ಅವಳಿ ಜಿಲ್ಲೆಯಲ್ಲಿ ಎಎಪಿ ಸಂಘಟನೆಗೆ ಬಲ
ರಾಜ್ಯದಲ್ಲೂ ಆಮ್ ಆದ್ಮಿ ಪಕ್ಷಕ್ಕೆ ಜನರ ಒಲವು: ಯುವಘಟಕದ ರಾಜ್ಯಾಧ್ಯಕ್ಷ ಮುಕುಂದಗೌಡ
Team Udayavani, Apr 4, 2022, 4:27 PM IST
ಹೊಸಪೇಟೆ: ಅರವಿಂದ ಕೇಜ್ರಿವಾಲ್ ಅವರ ದೆಹಲಿ ಹಾಗೂ ಪಂಜಾಬ್ ಮಾದರಿ ಆಡಳಿತವನ್ನು ಮೆಚ್ಚಿಕೊಂಡಿರುವ ದೇಶದ ಜನ ರಾಜ್ಯದಲ್ಲಿ ಕೂಡ ಆಮ್ ಆದ್ಮಿ ಪಕ್ಷದ ಕಡೆ ಒಲವು ತೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಬಲ ಪಡಿಸಲಾಗುವುದು ಎಂದು ಆಮ್ ಆದ್ಮಿ ಯುವಘಟಕದ ರಾಜ್ಯಾಧ್ಯಕ್ಷ ಮುಕುಂದಗೌಡ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ವಿರೋಧ ನಿಲುವು ಹೊಂದಿರುವ ಎಎಪಿ ದೇಶದ ಭವಿಷ್ಯದ ಆಶಾಕಿರಣವಾಗಿದೆ. ಪಕ್ಷದ ಕಾರ್ಯ ಸಿದ್ಧಾಂತಗಳನ್ನು ಮೆಚ್ಚಿಕೊಂಡು ಯುವಜನರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಎರಡು ದಿನಗಳ ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ವಾಸ್ತವ್ಯ ಹೂಡಿ, ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲಾಗುವುದು.
ಈ ದಿನಗಳಲ್ಲಿ ಆಸಕ್ತರು ನನ್ನನ್ನು ಭೇಟಿಯಾಗಿ ಪಕ್ಷ ಸೇರುವುದು ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚೆ ನಡೆಸಬಹುದು ಎಂದು ಮಾಹಿತಿ ನೀಡಿದರು.
ಕರ್ನಾಟಕದಲ್ಲಿ ಕಳೆದ ನಗರಸಭೆ ಚುನಾವಣೆಯಲ್ಲಿ ಹೊಸಪೇಟೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಪಕ್ಷ ಖಾತೆ ತೆಗಿದಿದೆ. ಆದರೆ ಪಕ್ಷದಿಂದ ಗೆದ್ದ ಅಭ್ಯರ್ಥಿ ಪಕ್ಷಬಿಟ್ಟು ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಅನ್ಯ ಪಕ್ಷಗಳಿಂದ ಪಕ್ಷಕ್ಕೆ ಬರುವ ಅಭ್ಯರ್ಥಿಗಳನ್ನು ಕೂಲಂಕಷವಾಗಿ ವಿಚಾರಿಸಿ ಬರಮಾಡಿಕೊಳ್ಳಲಾಗುವುದು. ಪಕ್ಷಂತರ ಕುರಿತು ಎಚ್ಚರಿಕೆಯ ಹೆಜ್ಜೆ ಇಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪಕ್ಷದ ರುಣ್ ಶೇಕ್ ಹಾಗೂ ಶಬ್ಬೀರ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
“ಟೋಲ್‌ಗಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.