ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ‘ವಿಶ್ವಶಾಂತಿ ಬಾಲೆ’ ತುಳಸಿ ಹೆಗಡೆ

ಯಕ್ಷಗಾನದ ಕಲಾ ಮಾಧ್ಯಮದ ಮೂಲಕ ಜಗತ್ತಿನ ಯೋಗಕ್ಷೇಮದ ಪ್ರಸ್ತುತಿ

Team Udayavani, Jun 6, 2022, 3:51 PM IST

1-ffsfsfs

ಶಿರಸಿ: ಕಳೆದ ಏಳು ವರ್ಷಗಳಿಂದ ನಿರಂತರ ವಿಶ್ವಶಾಂತಿ ಸಂದೇಶ ಸಾರುವ ಯಕ್ಷನೃತ್ಯ ರೂಪಕದ ಬಾಲೆ ತುಳಸಿ ಹೆಗಡೆ ಅವಳ ಸಾಧನೆ ಇದೀಗ ದೇಶದ ಪ್ರತಿಷ್ಠಿತ ಇಂಡಿಯಾ ಬುಕ್ ರೆಕಾರ್ಡ್ ನಲ್ಲಿಯೂ ದಾಖಲಾಗಿದೆ. ವಿಶ್ವಶಾಂತಿ ಸಂದೇಶ ಸಾರುವ ಕಲಾ ಪ್ರದರ್ಶನ ನೀಡುವ ದೇಶದ ಏಕಮೇವ ಬಾಲೆ ಎಂಬುದು ಈಗ ಅಧಿಕೃತವಾಗಿ ಋಜುವಾತಾಗಿದೆ.

ಅತ್ಯಂತ ಕಿರಿಯ ವಯಸ್ಸಿನಲ್ಲೇ ತುಳಸಿ ಹೆಗಡೆಯು ಒಂದು ಗಂಟೆಗೂ ಅಧಿಕ ಕಾಲದ ಯಕ್ಷನೃತ್ಯ ರೂಪಕವನ್ನು ಪ್ರಸ್ತುತಗೊಳಿಸುತ್ತಿದ್ದಾಳೆ. 13 ರ ಹರೆಯದ ತುಳಸಿ ಕಳೆದ ಏಳು ವರ್ಷಗಳಿಂದ ಸತತ ವಿವಿಧ ಪೌರಾಣಿಕ ಕಥೆ ಒಳಗೊಂಡ ವಿಶ್ವಶಾಂತಿ ಸರಣಿ ಪ್ರಸ್ತುತಗೊಳಿಸುವ ಬಾಲೆ ಎಂದೇ ಪ್ರಸಿದ್ಧಿ ಪಡೆದಿದ್ದಾಳೆ. ತುಳಸಿ ಹೆಗಡೆ ಅವಳ ಈ ವಿಶಿಷ್ಟ ಸಾಧನೆಯನ್ನು ಅತ್ಯಂತ ಕಿರಿಯ ವಯಸ್ಸಿನಿಂದ ವಿಶ್ವಶಾಂತಿ ಸರಣಿ ಸಂದೇಶ ಸಾರುವ ಬಾಲ ಯಕ್ಷಗಾನ ಕಲಾವಿದೆ ಎಂದೇ ಇಂಡಿಯಾ ಬುಕ್ ಆಫ್ ರೆಕಾರ್ಡ್ ನೀಡುವ ಪ್ರಮಾಣ ಪತ್ರದಲ್ಲೂ ಉಲ್ಲೇಖಿಸಿದೆ.

ಕಳೆದ ಏ.27 ರಂದು ದಾಖಲೀಕರಿಸಿಕೊಂಡ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆ ತುಳಸಿ ಯಕ್ಷಗಾನದ ಕಲಾ ಮಾಧ್ಯಮದ ಮೂಲಕ ಜಗತ್ತಿನ ಯೋಗಕ್ಷೇಮದ ಪ್ರಸ್ತುತಿಗಾಗಿ ಈ ರೂಪಕವನ್ನು ಪ್ರದರ್ಶಿಸುತ್ತಿದ್ದಾಳೆ ಎಂದೂ ಹೆಮ್ಮೆ ವ್ಯಕ್ತಪಡಿಸಿದೆ. ತುಳಸಿ ಮುಮ್ಮೇಳದ ಏಕವ್ಯಕ್ತಿ ರೂಪಕ ಇದಾಗಿದ್ದು, ಹಿಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರ, ನಿರ್ದೇಶಕರ, ಸಾಹಿತಿಗಳ, ಪರಿಣಿತರ ಒಂಬತ್ತು ಜನರ ತಂಡ ಕೆಲಸ ಮಾಡುತ್ತಿದೆ. ಒಂದು ಗಂಟೆಗೂ ಮಿಕ್ಕಿದ ವಿಶ್ವಶಾಂತಿ ಸಂದೇಶ, ವಿಶ್ವಶಂಕರಾಕ್ಷರ, ಶ್ರೀಕೃಷ್ಣಂ ವಂದೇ, ವಂದೇ ಪರಮಾನಂದಂ, ಪಂಚಪಾವನ ಕಥಾ, ಪರಿವರ್ತನೆ ಜಗದ ನಿಯಮ, ವಂಶೀವಿಲಾಸ ಯಕ್ಷನೃತ್ಯ ರೂಪಕಗಳನ್ನು ಈಕೆ ಪ್ರಸ್ತುತಗೊಳಿಸುತ್ತಿದ್ದಾಳೆ.

ಯಕ್ಷಗಾನದ ನೃತ್ಯ ಭಾಷೆ ಬಳಸಿಕೊಂಡು ರೂಪಕ ಪ್ರದರ್ಶಿಸುವ ಈಕೆ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲಾಗಿದ್ದು, ಯಕ್ಷಗಾನದ ಇತಿಹಾಸದಲ್ಲೂ ಪ್ರಥಮದ್ದಾಗಿದೆ.

ಶಿರಸಿಯ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿರುವ ತುಳಸಿ ಹೆಗಡೆ ಅವಳ ಸಾಧನೆಯನ್ನು ಇಂಟರನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಕೂಡ ದಾಖಲಿಸಿದೆ. ಇತ್ತೀಚೆಗಷ್ಟೇ ಪೂನಾದ ಸಂಸ್ಥೆಯೊಂದು ನೀಡುವ ಇಂಡಿಯನ್ ಸ್ಟಾರ್ ಐಕಾನ್ ಅವಾರ್ಡ್ ಕೂಡ ಬಂದಿದೆ ಎಂಬುದೂ ಉಲ್ಲೇಖನೀಯವಾಗಿದೆ.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.