ಮರಣೋತ್ತರ ಪರೀಕ್ಷೆಗೆ ಖಾಸಗಿ ಆಸ್ಪತ್ರೆಗೆ ಕಳಿಸಿದ್ದೇಕೆ?
Team Udayavani, Dec 15, 2017, 6:15 AM IST
ಶಿರಸಿ: ಪರೇಶ್ ಮೇಸ್ತ ಮರಣೋತ್ತರ ಪರೀಕ್ಷೆಗೆ ಖಾಸಗಿ ಆಸ್ಪತ್ರೆಗೆ ಕಳಿಸಿದ್ದೇಕೆ? ಸರಕಾರಿ ಆಸ್ಪತ್ರೆ ವೈದ್ಯರಿಗೆ ಸಾಮರ್ಥ್ಯ ಇರಲಿಲ್ಲವೇ? ಇಲ್ಲಿ ಯಾರ ಒತ್ತಡಕ್ಕೆ ದಾರಿ ತಪ್ಪಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಪ್ರಶ್ನಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಸ್ತ ಅವರ ತಂದೆ ಉಸ್ತುವಾರಿ ಸಚಿವರಿಗೆ ಹಣ ವಾಪಸ್ ನೀಡಿದ್ದು ಸರಿ ಇದೆ. ಅವರು ಭಿಕ್ಷೆ ಕೇಳಿಲ್ಲ. ಅವರ ಮಗನ ಸಾವಿಗೆ ನ್ಯಾಯ ಕೇಳಿದ್ದಾರೆ. ನೆರವಾಗುವದಿದ್ದರೆ ಸರ್ಕಾರದಿಂದ ಆಗಬೇಕಿತ್ತು. ಹಿಂದು ಸಮಾಜ ಮೇಸ್ತ ಕುಟುಂಬಕ್ಕೆ ನೆರವಾಗುತ್ತದೆ. ಖಾನಾಪುರ ಟಿಕೆಟ್ ಆಕಾಂಕ್ಷಿ ನಿಂಬಾಳ್ಕರ ಅವರ ಪತಿ ಐಜಿ ಆದರೆ ನ್ಯಾಯ ಎಲ್ಲಿ ಸಿಗುತ್ತದೆ ಎಂದರು.
18ರಂದು ಹೊನ್ನಾವರಕ್ಕೆ ಬಿಜೆಪಿ ನಾಯಕರು ಆಗಮಿಸಲಿದ್ದಾರೆ. ಭ್ರಷ್ಟ ಅಧಿಕಾರಿಗಳ ಬಗ್ಗೆ ಸರಕಾರ ಕ್ರಮ ಕೈಗೊಳ್ಳಬೇಕು.
ಶಿರಸಿಯಲ್ಲೂ ಅಮಾಯಕರ ವಿರುದ್ಧವೇ ಪ್ರಕರಣ ದಾಖಲಾಗಿದೆ.
ಪೊಲೀಸರೇ ಕಲ್ಲು ತೂರಿದ, ಗಾಜು ಒಡೆದ ದಾಖಲೆಗಳಿವೆ. 307 ಪ್ರಕರಣ ದಾಖಲಿಸಿದ್ದೂ ಯಾಕೆ? ಪರೇಶ್ ಸಾವಿಗೆ ನ್ಯಾಯ ಒದಗಿಸಿಕೊಡಲು ಹಾಗೂ ಸಿಬಿಐ ತನಿಖೆಗೆ ವಹಿಸಲು ಒತ್ತಡ ಹಾಕಲು ಜಿಲ್ಲಾ ಜನತೆ ನೆರವಾಗಿದ್ದಾರೆ. ವಾರದಲ್ಲಿ ಸಿಬಿಐಗೆ ವಹಿಸಿದ ಉದಾಹರಣೆ ಬೇರೆಲ್ಲೂ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.