Uttara Kannada: ಅರ್ಜಿ ತಿರಸ್ಕಾರವಾದ 73,732 ಕುಟುಂಬಗಳಿಗೆ ಒಕ್ಕಲೆಬ್ಬಿಸುವ ಆತಂಕ
ನಿರಾಶ್ರಿತರಾಗುವ ಭೀತಿ: ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ
Team Udayavani, Oct 11, 2023, 6:35 PM IST
ಶಿರಸಿ: ಜಿಲ್ಲೆಯಲ್ಲಿ ವಾಸ್ತವ್ಯ ಮತ್ತು ಸಾಗುವಳಿಗಾಗಿ ಅತಿಕ್ರಮಿಸಿರುವ ಕಂದಾಯ ಭೂಮಿ ಅರ್ಜಿ ಸಲ್ಲಿಸಿದವರಲ್ಲಿ 73 ಸಾವಿರಕ್ಕೂ ಮಿಕ್ಕಿ ಸಾಗುವಳಿದಾರರ ಅರ್ಜಿ ತಿರಸ್ಕಾರಗೊಂಡು, ಕಾನೂನು ಅಡಿಯಲ್ಲಿ ಒಕ್ಕಲೆಬ್ಬಿಸುವ ಪ್ರಕ್ರಿಯೆಯಿಂದ ನಿರಾಶ್ರಿತರಾಗುವ ಭೀತಿಯನ್ನು ಎದುರಿಸುತ್ತಿದ್ದಾರೆ ಎಂದು ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ಹೇಳಿದ್ದಾರೆ.
ವಾಸ್ತವ್ಯ ಮತ್ತು ಸಾಗುವಳಿಗಾಗಿ ಕಾಲಕಾಲಕ್ಕೆ ರಾಜ್ಯ ಸರಕಾರ ಭೂ ಕಂದಾಯ ತಿದ್ದುಪಡಿ ಮಾಡಿ, ಕಂದಾಯ ಅತಿಕ್ರಮಣದಾರರಿಗೆ ಭೂಮಿ ಹಕ್ಕು ನೀಡುವ ಉದ್ದೇಶದಿಂದ, ಕಂದಾಯ ಅತಿಕ್ರಮಣದಾರರಿಂದ ವಿವಿಧ ಉದ್ದೇಶದ ಅಡಿಯಲ್ಲಿ 82,135 ಅರ್ಜಿ ಸ್ವೀಕರಿಸಿದ್ದು, ಅವುಗಳಲ್ಲಿ ಕಂದಾಯ ಅತಿಕ್ರಮಣದಾರರ 73,732 ಅರ್ಜಿಗಳು ತಿರಸ್ಕಾರವಾಗಿದ್ದು, ಕೇವಲ 6,489 ಕಂದಾಯ ಅತಿಕ್ರಮಣದಾರರಿಗೆ ಮಾತ್ರ ಸಕ್ರಮಗೊಳಿಸಿ ಮಂಜೂರಿ ನೀಡಲಾಗಿದೆ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಅವರು ಡಿಸೆಂಬರ್, 2021 ರಂದು ಪ್ರಕಟಿಸಿದ ಅಂಕೆ ಸಂಖ್ಯೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಭೂ ಕಂದಾಯ ಕಾಯಿದೆ ಅಡಿಯಲ್ಲಿ ವಿವಿಧ ನಮೂನೆಯ ನಂಬರಿನ ಅರ್ಜಿಯನ್ನು ನಗರ, ಗ್ರಾಮೀಣ, ಕಂದಾಯ ಭೂಮಿ ಅತಿಕ್ರಮಣದಾರರು ವಾಸ್ತವ್ಯ ಮತ್ತು ಸಾಗುವಳಿಯ ಉದ್ದೇಶಕ್ಕಾಗಿ ಅರ್ಜಿ ಸಲ್ಲಿಸಿದ್ದರು ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಕಂದಾಯ ಅತಿಕ್ರಮಣದಾರರ ಭೂಮಿ ಮಂಜೂರಿಗೆ ಸಂಬಂಧ ಪಟ್ಟಂತೆ, ಬಂದಂತಹ ಅರ್ಜಿಗಳಲ್ಲಿ ಕೇವಲ 6,489 ಕಂದಾಯ ಅತಿಕ್ರಮಣದಾರರಿಗೆ ಭೂಮಿ ಹಕ್ಕು ದೊರಕಿದ್ದು, ಶೇ 89.8 ರಷ್ಟು ಕಂದಾಯ ಅತಿಕ್ರಮಣದಾರರ ಅರ್ಜಿ ತಿರಸ್ಕಾರವಾಗಿ ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ಒಳಗಾಗುವ ಭೀತಿಯಲ್ಲಿದ್ದಾರೆ ಎಂದು ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.