ಅರಣ್ಯ ಇಲಾಖೆಯಿಂದಲೇ ಮರ ನಾಶ
Team Udayavani, Jun 24, 2021, 5:12 PM IST
ಶಿರಸಿ: ಅರಣ್ಯ ಇಲಾಖೆ ವಿವಿಧ ಕಾಮಗಾರಿಗಳ ಯೋಜನೆ ಅನುಷ್ಠಾನ ಸಂದರ್ಭದಲ್ಲಿ ಜಿಲ್ಲಾದ್ಯಂತ ಒಂದು ಲಕ್ಷಕ್ಕೂ ಮಿಕ್ಕಿ ಬೆಲೆ ಬಾಳುವ ಗಿಡ, ಮರ ಕಡಿದು, ಕೋಟ್ಯಾಂತರ ರೂ. ಅರಣ್ಯ ಪರಿಸರ ಮೌಲ್ಯ ನಾಶಕ್ಕೆ ಅರಣ್ಯ ಇಲಾಖೆ ಜವಾಬ್ದಾರವಾಗಿದೆ. ಇಂತಹ ಪರಿಸರ ವಿರೋಧಿ ಅವೈಜ್ಞಾನಿಕ ಪದ್ಧತಿ ಕೈಬಿಡಬೇಕು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.
ಅವರು ಅರಣ್ಯ ಇಲಾಖೆ ಫೋಕಸ್- 2 ಇದರ ನಿಮಿತ್ತ ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ಅರಣ್ಯ ಇಲಾಖೆಯ ಅವೈಜ್ಞಾನಿಕ ನೀತಿಯಿಂದ ಪರಿಸರ ಮೌಲ್ಯ ನಾಶದ ಚಿತ್ರಣ ಬಿಡುಗಡೆಗೊಳಿಸಿ ಮಾತನಾಡಿದರು. ಜಿಲ್ಲಾದ್ಯಂತ ದಟ್ಟ ಅರಣ್ಯ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಬೆಲೆ ಬಾಳುವ ಗಿಡ, ಮರ ನಾಶಪಡಿಸಿ ಕೆರೆಯ ದಡಕ್ಕೆ ಹಾಕಿ, ಅದರ ಮೇಲೆ ಕೆರೆಯ ಮಣ್ಣಿನಿಂದ ಮುಚ್ಚಿ, ಮರ ಕಡಿದ ಸಾಕ್ಷé ನಾಶಪಡಿಸಲಾಗುತ್ತಿದೆ ಎಂದು ಅವರು ಅರಣ್ಯ ಇಲಾಖೆ ಕರ್ತವ್ಯ ಚ್ಯುತಿ ಕುರಿತು ಪ್ರಸ್ತಾಪಿಸುತ್ತ, ಅರಣ್ಯ ಇಲಾಖೆ ಕಾರ್ಯವು ಕಾನೂನು ಬಾಹಿರ ಮತ್ತು ಶಿಕ್ಷಾರ್ಹವಾಗಿದೆ ಎಂದು ಅವರು ಹೇಳುತ್ತಾ, ಕಳೆದ ಐದು ವರ್ಷದ ಅವಧಿಯಲ್ಲಿ ಅರಣ್ಯ ಪ್ರದೇಶದಲ್ಲಿನ ಒಟ್ಟು ಕಾಮಗಾರಿಗೆ ಕ್ಷೇತ್ರವನ್ನು ಅರಣ್ಯ ಸಾಂದ್ರತೆ ಅನುಪಾತಕ್ಕೆ ಹೋಲಿಸಿದಾಗ ಸುಮಾರು ಒಂದು ಲಕ್ಷ ಗಿಡ, ಮರ ನಾಶವಾಗಿರಬಹುದಾಗಿ ಅಂದಾಜಿಸಲಾಗಿದೆ ಎಂದು ಹೇಳಿದರು.
ಅವೈಜ್ಞಾನಿಕವಾಗಿ ಗಿಡ, ಮರ ಕಡಿಯುವ ಪ್ರವೃತ್ತಿ ಹಾಗೂ ಪರಿಸರಕ್ಕೆ ಪೂರಕವಲ್ಲದ ಸಸಿ ನೆಡುವ ಪದ್ಧತಿ ನಿಲ್ಲಿಸದ್ದಿದ್ದಲ್ಲಿ ವೇದಿಕೆ ಅರಣ್ಯ ಪರಿಸರ ಮೌಲ್ಯ ನಾಶವಾಗುವುದನ್ನು ನಿಯಂತ್ರಿಸಲು ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.