ಕಾರವಾರ : ಡಿಎಆರ್ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ
Team Udayavani, Dec 8, 2021, 3:43 PM IST
ಕಾರವಾರ : ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಗರದ ಡಿಎಆರ್ ಕಚೇರಿಯಲ್ಲಿ ಇಂದು (ಬುಧವಾರ) ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಹಳದೀಪುರ ನಿವಾಸಿಯಾಗಿರುವ ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆ ಮಾಡಿಕೊಂಡ ಪೇದೆಯಾಗಿದ್ದು, ಬೆಳ್ಳಗ್ಗೆಯೇ ಕಚೇರಿ ಕೆಲಸಕ್ಕೆ ಬಂದಿದ್ದ ಗುರುಪ್ರಸಾದ್ ಅವರು ಕಚೇರಿಯಲ್ಲಿ ಯಾರೂ ಇಲ್ಲದ್ದನ್ನು ನೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ ಸುಮಾರು 10.30 ಗಂಟೆಗೆ ಕ್ಲರಿಕಲ್ ಸಿಬ್ಬಂದಿ ಕಚೇರಿಗೆ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳಾ ಸಿಬ್ಬಂದಿ ಕಚೇರಿಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಲುಪಿಸಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮಂಗಳೂರು: ಮತಾಂತರ ಯತ್ನ ನಾಲ್ವರ ಸಾವಿಗೆ ಕಾರಣವಾಯ್ತೇ?; ಮಹಿಳೆ ವಶಕ್ಕೆ
ಮೃತದೇಹ ಪೋಸ್ಟ್ ಮಾರ್ಟಂ ಮಾಡಲು ಕಳುಹಿಸಲಾಗಿದೆ. ಆತ್ಮಹತ್ಯೆ ಮಾಡುವ ಮುನ್ನ ಗೆಳೆಯರಿಗೆ ಬಾಕಿಯಿದ್ದ ಹಣ ಬೆಳಗ್ಗೆಯೇ ಮರು ಪಾವತಿಸಿರುವುದು ಗೊತ್ತಾಗಿದೆ.
ಮೊದಲೇ ಆತ್ಮಹತ್ಯೆ ನಿರ್ಧಾರ ಮಾಡಿಕೊಂಡು ಬಂದಿರಬೇಕೆಂದು ಸಹೋದ್ಯೋಗಿಗಳು ಹೇಳಿಕೆ ನೀಡಿದ್ದಾರೆ. ಮೃತರಿಗೆ ಪತ್ನಿ ಹಾಗೂ ಎರಡು ಪುಟ್ಟ ಮಕ್ಕಳಿದ್ದು, ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.
ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.