![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 3, 2022, 7:34 AM IST
ಯಲ್ಲಾಪುರ : ತಾಲೂಕಿನ ಮಾವಿನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುರಿದ ಬಿರುಗಾಳಿ ಸಹಿತ ಗುಡುಗು , ಮಿಂಚು, ಸಿಡಿಲಿನೊಂದಿಗೆ ಸುರಿದ ಭಾರೀ ಮಳೆಗೆ ವ್ಯಾಪಕ ಹಾನಿ ಸಂಭವಿಸಿದೆ.
ಮಾವಿನಮನೆ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗೇರಾಳ ಮಜರೆಯ ರೈತರಾದ ಜಗದೀಶ್ ಶಂಕರ್ ಭಟ್ ಮತ್ತು ಸುಬ್ರಾಯ ತಿಮ್ಮಯ ಭಟ್ ಅವರಿಗೆ ಸೇರಿದ ಅಡಿಕೆ ತೋಟಗಳು ಒಂದು ಎಕರೆಗೂ ಮೇಲ್ಪಟ್ಟು ಅಡಿಕೆ ಮರಗಳು ಧರೆಗುರುಳಿವೆ. ಜೊತೆಗೆ ಹತ್ತಕ್ಕೂ ಹೆಚ್ಚು ಫಲಭರಿತ ತೆಂಗಿನ ಮರಗಳು ಮುರಿದು ಬಿದ್ದಿವೆ. ಮತ್ತೂ ತಿಮ್ಮಣ್ಣ ಗೋಪಾಲ ಭಟ್ ಅವರ ತೋಟವೂ ಸಹಿತ ಅಂದಾಜು ಒಂದು ಎಕರೆಯಷ್ಟು ಅಡಿಕೆ ಗಿಡಗಳಿಗೆ ಹಾನಿ ಆಗಿವೆ. ಅದರಂತೆ ಗಣಪತಿ ತಿಮ್ಮಯ್ಯ ಭಟ್ ರವರ ಮನೆಯ ಮೇಲ್ಚಾವಣಿಗೆ ಹೊದಿಸಿದ ನೂರಾರು ಹೆಂಚುಗಳು, ಸಿಮೆಂಟ್ ಶೀಟುಗಳು ಹಾರಿ ಹೋಗಿದ್ದು ಅಡಿಕೆ ತೋಟವೂ ಸಹಿತ ಭಾಗಶಃ ಹಾನಿಗೊಳಗಾಗಿದೆ.
ಘಟನೆ ನಡೆದ ಸ್ಥಳಕ್ಕೆ ಕಂದಾಯ ಇಲಾಖೆಯಿಂದ ಗ್ರಾಮ ಲೆಕ್ಕಾಧಿಕಾರಿಗಳಾದ ಈಶ್ವರ ಪಟಗಾರ ಭೇಟಿ ನೀಡಿ ಪಂಚನಾಮೆ ಮಾಡಿದ್ದಾರೆ.
ಮಾವಿನಮನೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಬ್ಬಣ್ಣ ಕುಂಟೆಕಳಿ ಹಾನಿಯಾದ ರೈತರ ಮನೆಗೆ ತೆರಳಿ ಹಾನಿಗೊಳಗಾದ ತೋಟವನ್ನು ಪರಿಶೀಲಿಸಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.