ಸಂತೆ ಸುರಕ್ಷತೆ ಪರಿಶೀಲಿಸಿದ ಪಿಎಸ್‌ಐ
ಕುಡಿಯುವ ನೀರು-ಶೌಚಾಲಯ ವ್ಯವಸ್ಥೆಗೆ ವ್ಯಾಪಾರಸ್ಥರ ಒತ್ತಾಯ
Team Udayavani, Dec 6, 2019, 12:55 PM IST
ವಾಡಿ: ಪಟ್ಟಣದಲ್ಲಿ ನಡೆಯುವ ವಾರದ ಸಂತೆಗೆ ಬರುವ ವಿವಿಧ ಗ್ರಾಮಗಳ ತರಕಾರಿ ವ್ಯಾಪಾರಿಗಳಿಗೆ ಪುರಸಭೆ ಅಧಿಕಾರಿಗಳು ಮತ್ತು ಸ್ಥಳೀಯರು ನೀಡುವ ಕಿರಿಕಿರಿ ಪ್ರಸಂಗ ಮುಂದುವರಿದಿದ್ದು, ಈ ಗುರುವಾರವೂ ವ್ಯಾಪಾರಿಗಳು ಕೂಡಲು ಸ್ಥಳಾವಕಾಶಕ್ಕಾಗಿ ಪರದಾಡಿದ ಘಟನೆ ನಡೆಯಿತು.
ಗುರುವಾರ ಬೆಳಗ್ಗೆ ವಿವಿಧೆಡೆಯಿಂದ ತರಕಾರಿ ಗಂಟುಗಳೊಂದಿಗೆ ಮಾರುಕಟ್ಟೆಗೆ ಬಂದವರು ತಮಗೆ ಅನುಕೂಲವಾದ ಸ್ಥಳದಲ್ಲಿ ಕುಳಿತು ವ್ಯಾಪಾರಕ್ಕೆ ಅಣಿಯಾಗುತ್ತಿದ್ದರು. ಎಂದಿನಂತೆ ಇಲ್ಲಿನ ಭೀಮನಗರ-ಅಂಬೇಡ್ಕರ್ ವೃತ್ತ ಮಾರ್ಗದ ರಸ್ತೆ ಬೀದಿಯಲ್ಲಿ ತರಕಾರಿ ವ್ಯಾಪಾರಕ್ಕೆ ಕೂಡಲು ಸ್ಥಳೀಯ ವ್ಯಾಪಾರಿಗಳು ಅವಕಾಶ ನೀಡದೇ ಜಗಳ ನಡೆಸುತ್ತಿದ್ದ ಪ್ರಸಂಗ ಕಂಡುಬಂದಿತು.
ದೊಡ್ಡ ವ್ಯಾಪಾರಿಗಳು ಸ್ಥಳ ಕಬಳಿಸುವ ಮೂಲಕ ಚಿಲ್ಲರೆ ವ್ಯಾಪಾರಿಗಳನ್ನು ಹೆದರಿಸಿ ಓಡಿಸುವ ಕೃತ್ಯಕ್ಕೆ ಮುಂದಾಗಿದ್ದರಿಂದ ಹೊರ ಊರಿನ ತರಕಾರಿ ವರ್ತಕರು ದಿಕ್ಕು ಕಾಣದೆ ಚಿಂತೆಗೀಡಾಗಿದ್ದರು. ಪುರಸಭೆಯ ಪೌರಕಾರ್ಮಿಕರು ಬಂದು ಆಜಾದ್ ವೃತ್ತದ ರಸ್ತೆಯಲ್ಲಿ ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡಿದ್ದರಿಂದ ಎಲ್ಲಿಗೆ ಹೋಗಬೇಕು ಎಂಬುದೇ ತಿಳಿಯುತ್ತಿಲ್ಲ. ಪ್ರತಿ ಗುರುವಾರ ಇದೇ ಕಿರಿಕಿರಿಯಾಗಿದೆ ಎಂದು ವ್ಯಾಪಾರಿಗಳು ಮಾಧ್ಯಮದವರ ಎದುರು ಅಳಲು ತೋಡಿಕೊಂಡರು.
ಇದೇ ವೇಳೆ ಸಂತೆ ನಡೆಯುವ ಸ್ಥಳಕ್ಕಾಗಮಿಸಿ ವ್ಯಾಪಾರದ ಬೀದಿಗಳನ್ನು ಪರಿಶೀಲಿಸಿದ ವಾಡಿ ಪೊಲೀಸ್ ಠಾಣೆ ಅಪರಾಧ ವಿಭಾಗದ ಪಿಎಸ್‌ಐ ಗಂಗಮ್ಮಾ, ಬೀದಿ ಸ್ಥಳಕ್ಕಾಗಿ ಕಾದಾಡುವವರನ್ನು ಎಚ್ಚರಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಇಕ್ಕಟ್ಟಾದ ಗಲ್ಲಿ ರಸ್ತೆಯಲ್ಲಿ ನಡೆಯುತ್ತಿದ್ದ ಸಂತೆ ಮಾರ್ಗದಲ್ಲಿ ಸಂಚರಿಸುವ ಮೂಲಕ ಜೇಬುಗಳ್ಳರು ಮತ್ತು ಮೊಬೈಲ್ ಕಳ್ಳರಿಂದ ಎಚ್ಚರದಿಂದಿರಿ. ಕಳ್ಳರು ಕಂಡುಬಂದರೆ ತಕ್ಷಣ ಠಾಣೆಗೆ ಮಾಹಿತಿ ಕೊಡಿ. ಯಾವುದೇ ಕಾರಣಕ್ಕೂ ವ್ಯಾಪಾರಿಗಳು ಸ್ಥಳಾವಕಾಶಕ್ಕಾಗಿ ಕಾದಾಡಬಾರದು.
ಎಲ್ಲರಿಗೂ ವ್ಯಾಪಾರ ಮಾಡಲು ಅವಕಾಶವಿದ್ದು, ಸಹಕರಿಸಿಕೊಂಡು ಹೋಗಿರಿ ಎಂದು ತಾಕೀತು ಮಾಡಿದರು. ವಾರದ ಸಂತೆಯೊಳಗೆ ವಾಹನಗಳು ಬರದಂತೆ ಸುರಕ್ಷತೆ ಒದಗಿಸಲಾಗುವುದು. ಸಂತೆ ನಡೆಯುವ ಕಾರಣಕ್ಕೆ ಪ್ರತಿ ಗುರುವಾರ ಒಂದು ದಿನ ಮಾತ್ರ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಚೌಕ್
ಮತ್ತು ಅಂಬೇಡ್ಕರ್ ವೃತ್ತದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನಗಳ ಮಾರ್ಗ ಬಸವೇಶ್ವರ ವೃತ್ತದತ್ತ ಬದಲಿಸುವ ಕುರಿತು ಯೋಚಿಸುವುದಾಗಿ ಪಿಎಸ್‌ಐ ಗಂಗಮ್ಮಾ ಹಣ್ಣು-ತರಕಾರಿ ವ್ಯಾಪಾರಿಗಳಿಗೆ ತಿಳಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪುರಸಭೆ ಸದಸ್ಯ ಬಿಜೆಪಿಯ ಭೀಮಶಾ ಜಿರೊಳ್ಳಿ, ಕೊಲಿ ಸಮಾಜದ ಅಧ್ಯಕ್ಷ ನಾಗೇಂದ್ರ ಜೈಗಂಗಾ ಹಾಗೂ ಮಾನವ ಬಂಧುತ್ವ ವೇದಿಕೆಯ ತಾಲೂಕು ಅಧ್ಯಕ್ಷ ಶ್ರವಣಕುಮಾರ ಮೌಸಲಗಿ, ವಾಡಿಯಲ್ಲಿ ವಾರದ ಸಂತೆಗೆ ಸೂಕ್ತವಾದ ಸ್ಥಳವಿಲ್ಲ. ಗಲ್ಲಿ ರಸ್ತೆಗಳ ಬೀದಿಯಲ್ಲಿ ತರಕಾರಿ ಸಂತೆ ನಡೆಯುತ್ತಿದೆ.
ಹೊರಗಿನಿಂದ ಬರುವ ವ್ಯಾಪಾರಿಗಳಿಗೆ ಪುರಸಭೆ ಅಧಿಕಾರಿಗಳು ಕಿರಿಕಿರಿ ನೀಡುತ್ತಿದ್ದಾರೆ. ಕೆಲ ಸ್ಥಳೀಯ ವ್ಯಾಪಾರಿಗಳು ಅಧಿಕಾರಿಗಳ ಮೂಲಕ ಪರ ಊರಿನಿಂದ ಬರುವ ವ್ಯಾಪಾರಿಗಳ ಗಂಟುಮೂಟೆಗಳನ್ನು ಜಪ್ತಿ ಮಾಡಿಕೊಂಡು ಹೋಗುತ್ತಿದ್ದಾರೆ.
ಈ ದೌರ್ಜನ್ಯ ನಿಲ್ಲಬೇಕು. ಸಂತೆಗೆ ಪೊಲೀಸ್ ಭದ್ರತೆ ಒದಗಿಸಬೇಕು. ಮಾರುಕಟ್ಟೆಗೆ ವಾಹನಗಳು ಬರದಂತೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರು ಮತ್ತು ಶೌಚಾಲಯದಂತಹ ಮೂಲಭೂತ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ಬೇಡಿಕೆ ಈಡೇರಿಸುವಲ್ಲಿ ನಿರ್ಲಕ್ಷಿಸಿದರೇ ತರಕಾರಿಯೊಂದಿಗೆ ಬೀದಿಯಲ್ಲಿ ಕುಳಿತು ಪ್ರತಿಭಟಿಸುವುದಾಗಿ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.