ಲಿದ್ದ ಮತ್ತೊಂದು ಶೇಂಗಾ ಬೀಜವನ್ನು ಹೊರತೆಗೆದರು. ಆದರೆ ಅಷ್ಟರಲ್ಲಿ ಮಗುವಿನ ಉಸಿರು ನಿಂತಿತ್ತು. ವೈದ್ಯರು ಮಗು ಮೃತಪಟ್ಟಿದೆ ಎಂದು ದೃಢಪಡಿಸಿದರು. ತಾಯಿ ಮತ್ತು ಅಜ್ಜಿಯ ಆಕ್ರಂದನ ಮುಗಿಲು ಮುಟ್ಟಿತ್ತು. ಆ ನಂತರ ಭಾವುಕರಾದ ಅಜ್ಜಿ ಮೊಮ್ಮಗನ ಶವ ಹೊತ್ತು ದೇವಸ್ಥಾನಕ್ಕೆ ನಡೆದರು. ಈ ಸನ್ನಿವೇಶ ಸುತ್ತಲ ಜನರಲ್ಲಿ ಭಾವುಕ ದೃಶ್ಯ ಸೃಷ್ಟಿಸಿತು. ಜನರು ಮಗುವಿನ ಸಾವಿಗೆ ಮರುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.