ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪಥದತ್ತ
Team Udayavani, Jul 28, 2020, 10:39 AM IST
ರಾಯಚೂರು: ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ನೇಠಿಣಿತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದ ನೇರ ಪ್ರಸಾರ ಕಾರ್ಯಕ್ರಮವನ್ನು ಜಿಪಂ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಸರರ್ಕಾರದ ಒಂದು ವರ್ಷದ ಸಾಧನೆಗೆ ಸಂಬಂಧಿಸಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ “ಸವಾಲುಗಳ ಒಂದು ವರ್ಷ ಪರಿಹಾರದ ಸ್ಪರ್ಶ’, ಜನಪದ ಹಾಗೂ ಮಾರ್ಚ್ ಆಫ್ ಕರ್ನಾಟಕ ಪುಸ್ತಕಗಳನ್ನು ಗಣ್ಯರು ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಅಭಿವೃದ್ಧಿಯಲ್ಲಿ ಹಿಂದುಳಿದಿದ್ದ ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಘೋಷಿಸಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ ಎಂದು ತಿಳಿಸಿದರು.
ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ, ಜಿಪಂ ಸಿಇಒ ಲಕ್ಷ್ಮೀ ಕಾಂತ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಿ.ಬಿ.ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ದುರಗೇಶ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ತಹಶೀಲ್ದಾರ್ ಡಾ| ಹಂಪಣ್ಣ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್.ಜಿ., ಜಿಪಂ ಉಪ ಕಾರ್ಯದರ್ಶಿ ಮಹ್ಮದ್ ಯೂಸೂಫ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್. ಎಸ್. ಅಬೀದ್, ಗ್ರಾಮೀಣ ಕುಡಿಯವ ನೀರು ಹಾಗೂ ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಗಣಪತಿ ಸಾಕರೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.