ಶಿಕ್ಷಣಕ್ಕೆ ಆಧ್ಯತೆಯ ಮೇರೆಗೆ ಕೆಲಸ ಮಾಡುತ್ತಿದ್ದೇವೆ: ಶಾಸಕ ಸುನೀಲ್ ನಾಯ್ಕ
Team Udayavani, Nov 8, 2021, 4:34 PM IST
ಭಟ್ಕಳ: ಹುರುಳಿಸಾಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲಮಾಧ್ಯಮ ತರಗತಿಗೆ ಹೆಚ್ಚುವರಿಯಾಗಿ ನಿರ್ಮಾಣಗೊಂಡ ಕೊಠಡಿಯನ್ನು ಶಾಸಕ ಸುನಿಲ್ ನಾಯ್ಕ ಸೋಮವಾರ ಉದ್ಗಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರ ಶಿಕ್ಷಣಕ್ಕೆ ಹೆಚ್ಚು ಒತ್ತುಕೊಡುತ್ತಿದ್ದು ನಾನೂ ಕೂಡಾ ನನ್ನ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಆಧ್ಯತೆಯ ಮೇರೆಗೆ ಕೆಲಸ ಮಾಡುತ್ತಿದ್ದೇವೆ. ಯಾವುದೇ ಮಗುವೂ ಕೂಡಾ ಶಿಕ್ಷಣದಿಂದ ವಂಚಿತವಾಗಬಾರದು ಎನ್ನುವುದು ನನ್ನ ಉದ್ದೇಶ ಆಗಿದ್ದು ಆ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದೇನೆ. ಸರಕಾರಿ ಶಾಲೆಗಳಲ್ಲಿಯ ಶಿಕ್ಷಕರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ ಅವರು ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಸರಕಾರಿ ಶಾಲೆಗಳು ಸಾಕ್ಷಿಯಾಗಿವೆ ಎಂದು ಹೇಳಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಹಸೀಲ್ದಾರ್ ಎಸ್. ರವಿಚಂದ್ರ ಅವರು ಶಿಕ್ಷಣ ಕ್ಷೇತ್ರದಲ್ಲಿ ನಾವು ಪ್ರಗತಿಯನ್ನ ಸಾಗುತ್ತಿದ್ದು ಸರಕಾರಿ ಶಾಲೆಗಳಲ್ಲಿಯೂ ಇಂದು ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ ನೀಡುವಲ್ಲಿ ಸರಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದರು.
ಇದನ್ನೂ ಓದಿ: ವೈದಿಕ ವಿಧಿಗಳೊಂದಿಗೆ ಪುನೀತ್ ಗೆ ಕಾವೇರಿ ನದಿಯಲ್ಲಿ ತರ್ಪಣ ಬಿಟ್ಟ ವಿನೋದ್ ರಾಜ್
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಿ.ಆರ್.ಸಿ. ಯಲ್ಲಮ್ಮ, ಜಾಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಮಚಂದ್ರ ವರ್ಣೇಕರ್, ದೈಹಿಕ ಶಿಕ್ಷಣ ಪರಿವೀಕ್ಷ ಚಂದ್ರಶೇಖರ ಶೆಟ್ಟಿ ಮಾತನಾಡಿದರು.
ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀಧರ ನಾಯ್ಕ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಎಸ್. ಟಿ. ಗೊಂಡ ಸ್ವಾಗತಿಸಿದರು. ಕೋಣಾರ ಭಾಗದ ಸಿ.ಆರ್.ಪಿ. ಸುರೇಶ ಮುರ್ಡೇಶ್ವರ ನಿರೂಪಿಸಿದರು. ಸಹ ಶಿಕ್ಷಕಿ ಭಾರತಿ ನಾಯ್ಕ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.