Uttara Kannada: ಜಿ.ಟಿ.ನಾಯ್ಕರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಅಭಿಮಾನಿಗಳ ಆಗ್ರಹ
ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದು...
Team Udayavani, Oct 4, 2023, 7:43 PM IST
ಕಾರವಾರ : ಲೋಕಸಭಾ ಚುನಾವಣೆಯಲ್ಲಿ ಕೆನರಾ ಕ್ಷೇತ್ರಕ್ಕೆ ಖ್ಯಾತ ವಕೀಲ ಜಿ.ಟಿ.ನಾಯ್ಕರಿಗೆ ಟಿಕೆಟ್ ನೀಡುವಂತೆ ಜಿ.ಟಿ.ಎನ್ ಅಭಿಮಾನಿ ಬಳಗ ಆಗ್ರಹ ಕಾಂಗ್ರೆಸ್ ಪಕ್ಷವನ್ನು ಆಗ್ರಹಿಸಿದೆ.
ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಟಿ.ನಾಯ್ಕ ಅಭಿಮಾನಿ ಬಳಗದ ಶ್ರೀಕಾಂತ ಮೊಗೇರ ಅವರು , ಜಿಲ್ಲೆಯ ಖ್ಯಾತ ಹಾಗೂ ಹಿರಿಯ ವಕೀಲರೂ ಆಗಿರುವ ಜಿ.ಟಿ.ನಾಯ್ಕ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಸಮಾಜಮುಖಿ ಕಾರ್ಯ ಮಾಡುತ್ತಿರುವ ಅವರು ಹಲವು ಹೋರಾಟಗಳಲ್ಲಿ ಮುಂಚೂಣಿ ನಾಯಕರಾಗಿ, ಬಡ ಕುಟಂಬಗಳಿಗೆ ಸಹಾಯ- ಸಹಕಾರ ನೀಡಿ ನೆರವಾಗಿದ್ದಾರೆ. ಅವರಿಗೆ ಕಾನೂನಿನ ಅರಿವೂ ಇದ್ದು, ಲೋಕಸಭೆಯಲ್ಲಿ ಮಂಡನೆಯಾಗುವ ಕಾಯಿದೆಗಳಿಗೆ ಸಂಬಂಧಿಸಿ ಸಮರ್ಥ ವಾದ ಮಂಡಿಸಿಬಲ್ಲರು. ಜಿಲ್ಲೆಯ ಅಭಿವೃದ್ಧಿಗೆ ಚರ್ಚಸಿ ನೆರವಾಗಬಲ್ಲರು ಎಂದರು.
ಒಂದು ವೇಳೆ ಜಿ.ಟಿ.ನಾಯ್ಕ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಗೆಲುವು ಖಚಿತ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಜಿ.ಟಿ.ನಾಯ್ಕರು ಸಕ್ರಿಯರಾಗಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುವ ಮೂಲಕ ಪಕ್ಷ ಸಂಘಟನೆಗೂ ಒತ್ತು ನೀಡಿದ್ದಾರೆ. ಹೀಗಾಗಿ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ವಿನಾಯಕ ಹರಿಕಂತ್ರ, ವಿನಯ ಬಾನಾವಳಿ, ಕಿಶೋರ ಬಾನಾವಳಿ, ಅಜಯ, ರೋಷನ್ ಬಾನಾವಳಿ, ಸಚಿನ್ ಹರಿಕಂತ್ರ, ತೌಫೀಕ ಸಯ್ಯದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.