![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 19, 2019, 10:41 AM IST
ಶಿರಸಿ: ಯಡಹಳ್ಳಿಯಲ್ಲಿ ನಿರ್ಮಾಣ ಮಾಡಲಾದ ತಾತ್ಪೂರ್ತಿಕ ಘಟಕ.
ಶಿರಸಿ: ನಗರದಲ್ಲಿ ಘನ ತ್ಯಾಜ್ಯ ವಿಲೇವಾರಿ ಮಾಡಲು ಅವಕಾಶವಿದೆ. ಮನೆಮನೆಯಿಂದ ಕಸ ಸಂಗ್ರಹಣೆಗೆ ಪ್ರತ್ಯೇಕ ವ್ಯವಸ್ಥೆ ಕೂಡ ಇರುತ್ತದೆ.
ಆದರೆ, ನಗರವಷ್ಟೇ ಬೆಳೆಯುತ್ತಿರುವ ಹಳ್ಳಿಯಲ್ಲೂ, ನಗರದ ಸವಲತ್ತಿಗಿಂತ ಏನು ಕಡಿಮೆ ಇಲ್ಲ. ನಗರದಲ್ಲಿ ಇರುವಂತೆ ಕಂಪ್ಯೂಟರ್ ತ್ಯಾಜ್ಯಗಳು, ಪ್ಲಾಸ್ಟಿಕ್ ತ್ಯಾಜ್ಯಗಳು ಇರುತ್ತಿದ್ದವು. ಇವನ್ನೆಲ್ಲ ಏನು ಮಾಡಬೇಕು ಎಂಬುದು ಹಳ್ಳಿಗರಿಗೆ ತಲೆ ನೋವಾಗಿತ್ತು.
ಏಕೆಂದರೆ, ಗ್ರಾಮೀಣ ಭಾಗದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಗಳೇ ಇರಲಿಲ್ಲ.
ಹೊಸ ಬೆಳವಣಿಗೆ: ನಗರದಲ್ಲಷ್ಟೇ ಅಲ್ಲದೇ ಗ್ರಾಮೀಣ ಭಾಗದಲ್ಲೂ ಘನತ್ಯಾಜ್ಯ ವಸ್ತು ವಿಲೇವಾರಿಗೆ ಘಟಕ ತೆರೆಯುವ ಪ್ರಕ್ರಿಯೆಗಳು ಆರಂಭವಾಗಿದೆ.
ತಾಲೂಕಿನಲ್ಲಿ ಈಗಾಗಲೇ ಗ್ರಾಪಂವೊಂದರಲ್ಲಿ ಘಟಕ ನಿರ್ಮಾಣ ಮಂಜೂರಿ ಹಂತದಲ್ಲಿದ್ದು ಇನ್ನೂ ಐದು ಘಟಕಗಳಿಗೆ ಪ್ರಸ್ತಾವನೆ ಸಿದ್ಧವಾಗಿದೆ. ಈ ಘಟಕ ಆಗಬೇಕಾಗಿತ್ತು, ಆಗುತ್ತಿರುವುದು ಸಂತಸ ತಂದಂತಾಗಿದೆ.
ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಇಲಾಖೆ ಯೋಜನೆಯಡಿ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕ ನಿರ್ಮಾಣಕ್ಕೆ ಹಲವು ತಿಂಗಳ ಹಿಂದೆ ಯೋಜನೆ ರೂಪಿತವಾಗಿತ್ತು. ಅದರ ಪ್ರಕಾರ ಶಿರಸಿ ತಾಲೂಕಿನ ಆರು ಗ್ರಾಪಂಗಳಲ್ಲಿ ಘನ ತ್ಯಾಜ್ಯದ ವಿಲೇವಾರಿಯ ನೂತನ ಘಟಕ ನಿರ್ಮಾಣಕ್ಕೆ ಆಯ್ಕೆ ಮಾಡಿದ್ದರು.
ಜಿಲ್ಲೆಯ 55ಕ್ಕೂ ಹೆಚ್ಚು ಗ್ರಾಪಂಗಳನ್ನು ಆಯ್ಕೆ ಮಾಡಲಾಗಿದೆ. ಪ್ರಥಮ ಹಂತದಲ್ಲಿ ಆರು ಗ್ರಾಪಂಗಳಲ್ಲಿ ನೂತನ ಘನತ್ಯಾಜ್ಯ ಘಟಕ ನಿರ್ಮಾಣದ ಪ್ರಸ್ತಾವನೆ ಇದ್ದು, ಸ್ಥಳದ ಸಮಸ್ಯೆ ಕೂಡ ಇತ್ಯರ್ಥವಾಗಿದೆ.•ಎಫ್.ಜಿ. ಚಿನ್ನಣ್ಣವರ, ತಾಪಂ ಇಒ
ಸಮಸ್ಯೆ ನಿವಾರಣೆ ಆದ್ರೆ ಸಾಕು. ಎಲ್ಲಿ ಬಾಟಲಿ, ಪ್ಲಾಸ್ಟಿಕ್ ಹಾಕಬೇಕು, ಹಾಳಾದ ಮೊಬೈಲ್ ಎಲ್ಲಿ ಬಿಸಾಕಬೇಕು ಗೊತ್ತಿರಲಿಲ್ಲ. ಹಸಿ ತ್ಯಾಜ್ಯವನ್ನು ಗೊಬ್ಬರ ಕೂಡ ಮಾಡಲಿ.•ಗಣೇಶ ಹೆಗಡೆ, ರೈತ
•ರಾಘವೇಂದ್ರ ಬೆಟ್ಟಕೊಪ್ಪ
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.