ತಾಲೂಕು ಕಚೇರಿ ಶೀಘ್ರ ಪ್ರಾರಂಭಿಸಲು ಆಗ್ರಹ


Team Udayavani, Jan 25, 2020, 2:48 PM IST

uk-tdy-2

ದಾಂಡೇಲಿ: ತಾಲೂಕಿಗೆ ಸಂಬಂಧಪಟ್ಟ ಎಲ್ಲಾ ಕಚೇರಿಗಳನ್ನು ಶೀಘ್ರದಲ್ಲಿ ಪ್ರಾರಂಭಿಸವುದರ ಜೊತೆಗೆ ಸಮಗ್ರ ಅಭಿವೃದ್ಧಿಗೆ ಹಾಗೂ ವಿವಿಧ ಯೋಜನೆಗಳನ್ನು ಜಾರಿಗೊಳಿಸಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ದಾಂಡೇಲಿ ಸಮಗ್ರ ಅಭಿವೃದ್ಧಿಗಾಗಿ ಹೋರಾಟ ಸಮಿತಿ ಪದಾಧಿಕಾರಿಗಳು ಸುದ್ದಿ ಗೋಷ್ಠಿಯಲ್ಲಿ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಲಿಖೀತ ಮನವಿ ಸಲ್ಲಿಸಿದರು.

ಹೋರಾಟ ಸಮಿತಿ ಅಧ್ಯಕ್ಷ ಅಕ್ರಮ್‌ ಖಾನ್‌ ಮಾತನಾಡಿ, ಹಿಂದಿನ ರಾಜ್ಯ ಸರ್ಕಾರವು ದಾಂಡೇಲಿ ತಾಲೂಕನ್ನಾಗಿಘೋಷಣೆ ಮಾಡಿ ಎರಡು ವರ್ಷವಾದರು ಯವುದೇ ತಾಲೂಕು ಕಚೇರಿಗಳು

ಪ್ರಾರಂಭವಾಗದಿರುವುದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದ್ದು ಆದಷ್ಟು ಬೇಗನೆ ತಹಶೀಲ್ದಾರ್‌ ಕಾರ್ಯಾಲಯಕ್ಕೆ ಸಿಬ್ಬಂದಿ ನಿಯೋಜನೆ, ಅಭಿವೃದ್ಧಿಗೆ ಅನುಕೂಲವಾಗುವಂತೆ 28 ತಾಲೂಕು ಕಚೇರಿಗಳನ್ನು ಪ್ರಾರಂಭಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಶೋಕ ಪಾಟೀಲ ಮಾತನಾಡಿ 2007 ರಲ್ಲಿ ದಾಂಡೇಲಿ ನಗರದ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾದ ಜೈನ್‌ ವರದಿಯಲ್ಲಿನ ಯಾವುದೇ ಅಂಶಗಳು ಇದುವರೆಗೂ ಅನುಷ್ಠಾನ ಮಾಡದೇ ದಾಂಡೇಲಿ ತಾಲೂಕಿಗೆ ಅನ್ಯಾಯ ಮಾಡಲಾಗಿದೆ. ಅಲ್ಲದೇ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಯಾವುದೇ ವಿಶೇಷ ಕ್ರಮಗಳು ಜರಗುತ್ತಿಲ್ಲ ಇದರಿಂದ ನಗರದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಆದ್ದರಿಂದ ಜೈನ್‌ ವರದಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಈ ಕೂಡಲೇ ಆದೇಶ ಹೊರಡಿಸಿ ಮುಚ್ಚಿರುವ ಕೈಗಾರಿಕೆಗಳನ್ನು ಪುನಾರಂಭಿಸಲು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಸಮಿತಿ ಉಪಾಧ್ಯಕ್ಷ ಅಬ್ದುಲ್‌ ವಹಾಬ ಬಾಂಸರಿ ಮಾತನಾಡಿ ತಾಲೂಕಿನಲ್ಲಿ ಅನೇಕ ಕೈಗಾರಿಕೆಗಳು ನೇಪಥ್ಯಕ್ಕೆ ಸರಿದಿವೆ. ಇರುವ ಒಂದೇ ಕೈಗಾರಿಕೆಯಲ್ಲಿ ಸ್ಥಳಿಯರನ್ನು ಕಡೆಗಣಿಸಿ ಪರಕಿಯರಿಗೆ ಉದ್ಯೋಗ ನೀಡಲಾಗುತ್ತಿದೆ. ನಿರುದ್ಯೋಗ ಸಮಸ್ಯೆಯಿಂದಾಗಿ ವ್ಯಾಪಾರ ವಹಿವಾಟು ಕುಸಿದಿದೆ ಆದ್ದರಿಂದ ತಾಲೂಕಿಗೆ ರಾಜ್ಯ ಸರ್ಕಾರ ಕೂಡಲೇ 250 ಕೋಟಿ ವಿಷೇಶಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ವಿ.ಎ ಕೋನಾಪುರಿ, ಫಿರೋಜ್‌ ಪೀರ್‌ ಜಾದೆ, ರಮೇಶ ಚಂದಾವರ, ರಫೀಕ್‌ ಹುದ್ದಾರ್‌, ರವಿ ಚವ್ಹಾಣ, ರುದ್ರಪ್ಪಾ, ಪ್ರೇಮ ಕುಮಾರ, ಮೀನಾಕ್ಷಿ ಬಡಿಗೇರ, ಮುಜಿಬಾ ಛಬ್ಬಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

12

Mangaluru: ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.