ವರ್ಲಿ ಕಲೆಯ ಮೋಡಿಗಾರ ರಾಮಚಂದ್ರ ಕಲಾಲ

‌ತಹಶೀಲ್ದಾರ್  ಕಾರ್ಯಾಲಯದ ಆವರಣ ಗೋಡೆ ಮೇಲೆ ಬಣ್ಣ ಬಣ್ಣದ ಚಿತ್ತಾರ

Team Udayavani, Feb 25, 2021, 5:29 PM IST

Verli art

ಮುಂಡಗೋಡ: ತಾಲೂಕಿನ ಜೋಗೇಶ್ವರ ಹಳ್ಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾದ ರಾಮಚಂದ್ರ ಕಲಾಲ ಮಹಾರಾಷ್ಟ್ರ ಮತ್ತು ರಾಜಸ್ಥಾನಿ ಶೈಲಿಯ ವರ್ಲಿ ಚಿತ್ರಕಲೆಯನ್ನು ಕರಗತ ಮಾಡಿಕೊಂಡಿರುವ ಮೋಡಿಗಾರರು.

ಇವರು ತಾಲೂಕಿನಲ್ಲಿ ಅಲ್ಲದೇ ಜಿಲ್ಲೆಯ ವಿವಿಧೆಡೆ ವರ್ಲಿ ಕಲೆಯನ್ನು ಅರಳಿಸುತ್ತಿದ್ದು ನೋಡುಗರ ಗಮನ ಸೆಳೆಯುತ್ತಿದೆ. ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸಲು ಮಕ್ಕಳ ಜ್ಞಾಪಕ ಶಕ್ತಿ ವೃದ್ಧಿಸಲು ಗಣಿತ, ವಿಜ್ಞಾನ ಮತ್ತು ಇತರೆ ವಿಷಯಗಳನ್ನು ಆಸಕ್ತಿಯಿಂದ ಕಲಿಯಲು ಮತ್ತು ಮಕ್ಕಳು ನಿರಂತರವಾಗಿ ಶಾಲೆಗೆ ಬರಲು ವರ್ಲಿ ಚಿತ್ರಕಲೆ ಸಹಾಯಕಾರಿ.

ವರ್ಲಿ ಚಿತ್ರಕಲೆಗೆ ಹೆಚ್ಚಿನ ಖರ್ಚಿಲ್ಲ. ಇದು ಕೇವಲ ರೇಖೆಗಳ ವಿನ್ಯಾಸದಿಂದ ಕಲಿಯಲು ಸಾಧ್ಯವಾಗಿದೆ. ಮೂಲತಃ ಮಹರಾಷ್ಟ್ರದ ಮತ್ತು ರಾಜಸ್ಥಾನಿ ಸಾಂಪ್ರದಾಯಿಕ ಶೈಲಿಯ ಕಲೆಯಾದರೂ ಕರ್ನಾಟಕ ಶೈಲಿಯ ಕಲೆ ಇದರಲ್ಲಿದೆ. ನಮ್ಮ ಸಾಂಪ್ರದಾಯಿಕ ಹಬ್ಬಗಳಾದ ದೀಪಾವಳಿ, ಶೀಗೆಹುಣ್ಣಿಮೆಗಳಲ್ಲಿ ಹಿಂದೆ ಜನರು ಮಣ್ಣು ಹಾಗೂ ಸುಣ್ಣದಿಂದ ಆಕರ್ಷಣೆ ಮಾಡಿ ಖುಷಿ ಪಡುತ್ತಿದ್ದರು.

ಶಿಕ್ಷಕ ರಾಮಚಂದ್ರ ನಮ್ಮ ಸಾಂಪ್ರದಾಯಿಕ ಕಲೆ ಮರೆಯಾಗಬಾರದೆಂದು ಈ ಕಲೆಯನ್ನು ಪ್ರಾಥಮಿಕ ಶಾಲಾ ಮಕ್ಕಳಿಗೆ ಸರಳೀಕರಣ ಕಲೆಯಾಗಿ ನಿರಂತರ ಕಲಿಕೆಗೆ ಆಸಕ್ತಿ ಮೂಡಿಸಲು ಬಿಡಿಸುತ್ತಿದ್ದಾರೆ. ಸದ್ಯ ತಹಶೀಲ್ದಾರ್‌ ಕಾರ್ಯಲಯ, ತಾಲೂಕಾಸ್ಪತ್ರೆ, ಎಪಿಎಂಸಿ, ಅಂಗನವಾಡಿ ಕೇಂದ್ರಗಳಲ್ಲಿ ಮತ್ತು ಕೆಲ ತಿಂಗಳ ಹಿಂದೆ ಶಿರಸಿ ಉಪನಿರ್ದೇಶಕರ ಕಾರ್ಯಲಯ, ತಾಲೂಕಿನ ಬಿಇಒ, ಬಿಆರ್‌ಸಿ, ಲೊಯೋಲಾ ಶಾಲಾ ಆವರಣ, ಜೋಗೇಶ್ವರ ಹಳ್ಳ ಕಿರಿಯ ಪ್ರಾಥಮಿಕ ಶಾಲೆ ಅಲ್ಲದೇ ಕೋವಿಡ್‌ ವೇಳೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್‌ನ‌ ಮುಂಜಾಗೃತೆ ಬಗ್ಗೆ ಚಿತ್ರಗಳನ್ನು ಬಿಡಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಇವರು ತಮ್ಮ ಬಿಡುವಿನ ವೇಳೆ ಈ ಕಲೆಯನ್ನು ರಚಿಸುತ್ತಿದ್ದಾರೆ. ಈ ಕಲೆಯನ್ನು ಶಾಲಾ ಮಕ್ಕಳು ಹೆಚ್ಚಿನ ಆಸಕ್ತಿ ವಹಿಸುವುದು ಹಾಗೂ ಪಾಲಕರಿಗೂ ಸುಲಭವಾಗಿ ತಮ್ಮ ಮಕ್ಕಳಿಗೆ ಕಲಿಸಬಹುದಾಗಿದೆ. ವರ್ಲಿ ಚಿತ್ರಕಲೆಯ ಕಲಾವಿದ ಮತ್ತು ಶಿಕ್ಷಕ ರಾಮಚಂದ್ರ ಕಲಾಲ: ವರ್ಲಿ ಚಿತ್ರಕಲೆ ಸಾಂಪ್ರದಾಯಿಕ ಕಲೆಯಾಗಿದೆ. ಇದನ್ನು ಉಳಿಸುವ ಜತೆಗೆ ಕಲೆಯ ಆಸಕ್ತಿ ಮತ್ತು ನಮ್ಮ ಮೂಲ ವೃತಿ ಉಳಿಯುವ ಸಲುವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ಹೆಚ್ಚು ಆರ್ಕಷಣೆ ಗೊಳಿಸುತ್ತದೆ. ಈ ಚಿತ್ರಣವು ಅತ್ಯಂತ ಸರಳ ಹಾಗೂ ಸುಂದರವಾಗಿದೆ. ಆಸಕ್ತ ಮಕ್ಕಳಿಗೆ ವರ್ಲಿ ಚಿತ್ರಕಲೆಯನ್ನು ಕಲಿಸುತ್ತಿದ್ದೇನೆ. ನನ್ನ ನೆಚ್ಚಿನ ವಿದ್ಯಾರ್ಥಿಗಳಾದ ಅಬ್ರಹಾಂ ರೋಣ, ದರ್ಶನ ಕಲಾಲ ಮತ್ತು ಶಶಾಂಕ ನಾಯ್ಕ ನನಗೆ ಸಹಾಯ ಮಾಡುತ್ತಿದ್ದಾರೆ. ಉಪನಿರ್ದೇಶಕರು, ಬಿಇಒ ಮತ್ತು ತಹಶೀಲ್ದಾರ್‌ ಅವರು ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದರು.

ಮುನೇಶ ಬಿ. ತಳವಾರ 

ಟಾಪ್ ನ್ಯೂಸ್

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.