ಜನರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಕೆಲಸ: ಸಚಿವ ಕೋಟ ಶ್ರೀನಿವಾಸ ಪೂಜಾರಿ


Team Udayavani, Mar 17, 2023, 2:35 PM IST

ಜನರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಕೆಲಸ: ಸಚಿವ ಶ್ರೀನಿವಾಸ ಪೂಜಾರಿ

ಕಾರವಾರ (ಕುಮಟಾ): ಬಡವರ, ದಿನ ದಲಿತರ ಹಾಗೂ ಹಿಂದುಳಿದ ವರ್ಗಗಳ ಜನರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಕೆಲಸ ಮಾಡುವುದು  ಅವಶ್ಯಕತೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

ಕುಮಟಾದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳ ಸೌಲಭ್ಯ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. 1200 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ 450 ಕೋಟಿ ವೆಚ್ಚದ ಕಾಮಗಾರಿಗಳ ಶಂಕು ಸ್ಥಾಪನೆ ನೆರೆವರಿಸಿ ಅವರು, ಕರ್ನಾಟಕದ 31 ಜಿಲ್ಲಾಗಳಲ್ಲಿ ಇಂದು ಫಲಾನುಭವಿಗಳ ಸಮಾವೇಶ ನಡೆಯುತ್ತಿದ್ದು, ರಾಜ್ಯದ ಎಲ್ಲಾ ಸಮಾವೇಶಗಳಿಗಿಂತಲೂ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಫಲಾನುಭವಿಗಳ  ಸಮಾವೇಶ ಮಾಡುತ್ತಿದ್ದೇವೆ ಎಂದರು.

ಜಿಲ್ಲೆಯಲ್ಲಿ 20 ಸಾವಿರ ಫಲಾನುಭವಿಗಳಿಗೆ ಇಂದು ವಿವಿಧ ಯೋಜನೆಗಳ ಸೌಲಭ್ಯ ವನ್ನು ವಿತರಿಸು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಈಗಾಗಲೇ ಜಿಲ್ಲೆಯಲ್ಲಿ 80 ಸಾವಿರ ಕುಟುಂಬಗಳಿಗೆ ಜಲ ಜೀವನ ಮಿಷನ್ ಅಡಿ ಮನೆ ಮನೆಗೆ ಗಂಗೆ ಯೋಜನೆಯ ಮುಲಕ ನೀರಾವರಿ ವ್ಯವಸ್ಥೆಯನ್ನು ಕಳಿಸಿಕೊಡಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ರಾಜ್ಯದ 1 ಲಕ್ಷ 68 ಸಾವಿರ ಫಲಾನುಭವಿಗಳಿಗೆ 168 ಕೋಟಿ  ವೆಚ್ಚದಲ್ಲಿ ಅರ್ಜಿ ಸಲ್ಲಿಸದೆ  ಕೇಂದ್ರ ಸರ್ಕಾರದಿಂದ  ರೂ. 6000 ಹಾಗೂ ರಾಜ್ಯ ಸರ್ಕಾರದಿಂದ ರೂ 4000 ಗಳನ್ನು ಅವರ ಖಾತೆಗೆ ಜಮಾ ಮಾಡಲಾಗಿದೆ ಇದು ವಿನುತನ ಯೋಜನೆಯಾಗಿದೆ ಎಂದರು.

ಹಾಗೆಯೇ ಬೆಳಕು ಯೋಜನೆಯಡಿ ಮೂಲಕ 13000 ಕುಟುಂಬಗಳಿಗೆ ವಿದ್ಯತ್ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ರೈತ ನಿಧಿ ಯೋಜನೆಯ ಮೂಲಕ ಎಲ್ಲ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅನುದಾನ ನೀಡಿದ್ದಾರೆ ಇದರಿಂದ ಬಡ ಮಕ್ಕಳು  ಉನ್ನತ ಶಿಕ್ಷಣ ಪಡೆಯಲು  ಸಹಾಯಕರಿಯಾಗಲಿದೆ ಎಂದರು. ಜಿಲ್ಲೆಯಲ್ಲಿ 3000 ಸಾವಿರ ಶೌಚಾಲಯಗಳ್ಳನ್ನು ನಿರ್ಮಿಸಲು ಸೌಲಭ್ಯ ಕಲ್ಪಿಸಿದ್ದೇವೆ ಮುಂದಿನ ದಿನಗಳಲ್ಲಿ ಜಿಲ್ಲೆಯು ಬಯಲು ಶೌಚ ಮುಕ್ತ ಜಿಲ್ಲೆಯಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.

ಜಿಲ್ಲೆಯಲ್ಲಿ ಈ ವರೆಗೆ ಮನೆ ಇಲ್ಲದವರಿಗೆ 2000 ಮನೆಗಳನ್ನು ಮಂಜೂರು ಮಾಡಿದ್ದೇವೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದರು. ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡ 28000 ಫಲಾನುಭವಿಗಳಿಗೆ ರೂ. 50 ಸಾವಿರ ಸಬ್ಸಿಡಿಯೊಂದಿಗೆ ದ್ವಿಚಕ್ರ ವಾಹನ ನೀಡುತ್ತಿದ್ದೇವೆ ಇದು ನಿರುದ್ಯೋಗ ಯುವಕರಿಗೆ ಸ್ವಯಂ ಉದ್ಯೋಗ ಕೈಕೊಳ್ಳಲು ಸಹಾಯಕಾರಿಯಾಗಿದೆ ಎಂದರು ಹಾಗೆಯೇ ಮಹಿಳೆಯರಿಗೆ ಹೋಲಿಗೆ ಯಂತ್ರ ಪೂರೈಸುತ್ತಿದ್ದೇವೆ, ರಾಜ್ಯದ ವಿವಿಧ ಸಮುದಾಯಗಳಿಗೆ ಮಿಸಲಾತಿ ಹೆಚ್ಚಿಸಲಾಗಿದೆ. ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ  23000 ಕುಟುಂಬಗಳಿಗೆ 75 ಯೂನಿಟ್ ಉಚಿತ  ವಿದ್ಯತ್ ನೀಡಲಾಗಿದೆ ಎಂದರು ಹೀಗೆ ಸಾಕಷ್ಟು ಯೋಜನೆಯ ಮೂಲಕ ಬಡ, ದಿನ ದಲಿತರ ಏಳಿಗೆಗಾಗಿ ಸರಕಾರ ಕೆಲಸ ಮಾಡುತ್ತಿದೆ ಎಂದರು.

ಇಂಧನ ಸಚಿವ ಸುನಿಲ್ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ  ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಇಂದು ಸಾವಿರಾರು ಫಲಾನುಭವಿಗಳಿಗೆ ನೀಡುವ ಸಲುವಾಗಿ ಎಲ್ಲರನ್ನು  ಒಂದು ಕಡೆ ಸೇರಿಸಿದದ್ದೇವೆ ಎಂದರು. ಸರ್ಕಾರದಿಂದ ಜಾರಿಯಾದ ಯೋಜನೆಗಳಲ್ಲಿ  ಪ್ರತಿಷತ್ 80 ರಷ್ಟು ಯೋಜನೆಗಳನ್ನು  ಈಗಾಗಲೇ ಜನರಿಗೆ ತಲುಪಿಸಿದ್ದೇವೆ ಎಂದರು. ಸರ್ಕಾರವು  ಮಹಿಳೆಯರ ಏಳಿಗೆಗಾಗಿ  ಹಲವಾರು ಯೋಜನೆಗಳನ್ನು ನೀಡಿದೆ ಅದರಲ್ಲಿ ಮಡಿಲು ಯೋಜನೆ , ಸಂದ್ಯಾ ಸುರಕ್ಷಾ ಯೋಜನೆ,ಉಜ್ವಲ ಯೋಜನೆ,  ಹೆಣ್ಣು ಮಕ್ಕಳಿಗೆ ಸೈಕಲ್ ವಿತರಣೆ ಮುಂತಾದ ಯೋಜನೆಗಳ ಮೂಲಕ ಅವರು ಬೆಳವಣಿಗೆಗೆ  ಶ್ರಮಿಸುತ್ತಿದೆ ಎಂದರು. ಸರ್ಕಾರ ಮಾಡಿರು ಕೆಲಸವನ್ನು ಜನರಿಗೆ ತೋರಿಸಲು  ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ ಎಂದರು.

ವಿಧಾನ ಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ದೇಶಕ್ಕೆ ಸ್ವತಂತ್ರ ಬಂದಾಗ ಆಹಾರಕ್ಕಾಗಿ ಪರದಾಡುತ್ತಿದ್ದೆವು ಇಂದು ನಾವು ಸ್ವಾವಲಂಬನೆಯಾಗಿದ್ದೇವೆ. ಈ ಸಂದರ್ಭದಲ್ಲಿ ರೈತರನ್ನು ಸ್ಮರಿಸುವುದು ಅವಶ್ಯಕತೆ ಇದೆ ಎಂದರು. ಹಾಗೆಯೇ ದೇಶದಲ್ಲಿ  ಅರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತಂದಿದ್ದೇವೆ  ಜೊತೆಗೆ ಸೈನಿಕ್ ಕ್ಷೇತ್ರದಲ್ಲೂ ಸಾಕಷ್ಟು ಬದಲಾವಣೆ ತಂದಿದ್ದೇವೆ ಹೀಗಾಗಿ ಇಂದು ದೇಶದ  ಸೇನಾ ಬಲವು ಸಾಕಷ್ಟು  ಶಸಕ್ತವಾಗಿದೆ ಎಂದರು. ಜೊತೆ ಜೊತೆಗೆ ಶಿಕ್ಷಣ, ಕೈಗಾರಿಕ ಕ್ಷೇತ್ರದಲ್ಲಿ ಮಹತ್ತರ  ಬದಲಾವಣೆ ತರುವುದರ ಮೂಲಕ ಅಭಿವೃದ್ಧಿ ಪಥದತ್ತ  ದೇಶ ಸಾಗುತ್ತಿದೆ ಎಂದರು ಇಂದು ಭಾರತ ಬಲಿಷ್ಠ ರಾಷ್ಟ್ರವಾಗಿ ಎದ್ದು ನಿಂತಿದೆ ಇದಕ್ಕೆ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳೇ ಮೂಲವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕಿ ರೂಪಾಲಿ ನಾಯ್ಕ, ಭಟ್ಕಳ್ ಶಾಸಕ ಸುನಿಲ್ ನಾಯ್ಕ, ಕುಮಟಾ ಶಾಸಕ ದಿನಕರ ಶೆಟ್ಟಿ,  ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಈಶ್ವರ್ ಕಾಂದೂ, ಕುಮಟಾ ಉಪ ವಿಭಾಗಧಿಕಾರಿ  ರಾಘವೇಂದ್ರ ಜಗಲಾಸರ್, ಕುಮಟಾ ಪುರಸಭೆ ಅಧ್ಯಕ್ಷೆ ಅನುರಾಧ ಬಾಳೆರಿ,  ಹಾಗೂ ಜಿಲ್ಲಾ ಮಟ್ಟದ ಹಾಗೂ ತಾಲೂಕ ಮಟ್ಟದ  ಅಧಿಕಾರಿಗಳು  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.