ಕಾರವಾರ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ
Team Udayavani, Apr 23, 2022, 9:56 PM IST
ಕಾರವಾರ: ನಗರದ ಬೀಚ್ ನಲ್ಲಿನ ಅಜ್ವಿ ಹೋಟೆಲ್ ಹಿಂಭಾಗದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ನಗರಠಾಣೆ ಪಿಎಸ್ ಐ ಸಂತೋಷ ಕುಮಾರ್ .ಎಂ. ಅವರ ತಂಡ ಬಂಧಿಸಿದೆ .
ಶಿರವಾಡದ ಬಂಗಾರಪ್ಪ ನಗರ ನಿವಾಸಿ ರಾಜೇಶ್ .ಆರ್.ವಡ್ಡರ್ (27) , ಜಾಂಬಾ ನಿವಾಸಿ ಮಣಿಕಂಠ ಬಾಬು ರಾಠೋಡ್ (18) ಗಾಂಜಾ ಮಾರಾಟದಲ್ಲಿದ್ದಾಗ ಗಾಂಜಾ ಸಹಿತ ಬಂಧಿಸಲಾಗಿದೆ. ಶನಿವಾರ ಅಪರಾಹ್ನ 3.15 ರ ಸಮಯಕ್ಕೆ ಖಚಿತಮಾಹಿತಿ ಮೇರೆಗೆ ಈ ದಾಳಿ ನಡೆಯಿತು.
ಬಂಧಿತರಿಂದ 210 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. 10 ಸಾವಿರ ಮೊತ್ತದ ಗಾಂಜಾ ಹಾಗೂ ಯಮಹಾ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದು ಎನ್ ಡಿಪಿಎಸ್ ಅಡಿ ಪ್ರಕರಣ ದಾಖಲಿಸಲಾಗಿದೆ. ಎಸ್ಪಿ ಸುಮನ್ ಪನ್ನೇಕರ್, ಅಡಿಶನಲ್ ಎಸ್ಪಿ ಬದರೀನಾಥ, ಡಿವೈಎಸ್ಪಿ ವೆಲೆಂಟೈನ್ ಡಿಸೋಸಾ, ಸಿಪಿಐ ಸಿದ್ದಪ್ಪ ಮಾರ್ಗದರ್ಶನ ನೀಡಿದ್ದರು. ಪೊಲೀಸ್ ಸಿಬ್ಬಂದಿ ರಾಜೇಶ್ , ಮಹೇಶ್ ನಾಯ್ಕ ,ರಾಘವೇಂದ್ರ ನಾಯ್ಕ, ಜಟ್ಟಿ ಎಂ.ನಾಯ್ಕ ,ಪಿಎಸ್ ಐ ಸಂತೋಷ ಅವರ ಜೊತೆ ದಾಳಿಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.